AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಡಿಲೇಡ್ ಪಂದ್ಯಕ್ಕೂ ಮಳೆ ಅಡ್ಡಿ? ಇಲ್ಲಿದೆ ಹವಾಮಾನ ವರದಿ

IND vs AUS 2nd ODI Adelaide: ಭಾರತ vs ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಅಕ್ಟೋಬರ್ 23, 2025 ರಂದು ಅಡಿಲೇಡ್‌ನಲ್ಲಿ ನಡೆಯಲಿದೆ. ಸರಣಿಯಲ್ಲಿ 0-1 ಹಿನ್ನಡೆಯಾಗಿರುವ ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು, ಆದರೆ ಅಡಿಲೇಡ್‌ನಲ್ಲಿ ಮಳೆಯ ಆತಂಕವಿಲ್ಲ. ಪಿಚ್ ವರದಿ, ಹವಾಮಾನ, ಮುಖಾಮುಖಿ ದಾಖಲೆಗಳು ಮತ್ತು ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

IND vs AUS: ಅಡಿಲೇಡ್ ಪಂದ್ಯಕ್ಕೂ ಮಳೆ ಅಡ್ಡಿ? ಇಲ್ಲಿದೆ ಹವಾಮಾನ ವರದಿ
Ind Vs Aus 2nd Odi
ಪೃಥ್ವಿಶಂಕರ
|

Updated on:Oct 22, 2025 | 9:28 PM

Share

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ನಡೆಯುತ್ತಿರುವ ಏಕದಿನ ಸರಣಿಯ ಎರಡನೇ ಪಂದ್ಯವು ಗುರುವಾರ, ಅಕ್ಟೋಬರ್ 23, 2025 ರಂದು ಐತಿಹಾಸಿಕ ಅಡಿಲೇಡ್ (Adelaide) ಓವಲ್‌ನಲ್ಲಿ ನಡೆಯಲಿದೆ. ಸರಣಿಯಲ್ಲಿ 0-1 ಹಿನ್ನಡೆಯಲ್ಲಿರುವ ಭಾರತ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಭಾರತ ತಂಡವು ಮೊದಲ ಪಂದ್ಯವನ್ನು ಏಳು ವಿಕೆಟ್‌ಗಳಿಂದ ಸೋತಿತು. ಹೀಗಾಗಿ ಗಿಲ್ ಪಡೆ ಸರಣಿಯಲ್ಲಿ ಉಳಿಯಬೇಕಾದರೆ ಗೆಲುವು ಅತ್ಯಗತ್ಯ. ವಾಸ್ತವವಾಗಿ ಮೊದಲ ಪಂದ್ಯದಲ್ಲಿ ಮಳೆ ಖಳನಾಯಕನ ಪಾತ್ರವನ್ನು ನಿರ್ವಹಿಸಿತು. ಭಾರತದ ಬ್ಯಾಟಿಂಗ್ ವೇಳೆ ಪದೇ ಪದೇ ಆಟಕ್ಕೆ ಅಡ್ಡಪಡಿಸಿದ ವರುಣ ರಾಯ, ಆಟಗಾರರು ಲಯ ಕಂಡುಕೊಳ್ಳಲು ಬಿಡಲಿಲ್ಲ. ಇದರ ಲಾಭ ಪಡೆದ ಆಸ್ಟ್ರೇಲಿಯಾ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿತ್ತು. ಇದೀಗ 2ನೇ ಏಕದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ? ಅಡಿಲೇಡ್‌ನಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಭಾರತ- ಆಸ್ಟ್ರೇಲಿಯಾ ಮುಖಾಮುಖಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಲ್ಲಿಯವರೆಗೆ 159 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ ಆಸ್ಟ್ರೇಲಿಯಾದ ದಾಖಲೆ ಭಾರತಕ್ಕಿಂತ ಭಾರವಾಗಿದೆ. ಆಸ್ಟ್ರೇಲಿಯಾ 85 ಪಂದ್ಯಗಳಲ್ಲಿ ಭಾರತವನ್ನು ಸೋಲಿಸಿದರೆ, ಭಾರತ 58 ಪಂದ್ಯಗಳನ್ನು ಗೆದ್ದಿದೆ. 10 ಪಂದ್ಯಗಳು ಡ್ರಾದಲ್ಲಿ ಅಥವಾ ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಅಡಿಲೇಡ್ ಹವಾಮಾನ ಮುನ್ಸೂಚನೆ

ಅಕ್ಯೂವೆದರ್ ಪ್ರಕಾರ, ಅಕ್ಟೋಬರ್ 23, 2025 ರಂದು ಅಡಿಲೇಡ್‌ನ ಹವಾಮಾನ ಮುನ್ಸೂಚನೆಯ ಪ್ರಕಾರ, ದಿನವಿಡೀ ಯಾವುದೇ ಮಳೆಯಾಗುವ ಸಾಧ್ಯತೆಗಳಿಲ್ಲ. ಅಂದರೆ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ತಾಪಮಾನವು 11 ರಿಂದ 20 ಡಿಗ್ರಿ ಸೆಲ್ಸಿಯಸ್ ನಡುವೆ ಇರುವ ನಿರೀಕ್ಷೆಯಿದೆ. ಮಳೆಯಾಗುವ ಸಾಧ್ಯತೆ ಕೇವಲ ಒಂದು ಪ್ರತಿಶತ ಮಾತ್ರ. ಇದಕ್ಕೆ ವ್ಯತಿರಿಕ್ತವಾಗಿ, ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೆ ಮಳೆ ಹಲವಾರು ಬಾರಿ ಅಡ್ಡಿಪಡಿಸಿತು.

‘ಏಕದಿನ ತಂಡದಲ್ಲೂ ರಾಹುಲ್​ಗೆ ಅನ್ಯಾಯ’; ಮೂರ್ಖತನದ ನಿರ್ಧಾರ ಎಂದ ಮಾಜಿ ನಾಯಕ

ಅಡಿಲೇಡ್ ಪಿಚ್ ವರದಿ

ಅಡಿಲೇಡ್ ಓವಲ್ ಪಿಚ್ ಬ್ಯಾಟಿಂಗ್ ಮತ್ತು ಬಾಲಿಂಗ್ ಎರಡಕ್ಕೂ ಸಮನಾಗಿ ಸಹಾಯ ಮಾಡಲಿದೆ. ಈ ಮೈದಾನದಲ್ಲಿ ನಡೆದ ಇತ್ತೀಚಿನ ಪಂದ್ಯಗಳಲ್ಲಿ, ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರುವುದನ್ನು ಗಮನಿಸಬಹುದು. ಇದು ಉತ್ತಮ ಬೌನ್ಸ್ ಮತ್ತು ಸ್ಪಿನ್ನರ್‌ಗಳಿಗೆ ಸ್ವಲ್ಪ ಸಹಾಯವನ್ನು ನೀಡುತ್ತದೆ. ಆದಾಗ್ಯೂ, ಪಂದ್ಯ ಮುಂದುವರೆದಂತೆ, ಇದು ಹೆಚ್ಚು ಬ್ಯಾಟಿಂಗ್ ಸ್ನೇಹಿಯಾಗಬಹುದು. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸಬಹುದು.

ಅಡಿಲೇಡ್​ನಲ್ಲಿ ಭಾರತದ ದಾಖಲೆ

50 ಓವರ್‌ಗಳ ಮಾದರಿಯಲ್ಲಿ ಭಾರತ ತಂಡ ಅಡಿಲೇಡ್ ಓವಲ್​ನಲ್ಲಿ ಮೇಲುಗೈ ಸಾಧಿಸಿದೆ. 2015 ರ ಐಸಿಸಿ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಗೆಲುವು ಸೇರಿದಂತೆ ಅಡಿಲೇಡ್ ಓವಲ್‌ನಲ್ಲಿ ಭಾರತ ಆಡಿದ 15 ಪಂದ್ಯಗಳಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದಿದೆ.

ಸಂಭಾವ್ಯ ಪ್ಲೇಯಿಂಗ್ 11

ಭಾರತದ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಆಸ್ಟ್ರೇಲಿಯಾದ ಸಂಭಾವ್ಯ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಮ್ಯಾಟ್ ರೆನ್ಶಾ, ಕೂಪರ್ ಕಾನೊಲಿ, ಮಿಚೆಲ್ ಓವನ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಜಲ್‌ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:27 pm, Wed, 22 October 25

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ