IND vs AUS 2023: ಟೀಮ್ ಇಂಡಿಯಾಗೆ ರವೀಂದ್ರ ಜಡೇಜಾ ಕಂಬ್ಯಾಕ್

India vs Australia Test: ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 4 ಪಂದ್ಯಗಳನ್ನು ಆಡಲಿದೆ.

IND vs AUS 2023: ಟೀಮ್ ಇಂಡಿಯಾಗೆ ರವೀಂದ್ರ ಜಡೇಜಾ ಕಂಬ್ಯಾಕ್
Ravindra Jadeja
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 05, 2023 | 11:03 PM

ಏಷ್ಯಾಕಪ್​ 2022 ರ ವೇಳೆ ಗಾಯಗೊಂಡಿದ್ದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಇದೀಗ 5 ತಿಂಗಳ ಬಳಿಕ ಮತ್ತೆ ಟೀಮ್ ಇಂಡಿಯಾ (Team India) ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇದರ ನಡುವೆ ಜಡ್ಡು ಮಿಸ್ ಮಾಡಿಕೊಂಡಿದ್ದು, ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​. ಈ ಎರಡು ಪ್ರಮುಖ ಟೂರ್ನಿಗಳಿಂದ ಹೊರಗುಳಿದಿದ್ದ ಜಡೇಜಾ ಇದೀಗ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುತ್ತಿರುವುದು ವಿಶೇಷ. ಏಷ್ಯಾಕಪ್​ ವೇಳೆ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದ ಜಡೇಜಾ ಕೆಲ ತಿಂಗಳ ಹಿಂದೆಯಷ್ಟೇ ಸಂಪೂರ್ಣವಾಗಿ ಫಿಟ್ ಆಗಿದ್ದರು. ಇದಾಗ್ಯೂ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯಬೇಕಿದ್ದರೆ ಫಿಟ್​ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಸೂಚಿಸಿತ್ತು.

ಅದರಂತೆ ರಣಜಿ ಟೂರ್ನಿಯಲ್ಲಿ ಸೌರಾಷ್ಟ್ರ ಪರ ಕಣಕ್ಕಿದಿದ್ದ ಜಡ್ಡು ತಮಿಳುನಾಡು ವಿರುದ್ಧ 7 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದರು. ಅಲ್ಲದೆ ಫೀಲ್ಡಿಂಗ್, ಬ್ಯಾಟಿಂಗ್​ನಲ್ಲೂ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಗಮನ ಸೆಳೆದಿದ್ದರು. ಅದರಂತೆ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಜಡೇಜಾಗೆ ಸ್ಥಾನ ನೀಡಲಾಗಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾದ ಅಭ್ಯಾಸ ಶಿಬಿರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದೀಗ ಐದು ತಿಂಗಳ ಬಳಿಕ ಟೀಮ್ ಇಂಡಿಯಾವನ್ನು ಕೂಡಿಕೊಂಡಿರುವ ಬಗ್ಗೆ ಮಾತನಾಡಿರುವ ಜಡೇಜಾ, ಮತ್ತೊಮ್ಮೆ ಭಾರತ ತಂಡದ ಜೆರ್ಸಿ ಧರಿಸುತ್ತಿರುವುದು ಖುಷಿ ನೀಡಿದೆ. ಐದು ತಿಂಗಳ ನಂತರ ಮತ್ತೆ ಟೀಮ್ ಇಂಡಿಯಾದಲ್ಲಿ ಜೆರ್ಸಿಯಲ್ಲಿ ಕಣಕ್ಕಿಳಿಯಲು ಉತ್ಸುಕನಾಗಿದ್ದೇನೆ. ಈ ಅವಕಾಶ ಮರಳಿ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಭಾವಿಸುವೆ ಎಂದು ರವೀಂದ್ರ ಜಡೇಜಾ ಹೇಳಿದ್ದಾರೆ.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಕ್ರಿಕೆಟ್ ಜೀವನದಲ್ಲಿ ಏರಿಳಿತಗಳಿರುತ್ತವೆ. ಇದರ ನಡುವೆ ಮತ್ತೆ ಟೀಮ್ ಇಂಡಿಯಾ ಪರ ಆಡಬಹುದೆಂಬ ನಿರೀಕ್ಷೆಯಲ್ಲಿದ್ದೆ. ಏಕೆಂದರೆ ಐದಾರು ತಿಂಗಳು ಮೈದಾನದಿಂದ ಹೊರಗುಳಿಯುವುದು ಕಷ್ಟಕರ. ಈ ಸಮಯದಲ್ಲಿ ಮನಸ್ಸಿನಲ್ಲಿ ವಿಭಿನ್ನ ಆಲೋಚನೆಗಳು ಬರುತ್ತವೆ. ಅದರಲ್ಲೂ ಟೀಮ್ ಇಂಡಿಯಾ ವಿಶ್ವಕಪ್​ನಲ್ಲಿ ಆಡುವಾಗ ನಾವು ಹೊರಗುಳಿದಿರುವುದು ಬೇಸರ ಮೂಡಿಸುತ್ತದೆ.

ತಂಡದಲ್ಲಿ ನಾನಿಲ್ಲ ಎಂಬ ವಿಷಯಗಳೂ ಕೂಡ ಶೀಘ್ರದಲ್ಲೇ ಫಿಟ್​ ಆಗಲು ನಮ್ಮನ್ನು ಪ್ರೇರೇಪಿಸುತ್ತವೆ. ಎನ್‌ಸಿಎಯ ಫಿಸಿಯೋಗಳು ಮತ್ತು ತರಬೇತುದಾರರಿಂದ ನನಗೆ ಉತ್ತಮ ಬೆಂಬಲ ಕೂಡ ಸಿಕ್ಕಿತು. ಅವರು ತಮ್ಮ ಬಿಡುವಿನ ವೇಳೆಯಲ್ಲಿಯೂ ನನ್ನ ಬಗ್ಗೆ ಕಾಳಜಿವಹಿಸಿಕೊಂಡರು. ಅಲ್ಲದೆ ಶೀಘ್ರದಲ್ಲೇ ಚೇತರಿಸಿಕೊಳ್ಳಲು ಸಹಾಯ ಮಾಡಿದರು ಎಂದು ಜಡೇಜಾ ಸ್ಮರಿಸಿದರು.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ 7 ಬ್ಯಾಟ್ಸ್​ಮನ್​ಗಳ ಪಟ್ಟಿ ಇಲ್ಲಿದೆ

ಇನ್ನು ಗಾಯದ ನಂತರದ ಎರಡು ತಿಂಗಳು ನನಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲಿಯೂ ಹೊರಗೆ ಹೋಗಲು ಸಾಧ್ಯವಾಗದೆ ಅತ್ಯಂತ ಕಷ್ಟಕರವಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ಸ್ನೇಹಿತರು ಮತ್ತು ಕುಟುಂಬ ಜೊತೆಗಿದ್ದರು. ನನ್ನ ಗಾಯದ ನೋವುಗಳನ್ನು ತೋಡಿಕೊಳ್ಳುತ್ತಿದ್ದರೆ, ಎನ್‌ಸಿಎ ತರಬೇತುದಾರರು ನಿನಗಾಗಿ ಅಲ್ಲ, ದೇಶಕ್ಕಾಗಿ ಫಿಟ್ ಆಗಬೇಕೆಂದು ಪ್ರೇರೆಪಿಸುತ್ತಿದ್ದರು. ಇವರೆಲ್ಲರ ಸಹಕಾರದಿಂದ ಇದೀಗ ಮತ್ತೆ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ನಾನು ಉತ್ಸುಕನಾಗಿದ್ದೇನೆ ಎಂದು ರವೀಂದ್ರ ಜಡೇಜಾ ಹೇಳಿದ್ದಾರೆ.

ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ .

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ