IND vs AUS: ಭಾರತ- ಆಸೀಸ್ ಟಿ20 ಸರಣಿಯಲ್ಲಿ ಸೃಷ್ಟಿಯಾದ ಪ್ರಮುಖ 9 ದಾಖಲೆಗಳಿವು..!

IND vs AUS: ಈ ಇಡೀ ಸರಣಿಯಲ್ಲಿ ಭಾರತದ ಕೆಲವು ಆಟಗಾರರು ಅದ್ಭುತ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯದ ಕ್ಯಾಮರೂನ್ ಗ್ರೀನ್ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು.

IND vs AUS: ಭಾರತ- ಆಸೀಸ್ ಟಿ20 ಸರಣಿಯಲ್ಲಿ ಸೃಷ್ಟಿಯಾದ ಪ್ರಮುಖ 9 ದಾಖಲೆಗಳಿವು..!
ಸರಣಿ ಗೆದ್ದ ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Sep 26, 2022 | 8:57 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯು (India vs Australia) ಪ್ರಾರಂಭವಾದ ರೀತಿಯಲ್ಲಿಯೇ ಕೊನೆಗೊಂಡಿದೆ. ಈ ಟಿ20 ಸರಣಿಯಲ್ಲಿ ಭಾರೀ ರನ್‌ಗಳ ಮಳೆಯೇ ಸುರಿಯಿತು. ಇದರ ಜೊತೆಗೆ ಸರಣಿಯ ಅಂತಿಮ ಪಂದ್ಯದಲ್ಲಂತೂ ಭಾರತೀಯ ಕ್ರಿಕೆಟ್ ತಂಡ ಮತ್ತು ಅಭಿಮಾನಿಗಳಿಗೆ ಇನ್ನಷ್ಟು ಮನರಂಜನೆ ನೀಡುವಲ್ಲಿ ಯಶಸ್ವಿಯಾಯಿತು, ಮೊದಲ ಪಂದ್ಯದಲ್ಲಿ ಸೋತ ನಂತರ, ಭಾರತ ತಂಡಸತತ ಎರಡು ಪಂದ್ಯಗಳನ್ನು ಗೆದ್ದು 2-1 ರಿಂದ ಸರಣಿಯನ್ನು ಗೆದ್ದುಕೊಂಡಿತು. ಹೈದರಾಬಾದ್‌ನಲ್ಲಿ, ಅಕ್ಷರ್ ಪಟೇಲ್, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ (Akshar Patel, Virat Kohli and Suryakumar Yadav) ಅವರ ಬಲವಾದ ಪ್ರದರ್ಶನದಿಂದಾಗಿ ಭಾರತ 6 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದಕೊಂಡಿತು.

ಈ ಇಡೀ ಸರಣಿಯಲ್ಲಿ ಭಾರತದ ಕೆಲವು ಆಟಗಾರರು ಅದ್ಭುತ ಪ್ರದರ್ಶನ ನೀಡಿದರೆ, ಆಸ್ಟ್ರೇಲಿಯದ ಕ್ಯಾಮರೂನ್ ಗ್ರೀನ್ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಸರಣಿ ಗೆಲುವಿನೊಂದಿಗೆ ಪಾಕಿಸ್ತಾನವನ್ನು ಗೆಲುವಿನಲ್ಲಿ ಹಿಂದಿಕ್ಕಿ ಟೀಂ ಇಂಡಿಯಾ ಹೊಸ ವಿಶ್ವ ದಾಖಲೆಯನ್ನೂ ನಿರ್ಮಿಸಿದೆ.

ಟೀಂ ಇಂಡಿಯಾ ಸೃಷ್ಟಿಸಿದ ಹಲವು ದಾಖಲೆಗಳಿವು

  1. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 2022 ರಲ್ಲಿ 21 ನೇ ಟಿ20 ಪಂದ್ಯವನ್ನು ಗೆದ್ದುಕೊಂಡಿತು. ಇದರೊಂದಿಗೆ ಭಾರತ ಒಂದು ವರ್ಷದಲ್ಲಿ (20) ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ಪಾಕಿಸ್ತಾನದ ದಾಖಲೆಯನ್ನು ಮುರಿದಿದೆ. ಪಾಕಿಸ್ತಾನ ಕಳೆದ ವರ್ಷವಷ್ಟೇ ಈ ಸಾಧನೆ ಮಾಡಿತ್ತು.
  2. ಭಾರತ ಈ ವರ್ಷ ತವರಿನಲ್ಲಿ ತನ್ನ 10 ನೇ ಜಯವನ್ನು ದಾಖಲಿಸಿದ್ದು, ಇದು ಒಂದು ವರ್ಷದಲ್ಲಿ ಯಾವುದೇ ತಂಡ ಗಳಿಸದ ಅತ್ಯಧಿಕ ಗೆಲುವಾಗಿದೆ. ಈ ವರ್ಷ ಭಾರತದಲ್ಲಿ ಟೀಂ ಇಂಡಿಯಾ 14 ಪಂದ್ಯಗಳನ್ನು ಆಡಿದ್ದು, 3ರಲ್ಲಿ ಸೋಲು ಹಾಗೂ 1ರಲ್ಲಿ ಡ್ರಾ ಸಾಧಿಸಿದೆ.
  3. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 63 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇದು T20 ಕ್ರಿಕೆಟ್​ನಲ್ಲಿ ಕೊಹ್ಲಿ ಅವರ 33 ನೇ ಅರ್ಧಶತಕವಾಗಿದ್ದು, ಟಿ20ಯಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
  4. ಇದು ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಗಳಿಸಿದ ಎಂಟನೇ ಅರ್ಧಶತಕvಆಗಿದೆ. ಇಷ್ಟೇ ಅಲ್ಲ, ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ T20 ಇಂಟರ್ನ್ಯಾಷನಲ್ನಲ್ಲಿ 10 ನೇ ಬಾರಿಗೆ ಇನ್ನಿಂಗ್ಸ್ನಲ್ಲಿ 30 ಪ್ಲಸ್ ರನ್ಗಳನ್ನು ಗಳಿಸಿದ ಸಾಧನೆ ಕೂಡ ಮಾಡಿದರು.
  5. ಅಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕೋಚ್ ಹಾಗೂ ಟೀಂ ಇಂಡಿಯಾದ ಶ್ರೇಷ್ಠ ಬ್ಯಾಟ್ಸ್‌ಮನ್ ರಾಹುಲ್ ದ್ರಾವಿಡ್ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.ಈಗ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ 24078 ರನ್ ಗಳಿಸಿದ್ದು, ಈಗ ಭಾರತದ ಪರ ಅತಿ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ 34357 ರನ್ ಬಾರಿಸಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
  6. ಕೊನೆಯ ಪಂದ್ಯದಲ್ಲಿ 69 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಈ ವರ್ಷದ ನಾಲ್ಕನೇ ಅರ್ಧಶತಕ ಸಿಡಿಸಿದರು. ಇದರೊಂದಿಗೆ, ಅವರು 2022 ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಸೂರ್ಯ 20 ಇನ್ನಿಂಗ್ಸ್‌ಗಳಲ್ಲಿ 37 ರ ಸರಾಸರಿ ಮತ್ತು 183 ರ ಸ್ಟ್ರೈಕ್ ರೇಟ್‌ನಲ್ಲಿ 682 ರನ್ ಗಳಿಸಿದ್ದಾರೆ.
  7. ಇದಲ್ಲದೇ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಸೂರ್ಯಕುಮಾರ್ ಯಾದವ್ ಭಾರತ ಪರ ವರ್ಷದಲ್ಲಿ ಅತಿ ಹೆಚ್ಚು ಟಿ20 ಅರ್ಧಶತಕ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಜೊತೆಗೆ ಈ ಮೂಲಕ ಸೂರ್ಯ (4) ಯುವರಾಜ್ ಸಿಂಗ್ (3) ದಾಖಲೆಯನ್ನು ಮುರಿದರು.
  8. ಈ ಸರಣಿಯ ಭಾರತೀಯ ವೇಗಿ ಭುವನೇಶ್ವರ್ ಕುಮಾರ್‌ ಅಷ್ಟಾಗಿ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಆದರೆ ಅವರು ಒಂದು ವರ್ಷದಲ್ಲಿ T20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಭುವಿ (32) ಆಸ್ಟ್ರೇಲಿಯಾದ ಆಂಡ್ರ್ಯೂ ಟೈ (31) ದಾಖಲೆಯನ್ನು ಸಹ ಮುರಿದರು.
  9. ಭಾರತದ ಆಟಗಾರರು ಮಾತ್ರವಲ್ಲದೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕ್ಯಾಮರೂನ್ ಗ್ರೀನ್ ಕೂಡ ದಾಖಲೆ ಬರೆದಿದ್ದಾರೆ. ಅವರು ಭಾರತದ ವಿರುದ್ಧ T20 ಕ್ರಿಕೆಟ್​ನಲ್ಲಿ ಅತ್ಯಂತ ವೇಗದ ಅರ್ಧಶತಕ ಗಳಿಸಿದ  ಬ್ಯಾಟ್ಸ್‌ಮನ್ ಎನಿಸಿಕೊಂಡರು. ಕೇವಲ 19 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಗ್ರೀನ್, ಜಾನ್ಸನ್ ಚಾರ್ಲ್ಸ್ (20 ಎಸೆತ) ಅವರ ದಾಖಲೆಯನ್ನು ಮುರಿದರು.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ