IND vs AUS: ಬ್ಯಾಟಿಂಗ್ ವೈಫಲ್ಯ, 3ನೇ ಟೆಸ್ಟ್ ಸೋತ ಭಾರತ; ಆಸೀಸ್​ಗೆ ಭರ್ಜರಿ ಜಯ

IND vs AUS: ಈ ಪಂದ್ಯವನ್ನು ಸೋತರೂ ಭಾರತ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸರಣಿ 2-2ರಿಂದ ಸಮವಾಗಲಿದೆ.

IND vs AUS: ಬ್ಯಾಟಿಂಗ್ ವೈಫಲ್ಯ, 3ನೇ ಟೆಸ್ಟ್ ಸೋತ ಭಾರತ; ಆಸೀಸ್​ಗೆ ಭರ್ಜರಿ ಜಯ
ಆಸ್ಟ್ರೇಲಿಯಾ ತಂಡ
Follow us
ಪೃಥ್ವಿಶಂಕರ
|

Updated on:Mar 03, 2023 | 11:17 AM

ಇಂದೋರ್​ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಹೀನಾಯ ಸೋಲು ಅನುಭವಿಸಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ ನೀಡಿದ 76 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಆಸೀಸ್ ಪಡೆ ಕೇವಲ 1 ವಿಕೆಟ್ ಕಳೆದುಕೊಂಡು ಮೊದಲ ಸೆಷನ್​ನಲ್ಲಿಯೇ ಗುರಿ ತಲುಪಿತು. ಇದರೊಂದಿಗೆ ಆಸ್ಟ್ರೇಲಿಯ ಸರಣಿ ಉಳಿಸುವ ಪ್ರಯತ್ನವನ್ನು ಜೀವಂತವಾಗಿರಿಸಿಕೊಂಡಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಭಾರತ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು (Border-Gavaskar Trophy) ತನ್ನಲ್ಲೇ ಉಳಿಸಿಕೊಂಡಿದೆ. ಆಸ್ಟ್ರೇಲಿಯ ಮೂರನೇ ಟೆಸ್ಟ್ ಪಂದ್ಯವನ್ನು ಸೋತಿದ್ದರೆ ಸರಣಿಯನ್ನೂ ಕಳೆದುಕೊಳ್ಳುತ್ತಿತ್ತು. ಆದರೆ ಇದೀಗ ಸರಣಿಯಲ್ಲಿ ಸಮಬಲ ಸಾಧಿಸುವ ಅವಕಾಶ ಸಿಕ್ಕಿದೆ.

ಸೋತರೂ ಸರಣಿಯಲ್ಲಿ ಭಾರತದ ಮುನ್ನಡೆ

ಈ ಪಂದ್ಯವನ್ನು ಸೋತರೂ ಭಾರತ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸರಣಿ 2-2ರಿಂದ ಸಮವಾಗಲಿದೆ. ವಾಸ್ತವವಾಗಿ ಟೀಂ ಇಂಡಿಯಾ ಮೂರನೇ ಟೆಸ್ಟ್ ಪಂದ್ಯದಲ್ಲಿ ತಾನು ಹೆಣೆದ ಬಲೆಯಲ್ಲಿ ತಾನೇ ಸಿಲುಕಿತು. ಈ ಪಂದ್ಯಕ್ಕಾಗಿ ಬಿಸಿಸಿಐ ಸ್ಪಿನ್ನರ್ ಸ್ನೇಹಿ ಪಿಚ್ ಅನ್ನು ತಯಾರಿಸಿತ್ತು. ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್​ಗಳು ಮಿಂಚುವುದಕ್ಕಿಂತ ಹೆಚ್ಚಾಗಿ ಆಸ್ಟ್ರೇಲಿಯಾದ ಸ್ಪಿನ್ನರ್‌ಗಳು, ವಿಶೇಷವಾಗಿ ನಾಥನ್ ಲಿಯಾನ್, ಭಾರತದ ಬ್ಯಾಟ್ಸ್‌ಮನ್‌ಗಳನ್ನು ಬಲೆಗೆ ಬೀಳಿಸಿದರು.

Virat Kohli: ಕಿಂಗ್ ಕೊಹ್ಲಿ ವಿಶ್ವ ಗೆದ್ದು ಇಂದಿಗೆ 15 ವರ್ಷ..!

ತತ್ತರಿಸಿದ ಭಾರತದ ಬ್ಯಾಟಿಂಗ್

ಎರಡನೇ ದಿನದಂತ್ಯಕ್ಕೆ ಭಾರತ ತಂಡದ ಎರಡನೇ ಇನ್ನಿಂಗ್ಸ್ 163 ರನ್​ಗಳಿಗೆ ಅಂತ್ಯವಾಗಿದ್ದು, ಇದರೊಂದಿಗೆ ದಿನದಾಟವನ್ನು ಅಂತ್ಯಗೊಳಿಸಲಾಗಿತ್ತು. ಇದಕ್ಕೂ ಮುನ್ನ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 109 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 197 ರನ್ ಗಳಿಸಿ 88 ರನ್‌ಗಳ ಮುನ್ನಡೆ ಸಾಧಿಸಿತ್ತು. ಇದಾದ ಬಳಿಕ ಭಾರತ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿ ಆಸ್ಟ್ರೇಲಿಯಕ್ಕೆ 76 ರನ್ ಟಾರ್ಗೆಟ್ ನೀಡಿತ್ತು. ಈ ವಿಕೆಟ್‌ನಲ್ಲಿ ಈ ಗುರಿ ಕೂಡ ಅಷ್ಟು ಸುಲಭವಾಗಿರಲಿಲ್ಲ. ಏಕೆಂದರೆ ಈ ವಿಕೆಟ್ ಸ್ಪಿನ್ನರ್‌ಗಳಿಗೆ ಸಹಾಯಕವಾಗಿದೆ, ಇದರೊಂದಿಗೆ ಟೀಂ ಇಂಡಿಯಾದಲ್ಲಿ ಮೂವರು ಅತ್ಯುತ್ತಮ ಸ್ಪಿನ್ನರ್‌ ಕೂಡ ಇದ್ದರು. ಆದರೆ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರಂತಹ ಸ್ಪಿನ್ನರ್​ಗಳಿದ್ದರೂ ಆಸ್ಟ್ರೇಲಿಯಾ ಸುಲಭವಾಗಿ ಗುರಿ ತಲುಪಿತು.

ಮೂರನೇ ದಿನದ ಮೊದಲ ಓವರ್‌ನಲ್ಲೇ ಭಾರತ ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಯಿತು. ಆಸ್ಟ್ರೇಲಿಯಾಕ್ಕೆ ಇದು ಭಾರ ಎನಿಸಿದರೂ, ಟ್ರಾವಿಸ್ ಹೆಡ್ ಮತ್ತು ಮಾರ್ನಸ್ ಲಬುಶೇನ್ ಯಾವುದೇ ವಿಕೆಟ್ ಬೀಳಲು ಅವಕಾಶ ನೀಡದೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಹೆಡ್ 53 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ ಅಜೇಯ 49 ರನ್ ಗಳಿಸಿದರೆ, ಲಬುಶೇನ್ 58 ಎಸೆತಗಳಲ್ಲಿ ಅಜೇಯ 28 ರನ್ ಗಳಿಸಿದರು.

ಮಿಂಚಿದ ಆಸ್ಟ್ರೇಲಿಯಾದ ಸ್ಪಿನ್ನರ್‌ಗಳು

ನಾಗ್ಪುರ ಮತ್ತು ದೆಹಲಿಯಂತೆ  ಈ ಪಿಚ್ ಕೂಡ ಸ್ಪಿನ್ನರ್‌ ಸ್ನೇಹಿಯಾಗಿತ್ತು. ಆದರೆ ಆಸ್ಟ್ರೇಲಿಯಾದ ಸ್ಪಿನ್ನರ್  ನಾಥನ್ ಲಿಯಾನ್ ಭಾರತದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಈ ಆಫ್ ಸ್ಪಿನ್ನರ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 11 ವಿಕೆಟ್ ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳನ್ನು ಪಡೆದ ಲಿಯಾನ್,  ಎರಡನೇ ಇನ್ನಿಂಗ್ಸ್‌ನಲ್ಲಿ ಎಂಟು ವಿಕೆಟ್ ಪಡೆದರು. ಇನ್ನೊಂದೆಡೆ ಮೊದಲ ಇನ್ನಿಂಗ್ಸ್‌ನಲ್ಲಿ ಮ್ಯಾಥ್ಯೂ ಕುಹ್ನೆಮನ್‌  ಐವರು ಭಾರತೀಯ ಬ್ಯಾಟ್ಸ್‌ಮನ್‌ಗಳನ್ನು ಬಲಿಪಶು ಮಾಡಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:47 am, Fri, 3 March 23

ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?