IND vs AUS 1st Test: ಭಾರತ-ಆಸ್ಟ್ರೇಲಿಯಾ ನಡುವಣ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ನಾಗ್ಪುರ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದೀಗ ವಿದರ್ಭಗೆ ಆಗಮಿಸಿರುವ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪಿಚ್ ಬಗ್ಗೆ ಅಸಮಾಧಾನವನ್ನು ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ಪಂದ್ಯದ ಆರಂಭಕ್ಕೂ 2 ದಿನ ಮುಂಚಿತವಾಗಿ ಉಭಯ ತಂಡಗಳು ವಿಸಿಎ ಸ್ಟೇಡಿಯಂನಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ರಾಹುಲ್ ದ್ರಾವಿಡ್ ಪಿಚ್ ಅನ್ನು ಪರಿಶೀಲಿಸಿದ್ದಾರೆ. ಅಲ್ಲದೆ ಪಿಚ್ನ ಮೇಲ್ಮೈ ಬಗ್ಗೆ ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಹೊಸ ಪಿಚ್ ಅನ್ನು ತಯಾರಿಸಲು ಕ್ಯುರೇಟರ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಸೂಚಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಟೆಸ್ಟ್ ಕ್ರಿಕೆಟ್ನ ರೋಚಕತೆಯನ್ನು ಹೆಚ್ಚಿಸಲು 5 ದಿನಗಳ ಕಾಲ ಪಂದ್ಯ ನಡೆಯುವಂತಹ ಪಿಚ್ಗಳನ್ನು ಸಿದ್ಧಪಡಿಸಲು ಈಗಾಗಲೇ ಬಿಸಿಸಿಐ ಸೂಚಿಸಿದೆ. ಇದಾಗ್ಯೂ ತವರಿನ ತಂಡದ ಅನುಕೂಲವನ್ನು ಕೂಡ ಇಲ್ಲಿ ಪರಿಗಣಿಸಲಾಗುತ್ತದೆ. ಆದರೆ ಪ್ರಸ್ತುತ ನಾಗ್ಪುರದಲ್ಲಿ ಸಿದ್ಧಪಡಿಸಲಾಗಿರುವ ಪಿಚ್ ಮೇಲ್ಮೈಯನ್ನು ಪರಿಶೀಲಿಸಿರುವ ಮಾಜಿ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ ಹೊಸ ಪಿಚ್ ತಯಾರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ತಿಳಿದು ಬಂದಿದೆ.
ಭಾರತ-ಆಸ್ಟ್ರೇಲಿಯಾ ನಡುವಣ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಇದೇ ಗುರುವಾರದಿಂದ ಶುರುವಾಗಲಿದೆ. ಮೊದಲ ಪಂದ್ಯವು ವಿದರ್ಭದಲ್ಲಿ ನಡೆದರೆ, ಎರಡನೇ ಪಂದ್ಯಕ್ಕೆ ದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಮೂರನೇ ಪಂದ್ಯವು ಧರ್ಮಶಾಲದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಹಾಗೂ ನಾಲ್ಕನೇ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಇತ್ತ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಮೇಲುಗೈ ಸಾಧಿಸಲು ಉಭಯ ತಂಡಗಳು ಪ್ಲ್ಯಾನ್ ರೂಪಿಸಿದೆ. ಹೀಗಾಗಿ ನಾಗ್ಪುರ ಮೈದಾನದಿಂದಲೇ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.