AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೋಳ್ಕರ್ ಮೈದಾನದಲ್ಲಿ ಟೀಂ ಇಂಡಿಯಾದ ಸಾಧನೆ ಏನು ಗೊತ್ತಾ?

IND vs AUS: 2006ರಲ್ಲಿ ಇಂದೋರ್‌ನಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಏಕದಿನ ಪಂದ್ಯ ಆಡಿತ್ತು. ಆ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಎದುರಿಸಿದ್ದ ಭಾರತ, ಆಂಗ್ಲರನ್ನು 7 ವಿಕೆಟ್‌ಗಳಿಂದ ಮಣಿಸಿತ್ತು. ಅಂದಿನಿಂದ ಟೀಂ ಇಂಡಿಯಾ ಒಟ್ಟು 6 ಏಕದಿನ ಪಂದ್ಯಗಳನ್ನು ಈ ಮೈದಾನದಲ್ಲಿ ಆಡಿದೆ.

IND vs AUS: ಹೋಳ್ಕರ್ ಮೈದಾನದಲ್ಲಿ ಟೀಂ ಇಂಡಿಯಾದ ಸಾಧನೆ ಏನು ಗೊತ್ತಾ?
ಭಾರತ- ಆಸ್ಟ್ರೇಲಿಯಾ
ಪೃಥ್ವಿಶಂಕರ
|

Updated on: Sep 24, 2023 | 7:46 AM

Share

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ 3 ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಇಂದು ಅಂದರೆ, ಭಾನುವಾರ, ಸೆಪ್ಟೆಂಬರ್ 24 ರಂದು ನಡೆಯಲಿದೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ (Holkar Cricket Stadium, Indore) ಈ ಪಂದ್ಯ ನಡೆಯಲಿದ್ದು, ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ (Team India) 5 ವಿಕೆಟ್‌ಗಳ ಜಯ ಸಾಧಿಸಿತ್ತು. ಹೀಗಾಗಿ ಈ ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 1-0 ಅಂತರದ ಮುನ್ನಡೆ ಸಾಧಿಸಿದೆ. ಇದರಿಂದಾಗಿ ಎರಡನೇ ಪಂದ್ಯದಲ್ಲಿ ಸರಣಿ ಗೆಲ್ಲುವ ಗುರಿಯೊಂದಿಗೆ ಕೆಎಲ್ ನಾಯಕತ್ವದ ಟೀಂ ಇಂಡಿಯಾ ಮೈದಾನಕ್ಕಿಳಿಯಲಿದೆ. ಈ ಮೈದಾನದಲ್ಲಿ ಭಾರತ ಈ ಪಂದ್ಯಕ್ಕೂ ಮುನ್ನ ಜನವರಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 90 ರನ್‌ಗಳ ಜಯ ಸಾಧಿಸಿತ್ತು. ಇನ್ನು ಈ ಮೈದಾನದಲ್ಲಿ ಭಾರತದ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ..

ಎಲ್ಲಾ ಪಂದ್ಯಗಳಲ್ಲೂ ಗೆಲುವು

2006ರಲ್ಲಿ ಇಂದೋರ್‌ನಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಏಕದಿನ ಪಂದ್ಯ ಆಡಿತ್ತು. ಆ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಎದುರಿಸಿದ್ದ ಭಾರತ, ಆಂಗ್ಲರನ್ನು 7 ವಿಕೆಟ್‌ಗಳಿಂದ ಮಣಿಸಿತ್ತು. ಅಂದಿನಿಂದ ಟೀಂ ಇಂಡಿಯಾ ಒಟ್ಟು 6 ಏಕದಿನ ಪಂದ್ಯಗಳನ್ನು ಈ ಮೈದಾನದಲ್ಲಿ ಆಡಿದೆ. ಇದುವರೆಗೆ ಆಡಿರುವ ಆರು ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಗೆದ್ದಿದೆ. ಇನ್ನು 2017ರಲ್ಲಿ ಇದೇ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕೈಕ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳ ಜಯ ಸಾಧಿಸಿತ್ತು.

ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?

ಆದ್ದರಿಂದ ಇಂದೋರ್‌ನಲ್ಲಿ ಟೀಂ ಇಂಡಿಯಾದ ಒಟ್ಟಾರೆ ಪ್ರದರ್ಶನ ಗಮನಾರ್ಹವಾಗಿದೆ. ಹಾಗಾಗಿ ಭಾನುವಾರ ಇಂದೋರ್​ನಲ್ಲಿ ಗೆಲುವಿನ ಓಟ ಕಾಯ್ದುಕೊಳ್ಳುವ ಉದ್ದೇಶದಿಂದ ಟೀಂ ಇಂಡಿಯಾ ಮೈದಾನಕ್ಕಿಳಿಯಲಿದೆ. ಇನ್ನು ಈ ಪಂದ್ಯವನ್ನು ಟೀಂ ಇಂಡಿಯಾ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲಿದೆಯೇ ಅಥವಾ ಕಾಂಗರೂ ಪಡೆ ಸರಣಿಯನ್ನು ಡ್ರಾ ಮಾಡಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಏಕದಿನ ಸರಣಿಗೆ ಉಭಯ ತಂಡಗಳು

ಆಸ್ಟ್ರೇಲಿಯಾ ಕ್ರಿಕೆಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, (ವಿಕೆಟ್ ಕೀಪರ್), ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಷ್ (ವಿಕೆಟ್ ಕೀಪರ್), ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಸ್ಟೀವನ್ ಸ್ಮಿತ್, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್ ಮತ್ತು ಆಡಮ್ ಝಂಪಾ.

ಮೊದಲ 2 ಪಂದ್ಯಗಳಿಗೆ ಟೀಂ ಇಂಡಿಯಾ : ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್. ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮದ್  ಶಮಿ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ