AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಮಾಹಿತಿ

India vs Australia 3rd ODI Live Streaming: ಭಾರತ-ಆಸ್ಟ್ರೇಲಿಯಾ ನಡುವೆ ಕೊನೆಯ ಪಂದ್ಯ ಮಾತ್ರ ಬಾಕಿಯಿದೆ. ಮೂರನೇ ಏಕದಿನ ಪಂದ್ಯವನ್ನೂ ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ ಭಾರತ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ? ಎಂಬುದನ್ನು ನೋಡೋಣ.

ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಮಾಹಿತಿ
India vs Australia 3rd ODI
Vinay Bhat
|

Updated on: Sep 25, 2023 | 8:07 AM

Share

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ (India vs Australia) ತಂಡ ವಶಪಡಿಸಿಕೊಂಡಿದೆ. ಭಾನುವಾರ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ತೋರಿದ ಭಾರತ 99 ರನ್​ಗಳ ಅಮೋಘ ಗೆಲುವು ಕಂಡಿತು. ಈ ಜಯದ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಭಾರತ ಪರ ಶುಭ್​ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಶತಕ ಸಿಡಿಸಿದರೆ, ರಾಹುಲ್ ಹಾಗೂ ಸೂರ್ಯಕುಮಾರ್ ಅರ್ಧಶತಕ ಚಚ್ಚಿದರು.

ಇದೀಗ ಇಂಡೋ-ಆಸೀಸ್ ನಡುವೆ ಕೊನೆಯ ಪಂದ್ಯ ಮಾತ್ರ ಬಾಕಿಯಿದೆ. ಮೂರನೇ ಏಕದಿನ ಪಂದ್ಯವನ್ನೂ ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ ಭಾರತ. ಇದರ ನಡುವೆ ಅಂತಿಮ ಕಾದಾಟಕ್ಕೆ ಭಾರತ ಪರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡ ಸೇರಿಕೊಳ್ಳಲಿದ್ದಾರೆ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ? ಎಂಬುದನ್ನು ನೋಡೋಣ.

IND vs AUS: ಇಂದೋರ್‌ನಲ್ಲಿ 3ನೇ ಏಕದಿನ ಶತಕ ಸಿಡಿಸಿ ಅಬ್ಬರಿಸಿದ ಶ್ರೇಯಸ್ ಅಯ್ಯರ್..!

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಸೆಪ್ಟೆಂಬರ್ 27 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ. ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಟಿವಿಯಲ್ಲಿ ಉಚಿತವಾಗಿ ಎಲ್ಲಿ ನೋಡಬಹುದು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್ ಮೂಲಕ ಟಿವಿಯಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಮೊಬೈಲ್​ನಲ್ಲಿ ಉಚಿತವಾಗಿ ನೋಡುವುದು ಹೇಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಮೊಬೈಲ್‌ನಲ್ಲಿ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಎರಡನೇ ಏಕದಿನ ಪಂದ್ಯ:

ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಬರೋಬ್ಬರಿ 399 ರನ್ ಗಳಿಸಿತು. ಶುಭ್​ಮನ್ ಗಿಲ್ 97 ಎಸೆತಗಲ್ಲಿ 104 ರನ್, ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 105, ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ ಅಜೇಯ 72, ರಾಹುಲ್ 52 ರನ್ ಸಿಡಿಸಿದರು. ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ನಡುವಿನಲ್ಲಿ ಮಳೆ ಅಡ್ಡಿ ಪಡಿಸಿತು. ಬಳಿಕ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಆದರೆ, ಭಾರತೀಯ ಬೌಲಿಂಗ್ ದಾಳಿಗೆ ನಲುಗಿದ ಆಸೀಸ್ 217 ರನ್​ಗಳಿಗೆ ಆಲೌಟ್ ಆಯಿತು. ವಾರ್ನರ್ 53 ಹಾಗೂ ಅಬಾಟ್ 54 ರನ್ ಗಳಿಸಿದರು. ಭಾರತ ಪರ ರವೀಂದ್ರ ಜಡೇಜಾ ಹಾಗೂ ಅಶ್ವಿನ್ ತಲಾ 3 ವಿಕೆಟ್ ಕಿತ್ತರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ