AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತಕ್ಕೆ ಆಸರೆಯಾದ ಅಕ್ಷರ್- ಅಶ್ವಿನ್; 262 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಅಂತ್ಯ

IND vs AUS: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 262 ರನ್​ಗಳಿಗೆ ಆಲೌಟ್ ಆಗಿದೆ.

IND vs AUS: ಭಾರತಕ್ಕೆ ಆಸರೆಯಾದ ಅಕ್ಷರ್- ಅಶ್ವಿನ್; 262 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಅಂತ್ಯ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Feb 18, 2023 | 5:09 PM

Share

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (India Vs Australia) ಮೊದಲ ಇನ್ನಿಂಗ್ಸ್​ನಲ್ಲಿ 262 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 1 ರನ್‌ ಮಾತ್ರ ಮುನ್ನಡೆ ಪಡೆದುಕೊಂಡಿದೆ. ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 263 ರನ್ ಗಳಿಸಿತ್ತು. ಆದರೆ ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾದ (Team India) ಇನ್ನಿಂಗ್ಸ್ 262 ರನ್‌ಗಳಿಗೆ ಅಂತ್ಯಗೊಂಡಿದೆ. ಟೀಂ ಇಂಡಿಯಾ ಪರ ಆರಂಭಿಕ ವೈಫಲ್ಯದ ಬಳಿಕ ಕೆಳ ಕ್ರಮಾಂಕದಲ್ಲಿ ಮಿಂಚ್ಚಿದ ಆರ್. ಅಶ್ವಿನ್ ಮತ್ತು ಅಕ್ಷರ್ ಪಟೇಲ್ (R Ashwin and Axar Patel) ಇಬ್ಬರೂ 8ನೇ ವಿಕೆಟ್‌ಗೆ ದಾಖಲೆಯ 113 ರನ್‌ಗಳ ನಿರ್ಣಾಯಕ ಜೊತೆಯಾಟ ನೀಡಿದರು. ಇವರಿಬ್ಬರ ಜೊತೆಯಾಟದಿಂದಾಗಿ ಆಸ್ಟ್ರೇಲಿಯಾಕ್ಕೆ ದೊಡ್ಡ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಪರ ಅಕ್ಷರ್ ಪಟೇಲ್ ಗರಿಷ್ಠ 74 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 44 ರನ್ ಕೊಡುಗೆ ನೀಡಿದರು. ಆರ್ ಅಶ್ವಿನ್ 37 ರನ್ ಗಳಿಸಿದರು. ನಾಯಕ ರೋಹಿತ್ ಶರ್ಮಾ 32 ರನ್​​ಗಳಿಸಿದರೆ, ಚೇತೇಶ್ವರ್ ಪೂಜಾರ ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದರು. ಕೆಎಲ್ ರಾಹುಲ್ ಮತ್ತೊಮ್ಮೆ ನಿರಾಸೆ ಮೂಡಿಸಿದರೆ, ಶ್ರೇಯಸ್‌ ಅಯ್ಯರ್‌ಗೆ ಪ್ರಬಲ ಪುನರಾಗಮನ ಮಾಡಲು ಸಾಧ್ಯವಾಗಲಿಲ್ಲ. ರವೀಂದ್ರ ಜಡೇಜಾ 26 ರನ್ ಗಳಿಸಿ ಟೆಂಟ್‌ಗೆ ಮರಳಿದರೆ, ವಿಕೆಟ್ ಕೀಪರ್ ಶ್ರೀಕರ್ ಭರತ್ 6 ರನ್ ಗಳಿಸಿ ಔಟಾದರು. ಮೊಹಮ್ಮದ್ ಶಮಿ 2 ರನ್ ಗಳಿಸಿದರೆ, ಮೊಹಮ್ಮದ್ ಸಿರಾಜ್ 1 ರನ್ ಗಳಿಸಿ ಅಜೇಯರಾಗಿ ಉಳಿದರು.

IND vs AUS: ಮತ್ತೊಮ್ಮೆ ಕೈಕೊಟ್ಟ ರಾಹುಲ್; ಟ್ರೋಲಿಗರ ಟಾರ್ಗೆಟ್ ಆದ ಉಪನಾಯಕ!

ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಮತ್ತು ಕೆಎಲ್ ಇಬ್ಬರೂ 46 ರನ್‌ಗಳ ಆರಂಭಿಕ ಜೊತೆಯಾಟವನ್ನು ಹಂಚಿಕೊಂಡರು. ಟೀಂ ಇಂಡಿಯಾ ಪರ ರಾಹುಲ್ ರೂಪದಲ್ಲಿ ಮೊದಲ ವಿಕೆಟ್ ಉರುಳಿತು. ರಾಹುಲ್ ಔಟ್ ಆದ ನಂತರ ಟೀಂ ಇಂಡಿಯಾ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡಿತು. ಹೀಗಾಗಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಆಸ್ಟ್ರೇಲಿಯಾ ದೊಡ್ಡ ಮುನ್ನಡೆಯ ಕನಸು ಕಾಣುತ್ತಿತ್ತು. ಆದರೆ ಆರ್. ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಇಬ್ಬರೂ ಕಾಂಗರೂಗಳ ಯೋಜನೆಗಳನ್ನು ವಿಫಲಗೊಳಿಸಿದರು.

ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ ನೆರವಾದ ಈ ಜೋಡಿ ಎಂಟನೇ ವಿಕೆಟ್‌ಗೆ 113 ರನ್‌ಗಳ ನಿರ್ಣಾಯಕ ಜೊತೆಯಾಟವಾಡಿತು. ಇದೇ ವೇಳೆ ಅಕ್ಷರ್ ಅರ್ಧಶತಕ ಪೂರೈಸಿದರು. ಆದರೆ ಪ್ಯಾಟ್ ಕಮಿನ್ಸ್ ಈ ಜೋಡಿಯನ್ನು ಮುರಿಯುವಲ್ಲಿ ಯಶಸ್ವಿಯಾದರು. ಅಶ್ವಿನ್ ಕ್ಯಾಚ್ ಔಟ್ ಆದರೆ, ಆ ಬಳಿಕ ಅಕ್ಷರ್ ಪಟೇಲ್ ಕೂಡ ವಜಾಗೊಂಡರು. ಅಲ್ಲದೆ ಶಮಿ ರೂಪದಲ್ಲಿ ಟೀಂ ಇಂಡಿಯಾ 10ನೇ ವಿಕೆಟ್ ಕಳೆದುಕೊಂಡಿತು.

ಆಸ್ಟ್ರೇಲಿಯ ಪರ ನಾಥನ್ ಲಿಯಾನ್ ಅತಿ ಹೆಚ್ಚು 5 ವಿಕೆಟ್ ಕಬಳಿಸಿದರೆ, ಮರ್ಫಿ ಹಾಗೂ ಮ್ಯಾಥ್ಯೂ ಕುಹ್ನೆಮನ್ ತಲಾ  2 ವಿಕೆಟ್ ಪಡೆದರು. ಪ್ಯಾಟ್ ಕಮಿನ್ಸ್ 1 ವಿಕೆಟ್ ಪಡೆಯುವ ಮೂಲಕ ಭಾರತದ ಇನ್ನಿಂಗ್ಸ್​ಗೆ ಕೊನೆ ಹಾಡಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Sat, 18 February 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?