ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ (India vs Australia) ತಂಡ ವಶಪಡಿಸಿಕೊಂಡಿದೆ. ಭಾನುವಾರ ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ತೋರಿದ ಭಾರತ 99 ರನ್ಗಳ ಅಮೋಘ ಗೆಲುವು ಕಂಡಿತು. ಈ ಜಯದ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಭಾರತ ಪರ ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಶತಕ ಸಿಡಿಸಿದರೆ, ರಾಹುಲ್ ಹಾಗೂ ಸೂರ್ಯಕುಮಾರ್ ಅರ್ಧಶತಕ ಚಚ್ಚಿದರು.
ಇದೀಗ ಇಂಡೋ-ಆಸೀಸ್ ನಡುವೆ ಕೊನೆಯ ಪಂದ್ಯ ಮಾತ್ರ ಬಾಕಿಯಿದೆ. ಮೂರನೇ ಏಕದಿನ ಪಂದ್ಯವನ್ನೂ ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ಲಾನ್ನಲ್ಲಿದೆ ಭಾರತ. ಇದರ ನಡುವೆ ಅಂತಿಮ ಕಾದಾಟಕ್ಕೆ ಭಾರತ ಪರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡ ಸೇರಿಕೊಳ್ಳಲಿದ್ದಾರೆ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ? ಎಂಬುದನ್ನು ನೋಡೋಣ.
IND vs AUS: ಇಂದೋರ್‌ನಲ್ಲಿ 3ನೇ ಏಕದಿನ ಶತಕ ಸಿಡಿಸಿ ಅಬ್ಬರಿಸಿದ ಶ್ರೇಯಸ್ ಅಯ್ಯರ್..!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಸೆಪ್ಟೆಂಬರ್ 27 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ. ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಟಿವಿಯಲ್ಲಿ ಉಚಿತವಾಗಿ ಎಲ್ಲಿ ನೋಡಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್ ಮೂಲಕ ಟಿವಿಯಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಮೊಬೈಲ್‌ನಲ್ಲಿ ಉಚಿತವಾಗಿ ನೋಡುವುದು ಹೇಗೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಮೊಬೈಲ್‌ನಲ್ಲಿ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಬರೋಬ್ಬರಿ 399 ರನ್ ಗಳಿಸಿತು. ಶುಭ್ಮನ್ ಗಿಲ್ 97 ಎಸೆತಗಲ್ಲಿ 104 ರನ್, ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 105, ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ ಅಜೇಯ 72, ರಾಹುಲ್ 52 ರನ್ ಸಿಡಿಸಿದರು. ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ನಡುವಿನಲ್ಲಿ ಮಳೆ ಅಡ್ಡಿ ಪಡಿಸಿತು. ಬಳಿಕ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಆದರೆ, ಭಾರತೀಯ ಬೌಲಿಂಗ್ ದಾಳಿಗೆ ನಲುಗಿದ ಆಸೀಸ್ 217 ರನ್ಗಳಿಗೆ ಆಲೌಟ್ ಆಯಿತು. ವಾರ್ನರ್ 53 ಹಾಗೂ ಅಬಾಟ್ 54 ರನ್ ಗಳಿಸಿದರು. ಭಾರತ ಪರ ರವೀಂದ್ರ ಜಡೇಜಾ ಹಾಗೂ ಅಶ್ವಿನ್ ತಲಾ 3 ವಿಕೆಟ್ ಕಿತ್ತರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ