ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯಂತೆ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಏಕದಿನ ಸರಣಿ ಕೂಡ ರೋಚಕತೆ ಸೃಷ್ಟಿಸಿದೆ. ಭಾನುವಾರ ವಿಶಾಖಪಟ್ಟಣದ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿ 1-1 ಅಂಕಗಳ ಅಂತರದಿಂದ ಸಮಬಲದಲ್ಲಿದೆ. ಹೀಗಾಗಿ ಅಂತಿಮ ತೃತೀಯ ಏಕದಿನ ಪಂದ್ಯ ನಿರ್ಣಾಯಕವಾಗಿದ್ದು ಗೆದ್ದ ತಂಡ ಟ್ರೋಫಿ ವಶಪಡಿಸಿಕೊಳ್ಳಲಿದೆ. ಟೀಮ್ ಇಂಡಿಯಾ (Team India) ಸರಣಿ ಕಳೆದುಕೊಂಡರೆ ತವರಿನಲ್ಲಿ ಭಾರೀ ಮುಖಭಂಗ ಅನುಭವಿಸಲಿದೆ. ಇತ್ತ ಟೆಸ್ಟ್ ಸರಣಿ ಸೋತಿರುವ ಕಾಂಗರೂ ಪಡೆಗೆ ಏಕದಿನ ಸರಣಿ ಬಹುಮುಖ್ಯವಾಗಿದೆ. ಹೀಗೆ ರೋಚಕತೆ ಸೃಷ್ಟಿಸಿರುವ ಮೂರನೇ ಏಕದಿನ (IND vs AUS 3rd ODI) ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ? ಎಂಬುದನ್ನು ನೋಡೋಣ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯ ಮಾರ್ಚ್ 22 ರಂದು ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಏಕದಿನ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.
ಭಾರತ-ಆಸ್ಟ್ರೇಲಿಯಾ ನಡುವಿನ ನಿರ್ಣಾಯಕ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಬುಧವಾರ ಮಧ್ಯಾಹ್ನ 01:30 ಕ್ಕೆ ಆರಂಭವಾಗಲಿದೆ. ಒಂದು ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯದ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಏಕದಿನ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಇರಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ. ಹಾಗೆಯೇ ನೀವು tv9 Kannada.com ನಲ್ಲಿ ಪಂದ್ಯದ ಲೈವ್ ಅಪ್ಡೇಟ್ ಓದಬಹುದಾಗಿದೆ.
Team India: ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕಲೆಹಾಕಿದ ಅತೀ ಕಡಿಮೆ ಸ್ಕೋರ್ ಎಷ್ಟು ಗೊತ್ತಾ?
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಜಯದೇವ್ ಉನಾದ್ಕಟ್,
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜೈ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯಿನಿಸ್, ಆಯಡಂ ಜಂಪಾ.
ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಂದುಕೊಂಡ ಯೋಜನೆಯಂತೆ ಯಾವುದೂ ನಡೆಯಲಿಲ್ಲ. ಮಿಚೆಲ್ ಸ್ಟಾರ್ಕ್ (5 ವಿಕೆಟ್) ಬೌಲಿಂಗ್ ದಾಳಿಗೆ ಮೊದಲ ಓವರ್ನ ಮೂರನೇ ಎಸೆತದಲ್ಲೇ ಭಾರತ ಶುಭ್ಮನ್ ಗಿಲ್ ಅವರ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ (13,) ಸೂರ್ಯ ಕುಮಾರ್ ಯಾದವ್ (0), ಕೆಎಲ್ ರಾಹುಲ್ (9), ಹಾರ್ದಿಕ್ ಪಾಂಡ್ಯ (1), ಕೊಹ್ಲಿ (31), ಜಡೇಜಾ (16), ಅಕ್ಷರ್ ಪಟೇಲ್ (29) ಸೇರಿದಂತೆ ಯಾರುಕೂಡ ಹೆಚ್ಚುಹೊತ್ತು ಕ್ರಿಸ್ನಲ್ಲಿ ನಿಲ್ಲಿಲ್ಲ. ಭಾರತ 26 ಓವರ್ಗಳಲ್ಲಿ 117 ರನ್ಗೆ ಸರ್ವಪತನ ಕಂಡಿತು. ಸುಲಭ ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಆರಂಭಿಕರಾದ ಟ್ರಾವಿಸ್ ಹೆಡ್ 51 ರನ್ ಮತ್ತು ಮಿಚೆಲ್ ಮಾರ್ಷ್ 66 ರನ್ ಗಳಸಿ 10 ವಿಕೆಟ್ಗಳ ಅಮೋಘ ಗೆಲುವಿಗೆ ಕಾರಣರಾದರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ