
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (India vs Australia) 7 ವಿಕೆಟ್‌ಗಳ ಸೋಲು ಅನುಭವಿಸಿತು. ಈಗ ಸರಣಿಯನ್ನು ಜೀವಂತವಾಗಿರಸಬೇಕೆಂದರೆ ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ಗೆಲ್ಲಲೇಬೇಕು. ಹೀಗಾಗಿ ಈ ಗೆಲುವಿನ ಇರಾದೆಯೊಂದಿಗೆ ಶುಭ್ಮನ್ ಗಿಲ್ ಪಡೆ ಇಂದು ಅಡಿಲೇಡ್ಗೆ ಬಂದಿಳಿದಿದೆ. ಆದಾಗ್ಯೂ ಕಾಂಗರೂಗಳ ನೆಲದಲ್ಲಿ ಗೆಲುವು ಪಡೆಯುವುದು ಅಷ್ಟು ಸುಲಭವಲ್ಲ. ಹೀಗಾಗಿ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯಬೇಕಾಗುತ್ತದೆ. ಅಂದರೆ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲು ಭಾರತೀಯ ತಂಡದ ಆಡಳಿತ ಮಂಡಳಿಯು ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ನಾಯಕ ಶುಭ್ಮನ್ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅಡಿಲೇಡ್ ಏಕದಿನ ಪಂದ್ಯಕ್ಕಾಗಿ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕನಿಷ್ಠ ಪಕ್ಷ ತಂಡದಲ್ಲಿ ಎರಡು ಬದಲಾವಣೆಗಳನ್ನಾದರೂ ಮಾಡಬೇಕಾಗುತ್ತದೆ. ಒಂದು ವೇಳೆ ಆಯ್ಕೆ ಮಂಡಳಿ ತಂಡದಲ್ಲಿ ಬದಲಾವಣೆ ಮಾಡದೆ ಹೋದರೆ ಮುಂದಿನ ಪಂದ್ಯದಲ್ಲಿಯೂ ತಂಡಕ್ಕೆ ಗೆಲುವು ಸಾಧಿಸುವುದು ಕಷ್ಟಕರವಾಗಬಹುದು.
ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಅದರಲ್ಲೂ ಯುವ ವೇಗಿ ಹರ್ಷಿತ್ ರಾಣಾ ಬೌಲಿಂಗ್ನಲ್ಲಿ ತೀವ್ರ ನಿರಾಶೆಗೊಂಡರು. ಸರಾಗವಾಗಿ ರನ್ ಬಿಟ್ಟುಕೊಟ್ಟ ರಾಣಾ ಇತರ ಬೌಲರ್ಗಳ ಮೇಲೆ ಒತ್ತಡವನ್ನುಂಟು ಮಾಡಿದರು. ಅಂತಹ ಪರಿಸ್ಥಿತಿಯಲ್ಲಿ, ಹರ್ಷಿತ್ ಸ್ಥಾನದಲ್ಲಿ ಪ್ರಸಿದ್ಧ್ ಕೃಷ್ಣ ಅವರಿಗೆ ಅವಕಾಶ ನೀಡಬಹುದು. ಏತನ್ಮಧ್ಯೆ, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ನಿರಾಶೆಗೊಳಿಸಿದರು. ಸುಂದರ್ ಒಂದು ವಿಕೆಟ್ ಪಡೆದರೂ, ಬೌಲಿಂಗ್ನಲ್ಲಿ ಸುಲಭವಾಗಿ ರನ್ ಬಿಟ್ಟುಕೊಟ್ಟರಯ. ಆದ್ದರಿಂದ, ಸುಂದರ್ ಬದಲಿಗೆ ಕುಲ್ದೀಪ್ ಯಾದವ್ಗೆ ಅವಕಾಶ ನೀಡಿದರೆ ಉತ್ತಮ.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ಭಾರತ ಪೂರ್ಣ ತಂಡ: ಶುಭ್ಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್-ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಕೃಷ್ಣ, ಪ್ರಸಿದ್ಧ್ ಕೃಷ್ಣ, ಧೃವ್ ಜುರೇಲ್, ಯಶಸ್ವಿ ಜೈಸ್ವಾಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ