IND vs AUS: ಆಸೀಸ್ ವಿರುದ್ಧ ಸತತ ಎರಡನೇ ಟೆಸ್ಟ್ ​ಗೆದ್ದ ಭಾರತ; ಸರಣಿಯಲ್ಲಿ 2-0 ಅಂತರದ ಮುನ್ನಡೆ

IND vs AUS: ದೆಹಲಿಯಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸೀಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.

IND vs AUS: ಆಸೀಸ್ ವಿರುದ್ಧ ಸತತ ಎರಡನೇ ಟೆಸ್ಟ್ ​ಗೆದ್ದ ಭಾರತ; ಸರಣಿಯಲ್ಲಿ 2-0 ಅಂತರದ ಮುನ್ನಡೆ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Feb 19, 2023 | 2:50 PM

ದೆಹಲಿಯಲ್ಲಿ ನಡೆದ ಬಾರ್ಡರ್ -ಗವಾಸ್ಕರ್ (Border Gavaskar Trophy) ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸೀಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ (India vs Australia) ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾ ನೀಡಿದ 115 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ರೋಹಿತ್ (Rohit Sharma) ಪಡೆ ಮೂರನೇ ದಿನದಾಟದ 2ನೇ ಸೆಷನ್​ಲ್ಲಿಯೇ ಗುರಿ ತಲುಪಿತು. ಈ ಗೆಲುವಿನೊಂದಿಗೆ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆನ್ನುವ ಆಸೀಸ್ ತಂಡದ ಮಹಾ ಕನಸನ್ನು ಟೀಂ ಇಂಡಿಯಾ ಭಗ್ನ ಮಾಡಿದೆ. ಇದೀಗ ಈ ಸರಣಿಯ ಉಳಿದೆರಡು ಪಂದ್ಯಗಳಲ್ಲಿ ಆಸೀಸ್ ಗೆದ್ದರೂ ಸರಣಿ ಸಮಬಲದೊಂದಿಗೆ ಅಂತ್ಯಗೊಳ್ಳಲಿದೆ.

ಅಂದಹಾಗೆ, ಆಸ್ಟ್ರೇಲಿಯಾ ಸ್ವಲ್ಪ ಉತ್ತಮವಾಗಿ ಆಡಿದ್ದರೆ, ದೆಹಲಿಯಲ್ಲಿ ಇಡೀ ಪಂದ್ಯದ ಚಿತ್ರಣವೇ ಬೇರೆ ಆಗಬಹುದಿತ್ತು. ಏಕೆಂದರೆ ಎರಡನೇ ದಿನದಾಟ ಮುಗಿದ ಬಳಿಕ ಪಂದ್ಯದಲ್ಲಿ ಆಸೀಸ್ ಹಿಡಿತ ಸಾಧಿಸಿರುವುದು ಎದ್ದು ಕಾಣುತ್ತಿತ್ತು. ಆದರೆ ಮೂರನೇ ದಿನ ಮೈದಾನಕ್ಕೆ ಇಳಿದ ಕೂಡಲೇ ಆಸೀಸ್ ಆಟಗಾರರು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ, ಮೂರನೇ ದಿನ ತಂಡದ 9 ವಿಕೆಟ್‌ಗಳು ಕೇವಲ 52 ರನ್‌ಗಳಿಗೆ ಪತನಗೊಂಡವು, ಇದರಲ್ಲಿ ಅಶ್ವಿನ್ ಮತ್ತು ಜಡೇಜಾ ದೊಡ್ಡ ಪಾತ್ರವನ್ನು ವಹಿಸಿದರು.

IND vs AUS: 50 ವರ್ಷಗಳಲ್ಲಿ 2ನೇ ಬಾರಿ; ಜೀವಮಾನದ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಜಡೇಜಾ..!

52 ರನ್ ಗಳಿಸುವಷ್ಟರಲ್ಲಿ 9 ವಿಕೆಟ್ ಪತನ

ದೆಹಲಿ ಟೆಸ್ಟ್​ನ ಮೂರನೇ ದಿನದ ಮೊದಲ ಸೆಷನ್ ಮುಗಿಯುವ ಮುನ್ನವೇ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ ಅಂತ್ಯಗೊಂಡಿತು. ಮೂರನೇ ದಿನ 18.2 ಓವರ್‌ ಆಡಿದ ಆಸೀಸ್ ಸ್ಕೋರ್ ಬೋರ್ಡ್‌ಗೆ ಕೇವಲ 52 ರನ್ ಸೇರಿಸಿ 9 ವಿಕೆಟ್ ಕಳೆದುಕೊಂಡಿತು. ಈ 9 ವಿಕೆಟ್‌ಗಳಲ್ಲಿ 4 ವಿಕೆಟ್‌ಗಳು ಕೇವಲ 1 ರನ್‌ಗೆ ಬಿದ್ದಿದ್ದು ವಿಶೇಷವಾಗಿತ್ತು. ಅದರಲ್ಲೂ ಕಾಂಗರೂ ಬ್ಯಾಟ್ಸ್‌ಮನ್‌ಗಳು ಸ್ವೀಪ್ ಶಾಟ್‌ ಆಡುವ ಯತ್ನದಲ್ಲಿಯೇ ವಿಕೆಟ್ ಕಳೆದುಕೊಂಡಿದ್ದು ಆಸೀಸ್ ಇನ್ನಿಂಗ್ಸ್ ಪತನಕ್ಕೆ ಕಾರಣವಾಯಿತು.

ಒಟ್ಟಿಗೆ 10 ವಿಕೆಟ್ ಪಡೆದ ಅಶ್ವಿನ್-ಜಡೇಜಾ

ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್‌ ಅನ್ನು ಬಹುಬೇಗನೇ  ಮುಗಿಸುವಲ್ಲಿ ಅಶ್ವಿನ್ ಮತ್ತು ಜಡೇಜಾ ಪ್ರಮುಖ ಪಾತ್ರ ವಹಿಸಿದರು. ಇವರಿಬ್ಬರು ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾದ ಸಂಪೂರ್ಣ 10 ವಿಕೆಟ್‌ಗಳನ್ನು ಕಬಳಿಸಿದರು. ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದರೆ, ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿ 7  ವಿಕೆಟ್ ಕಬಳಿಸಿದರು.

ಪೂಜಾರಗೆ ಗೆಲುವಿನ ಉಡುಗೊರೆ

ಭಾರತದ ಸ್ಪಿನ್ ದಾಳಿಗೆ ನಲುಗಿ ಆಸ್ಟ್ರೇಲಿಯಾ ನೀಡಿದ 115 ರನ್‌ಗಳ ಗುರಿಯನ್ನು ಭಾರತ 4 ವಿಕೆಟ್ ಕಳೆದುಕೊಂಡು ಸುಲಭವಾಗಿ ಸಾಧಿಸಿತು. ಇದರಲ್ಲಿ 100ನೇ ಟೆಸ್ಟ್ ಆಡಿದ ಚೇತೇಶ್ವರ ಪೂಜಾರ ಕೊನೆಯವರೆಗೂ ಔಟಾಗದೆ ತಂಡಕ್ಕೆ ಗೆಲುವು ತಂದಿತ್ತರು.

ಮತ್ತೆ ನಂ.1 ಸ್ಥಾನಕ್ಕೇರಿದ ಭಾರತ

ದೆಹಲಿಯಲ್ಲಿನ ಈ ದೊಡ್ಡ ಗೆಲುವಿನೊಂದಿಗೆ ಭಾರತ ಟೆಸ್ಟ್ ರ‍್ಯಾಂಕಿಂಗ್‌ನಲ್ಲೂ ನಂಬರ್ ಒನ್ ತಂಡವಾಗಿ ಹೊರಹೊಮ್ಮಿದೆ. ಅಲ್ಲದೆ ಬಾರ್ಡರ್ ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಸೋಲುವ ಮೂಲಕ ಆಸೀಸ್ ತಂಡ ಟೆಸ್ಟ್ ರ್ಯಾಂಕಿಂಗ್​ನಲ್ಲಿ 2ನೇ ಸ್ಥಾನಕ್ಕೆ ಕುಸಿದಿದೆ. ಇದರೊಂದಿಗೆ ಭಾರತ ಈಗ ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ ಒನ್ ತಂಡವಾಗಿ ಹೊರಹೊಮ್ಮಿದೆ. ಇದಲ್ಲದೆ, ದೆಹಲಿಯನ್ನು ಗೆಲ್ಲುವ ಮೂಲಕ, ಭಾರತ ತಂಡವು 2010 ರಿಂದ ತವರಿನಲ್ಲಿ 200 ಕ್ಕಿಂತ ಕಡಿಮೆ ರನ್‌ಗಳನ್ನು ಬೆನ್ನಟ್ಟಿದ ಸಂದರ್ಭದಲ್ಲಿ 100 ಪ್ರತಿಶತ ವಿಜಯದ ದಾಖಲೆಯನ್ನು ಉಳಿಸಿಕೊಂಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:49 pm, Sun, 19 February 23

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ