IND vs AUS: 23 ಪಂದ್ಯಗಳಲ್ಲಿ 8 ಬಾರಿ ಔಟ್; ಕೊಹ್ಲಿಗೆ ಮಾಜಿ ಆರ್​ಸಿಬಿ ಸ್ಪಿನ್ನರೇ ವಿಲನ್..!

Virat Kohli: ಕೊನೆಯ ಬಾರಿಗೆ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಟಿ20 ಪಂದ್ಯದಲ್ಲಿ ವಿರಾಟ್ 94 ರನ್ ಗಳಿಸಿ ಅಜೇಯರಾಗಿ ಉಳಿದು ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

IND vs AUS: 23 ಪಂದ್ಯಗಳಲ್ಲಿ 8 ಬಾರಿ ಔಟ್; ಕೊಹ್ಲಿಗೆ ಮಾಜಿ ಆರ್​ಸಿಬಿ ಸ್ಪಿನ್ನರೇ ವಿಲನ್..!
virat kohli vs adam zampa
Follow us
TV9 Web
| Updated By: ಪೃಥ್ವಿಶಂಕರ

Updated on:Sep 25, 2022 | 2:59 PM

ಭಾರತ ಮತ್ತು ಆಸ್ಟ್ರೇಲಿಯಾ (India and Australia) ನಡುವಿನ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಭಾನುವಾರ ಹೈದರಾಬಾದ್‌ನಲ್ಲಿ ನಡೆಯಲಿದೆ. ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿರುವುದು ಗೊತ್ತೇ ಇದೆ. ಮೊದಲ ಪಂದ್ಯದಲ್ಲಿ ಸೋತಿದ್ದ ಭಾರತ ಎರಡನೇ ಪಂದ್ಯವನ್ನು ಗೆದ್ದು ಸರಣಿ ರೇಸ್ ಪ್ರವೇಶಿಸಿದೆ. ಆದರೆ, ಎರಡನೇ ಪಂದ್ಯದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಕೇವಲ 11 ರನ್ ಗಳಿಸಿ ಔಟಾದರು. ಅವರನ್ನು ಆಡಮ್ ಝಂಪಾ (Adam Zampa) ವಜಾಗೊಳಿಸಿದರು. ಈ ಮೂಲಕ ಪ್ರತಿ ಭಾರಿಯ ಆಸೀಸ್- ಇಂಡೋ ಕದನದಲ್ಲಿ ಕೊಹ್ಲಿಗೆ ಈ ಸ್ಪಿನ್ನರೇ ಪ್ರಮುಖ ವಿಲನ್ ಆಗಿ ಕಾಡುತ್ತಿದ್ದಾರೆ. ಅದಕ್ಕೆ ಹಿಂದಿನ ಅಂಕಿ ಅಂಶಗಳು ಪುಷ್ಠಿ ನೀಡುತ್ತಿವೆ.

ನಾಗ್ಪುರದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಜಯ ಸಾಧಿಸಿತು. ಮಳೆಯಿಂದಾಗಿ ಈ ಪಂದ್ಯಕ್ಕೆ ಉಭಯ ತಂಡಗಳಿಗೆ 8 ಓವರ್‌ಗಳನ್ನು ನಿಗದಿಪಡಿಸಲಾಗಿತ್ತು. ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ, ಭಾರತಕ್ಕೆ 91 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಭಾರತ ಇನ್ನು 4 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಟೀಂ ಇಂಡಿಯಾ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಹಾಗೂ ರಾಹುಲ್ ತಂಡಕ್ಕೆ ಅವಶ್ಯಕ ಆರಂಭ ನೀಡಿದರು. ಆದರೆ ರನ್ ಗಳಿಸುವ ಬರದಲ್ಲಿ ರಾಹುಲ್ ಬೇಗನೆ ವಿಕೆಟ್ ಒಪ್ಪಿಸಿದರು. ರಾಹುಲ್ ಬಳಿಕ 3ನೇ ಸ್ಥಾನದಲ್ಲಿ ಕಣಕ್ಕಿಳಿದ ಕೊಹ್ಲಿ ಕೂಡ 6 ಎಸೆತಗಳಲ್ಲಿ 2 ಬೌಂಡರಿಗಳ ಸಹಾಯದಿಂದ 11 ರನ್ ಗಳಿಸಿದರು. ಆ ನಂತರ ಝಂಪಾ ಅವರ ಐದನೇ ಓವರ್‌ನ ಎರಡನೇ ಎಸೆತದಲ್ಲಿ ಕೊಹ್ಲಿ ಕ್ಲೀನ್ ಬೌಲ್ಡ್ ಆದರು.

ಝಂಪಾ ಇಲ್ಲಿಯವರೆಗೆ ಕೊಹ್ಲಿ ವಿರುದ್ಧ ಅದ್ಭುತ ಯಶಸ್ಸು ಸಾಧಿಸಿದ್ದು, ಕಳೆದ 23 ಪಂದ್ಯಗಳಲ್ಲಿ 8 ಬಾರಿ ಕೊಹ್ಲಿಯನ್ನು ಬಲಿಪಶು ಮಾಡಿದ್ದಾರೆ. ಹೀಗಾಗಿ ಹೈದರಾಬಾದ್​ನಲ್ಲಿ ನಡೆಯುವ ಪಂದ್ಯದಲ್ಲಿ ಕೊಹ್ಲಿ ಎಚ್ಚರಿಕೆಯಿಂದ ಆಡಬೇಕಿದೆ. ಸ್ಪಿನ್ ಬೌಲರ್ ಜಂಪಾ ಕೊಹ್ಲಿಯನ್ನು ಸುಲಭವಾಗಿ ಬಲೆಗೆ ಬೀಳಿಸುತ್ತಿದ್ದಾರೆ. ಮೊಹಾಲಿಯಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲೂ ಕೊಹ್ಲಿಗೆ ವಿಶೇಷ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. 7 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ಔಟಾಗಿದ್ದರು. ಅವರನ್ನು ನಾಥನ್ ಎಲ್ಲಿಸ್ ಪೆವಿಲಿಯನ್​ಗಟ್ಟಿದ್ದರು. ಇದೀಗ ಮೂರನೇ ಟಿ20 ಪಂದ್ಯ ನಡೆಯಬೇಕಿದ್ದು, ವಿರಾಟ್ ಅಭಿಮಾನಿಗಳು ಅವರಿಂದ ಉತ್ತಮ ಪ್ರದರ್ಶನವನ್ನು ಬಯಸುತ್ತಿದ್ದಾರೆ.

ಆದಾಗ್ಯೂ, ಉಪ್ಪಲ್ ಕ್ರೀಡಾಂಗಣವು ಮಾಜಿ ನಾಯಕನಿಗೆ ಬಹಳ ಪರಿಚಿತವಾಗಿರುವ ಮೈದಾನಗಳಲ್ಲಿ ಒಂದಾಗಿದೆ. ಇಲ್ಲಿ ಕೊಹ್ಲಿ 3 ಮಾದರಿಯಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದಾರೆ ಅಂದರೆ 3 ಟೆಸ್ಟ್, 4 ODI ಮತ್ತು 1 T20 ಪಂದ್ಯಗಳನ್ನಾಡಿದ್ದಾರೆ. ಈ ಮೈದಾನದಲ್ಲಿ ವಿರಾಟ್ 1 ಶತಕ ಮತ್ತು 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಒಟ್ಟಾರೆ 8 ಪಂದ್ಯಗಳಲ್ಲಿ 607 ರನ್ ಗಳಿಸಿದ್ದಾರೆ. ಕೊನೆಯ ಬಾರಿಗೆ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಟಿ20 ಪಂದ್ಯದಲ್ಲಿ ವಿರಾಟ್ 94 ರನ್ ಗಳಿಸಿ ಅಜೇಯರಾಗಿ ಉಳಿದು ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸದ್ಯ ಟೀಂ ಇಂಡಿಯಾ ನಾಯಕರಾಗಿರುವ ಹಿಟ್ ಮ್ಯಾನ್​ಗೆ ಮಾತ್ರ ಉಪ್ಪಲ್ ಸ್ಟೇಡಿಯಂ ಅಷ್ಟಾಗಿ ಅದೃಷ್ಟ ತಂದುಕೊಟ್ಟಿಲ್ಲ. ರೋಹಿತ್ ಶರ್ಮಾ ಇಲ್ಲಿ 3 ಪಂದ್ಯಗಳನ್ನು ಆಡಿದ್ದು ಕೇವಲ 46 ರನ್ ಗಳಿಸಿದ್ದಾರೆ. ಆದರೆ, ಉಭಯ ತಂಡಗಳು ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿವೆ.

Published On - 2:59 pm, Sun, 25 September 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು