IND vs AUS 1st T20I: ಪಂದ್ಯಕ್ಕೆ ಮಳೆಯ ಆತಂಕ! ಭಾರತ- ಆಸೀಸ್ ಟಿ20 ಕಾಳಗದಲ್ಲಿ ಯಾರು ಬಲಿಷ್ಠ?

India vs Australia, 1st T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂ ಮೈದಾನದಲ್ಲಿ ನಡೆಯಲಿದೆ. 2023ರ ಏಕದಿನ ವಿಶ್ವಕಪ್‌ ಫೈನಲ್‌ ಬಳಿಕ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಟೀಂ ಇಂಡಿಯಾ ಅಖಾಡಕ್ಕಿಳಿಯಲ್ಲಿದೆ.

IND vs AUS 1st T20I: ಪಂದ್ಯಕ್ಕೆ ಮಳೆಯ ಆತಂಕ! ಭಾರತ- ಆಸೀಸ್ ಟಿ20 ಕಾಳಗದಲ್ಲಿ ಯಾರು ಬಲಿಷ್ಠ?
ವಿಶಾಖಪಟ್ಟಣಂ ಪಿಚ್, ಹವಾಮಾನ ವರದಿ
Follow us
|

Updated on:Nov 22, 2023 | 1:18 PM

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂ (Vishakapatnam) ಮೈದಾನದಲ್ಲಿ ನಡೆಯಲಿದೆ. 2023ರ ಏಕದಿನ ವಿಶ್ವಕಪ್‌ ಫೈನಲ್‌ ಬಳಿಕ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಟೀಂ ಇಂಡಿಯಾ ಅಖಾಡಕ್ಕಿಳಿಯಲ್ಲಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಸ್ಟಾರ್ ಆಟಗಾರರಿಗೆ ಭಾರತ ತಂಡದಿಂದ ವಿಶ್ರಾಂತಿ ನೀಡಲಾಗಿದ್ದು, ಹಲವು ಯುವ ಆಟಗಾರರಿಗೆ ಅವಕಾಶ ಮಾಡಿಕೊಡಲಾಗಿದೆ. ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಅವರಿಗೆ ನೀಡಲಾಗಿದ್ದು, ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಅಟ್ಟರ್ ಫ್ಲಾಪ್ ಆಗಿದ್ದ ಸೂರ್ಯ ಯಾವ ರೀತಿ ತಂಡವನ್ನು ಮುನ್ನಡೆಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಮೊದಲ ಟಿ20 ಪಂದ್ಯ ನಡೆಯಲ್ಲಿರುವ ವಿಶಾಖಪಟ್ಟಣಂ ಪಿಚ್ ಯಾರಿಗೆ ಹೆಚ್ಚು ಸಹಕಾರಿ? ಹವಾಮಾನ ವರದಿ ಏನು ಹೇಳುತ್ತದೆ ಎಂಬುದನ್ನು ನೋಡುವುದಾದರೆ..

ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿ

ವಿಶಾಖಪಟ್ಟಣಂ ಮೈದಾನದ ಪಿಚ್ ಯಾವಾಗಲೂ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದು ಪರಿಗಣಿಸಲ್ಪಟ್ಟಿದೆ. ಇಲ್ಲಿ ಬ್ಯಾಟ್ಸ್‌ಮನ್‌ಗಳು ಸಾಕಷ್ಟು ರನ್ ಗಳಿಸುತ್ತಾರೆ. ಹೀಗಿರುವಾಗ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಹೆಚ್ಚಿನ ಸ್ಕೋರಿಂಗ್ ಕಾಣಬಹುದಾಗಿದೆ. ಎರಡೂ ತಂಡಗಳು ಅಂತಹ ಆಟಗಾರರನ್ನು ಹೊಂದಿದ್ದು, ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮಥ್ಯ್ರವನ್ನು ಉಭಯ ತಂಡಗಳ ಆಟಗಾರರು ಹೊಂದಿದ್ದಾರೆ.

ಈ ದೇಶದ ವಿರುದ್ಧ ಇದೇ ಮೊದಲ ಬಾರಿಗೆ ಟಿ20 ಸರಣಿ ಆಡಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟ

ಪ್ರಭಾವ ಬೀರಲಿದೆ ಟಾಸ್‌

ವಿಶಾಖಪಟ್ಟಣಂ ಮೈದಾನದಲ್ಲಿ ಇದುವರೆಗೆ ಮೂರು ಟಿ20 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 2ರಲ್ಲಿ ಜಯ ಸಾಧಿಸಿದೆ. ಈ ಮೈದಾನದಲ್ಲಿ ಗುರಿ ಬೆನ್ನಟ್ಟಿದ ತಂಡ ಎರಡು ಬಾರಿ ಗೆದ್ದಿದೆ. ಅಂತಹ ಪರಿಸ್ಥಿತಿಯಲ್ಲಿ, ಟಾಸ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಯಾವ ನಾಯಕ ಟಾಸ್ ಗೆಲ್ಲುತ್ತಾನೋ ಆತ ಮೊದಲು ಬೌಲ್ ಮಾಡುವ ಸಾಧ್ಯತೆಗಳು ಹೆಚ್ಚಿವೆ. 2016ರಲ್ಲಿ ಭಾರತ ತನ್ನ ಮೊದಲ ಟಿ20ಐ ಪಂದ್ಯವನ್ನು ಇಲ್ಲಿ ಆಡಿತ್ತು. ಆಗ ಭಾರತ ಶ್ರೀಲಂಕಾವನ್ನು 9 ವಿಕೆಟ್‌ಗಳಿಂದ ಸೋಲಿಸಿತ್ತು.

ಮುಖಾಮುಖಿ ವರದಿ

ಇಲ್ಲಿಯವರೆಗೆ, ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 26 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ 10 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇನ್ನು ಭಾರತ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 6 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ 4 ಪಂದ್ಯಗಳನ್ನು ಗೆದ್ದಿದೆ.

ಹವಾಮಾನ ವರದಿ

ಅಕ್ಯುವೆದರ್ ಪ್ರಕಾರ ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಶೇ.60 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಸಂಜೆ 7 ರಿಂದ 10:30ವರೆಗೆ ಆಟದ ಸಮಯದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಆಟ ಪ್ರಾರಂಭವಾಗುವ ಮೊದಲು ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಉಭಯ ತಂಡಗಳು

ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ), ಆರನ್ ಹಾರ್ಡಿ, ಜೇಸನ್ ಬೆಹ್ರೆನ್‌ಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವಿರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಕೇನ್ ರಿಚರ್ಡ್‌ಸನ್, ಆಡಮ್ ಝಂಪಾ.

ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:16 pm, Wed, 22 November 23

ತಾಜಾ ಸುದ್ದಿ
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು