AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd Test: ಇಂದೋರ್ ತಲುಪಿದ ಟೀಮ್ ಇಂಡಿಯಾ ಆಟಗಾರರು: ಇಂದಿನಿಂದ ರೋಹಿತ್ ಪಡೆಯ ಅಭ್ಯಾಸ ಶುರು

India vs Australia 3rd Test: ಟೀಮ್ ಇಂಡಿಯಾ ಇನ್ನೊಂದು ಪಂದ್ಯದಲ್ಲಿ ಗೆದ್ದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅಧಿಕೃತವಾಗಿ ನಂಬರ್ ಒನ್ ಪಟ್ಟಕ್ಕೆ ಏರುವ ಜೊತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್​ಗೆ ಬಹುತೇಕ ಕಾಲಿಟ್ಟಂತೆ. ಇದೀಗ ತೃತೀಯ ಟೆಸ್ಟ್​ಗಾಗಿ ರೋಹಿತ್ ಪಡೆ ಇಂದೋರ್​ಗೆ ಬಂದಿಳಿದಿದೆ.

IND vs AUS 3rd Test: ಇಂದೋರ್ ತಲುಪಿದ ಟೀಮ್ ಇಂಡಿಯಾ ಆಟಗಾರರು: ಇಂದಿನಿಂದ ರೋಹಿತ್ ಪಡೆಯ ಅಭ್ಯಾಸ ಶುರು
Team India
Vinay Bhat
|

Updated on:Feb 26, 2023 | 7:39 AM

Share

ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲೆರಡು ಟೆಸ್ಟ್ ಪಂದ್ಯ ಮುಕ್ತಾಯಗೊಂಡಿದೆ. ಈ ಎರಡೂ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆಲುವು ಸಾಧಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಅಲ್ಲದೆ ಬಾರ್ಡರ್- ಗವಾಸ್ಕರ್ (Border Gavaskar Trophy) ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ನಾಗ್ಪುರ ಹಾಗೂ ದೆಹಲಿಯಲ್ಲಿ ನಡೆದ ಮೊದಲ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗರೂ ಪಡೆಗೆ ಇದುವರೆಗೆ ಒಂದೂ ಶುಭಸುದ್ದಿ ಸಿಕ್ಕಿಲ್ಲ. ಇನ್ನೇನಿದ್ದರು ಕನಿಷ್ಠ ಸಮಬಲಕ್ಕೆ ಹೋರಾಟ ನಡೆಸಬೇಕಿದೆ. ಇತ್ತ ಭಾರತ ಕ್ಲೀನ್ ಸ್ವೀಪ್​ ನತ್ತ ಚಿತ್ತ ನೆಟ್ಟಿದೆ.

ಆಸ್ಟ್ರೇಲಿಯಾ ಟೆಸ್ಟ್ ಸರಣಿಯನ್ನು ಸಮಬಲ ಸಾಧಿಸಬೇಕು ಎಂದರೆ ಉಳಿದಿರುವ ಎರಡೂ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಅತ್ತ ಟೀಮ್ ಇಂಡಿಯಾ ಇನ್ನೊಂದು ಪಂದ್ಯದಲ್ಲಿ ಗೆದ್ದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅಧಿಕೃತವಾಗಿ ನಂಬರ್ ಒನ್ ಪಟ್ಟಕ್ಕೆ ಏರುವ ಜೊತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್​ಗೆ ಬಹುತೇಕ ಕಾಲಿಟ್ಟಂತೆ. ಇದೀಗ ತೃತೀಯ ಟೆಸ್ಟ್​ಗಾಗಿ ರೋಹಿತ್ ಪಡೆ ಇಂದೋರ್​ಗೆ ಬಂದಿಳಿದಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುರುವಾಗಲಿದೆ. ಶನಿವಾರ ಸಂಜೆ ಹೊತ್ತಿಗೆ ಭಾರತೀಯ ಆಟಗಾರರು ಇಂದೋರ್​ಗೆ ಬಂದರು. ಇಂದು ನೆಟ್​ನಲ್ಲಿ ಅಭ್ಯಾಸ ಶುರು ಮಾಡಲಿದ್ದಾರೆ. ಅತ್ತ ಆಸೀಸ್ ತಂಡದ ಆಟಗಾರರು ಇನ್ನೂ ಡೆಲ್ಲಿಯಲ್ಲೇ ನೆಲೆಸಿದ್ದಾರೆ. ದ್ವಿತೀಯ ಟೆಸ್ಟ್ ನಡೆದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಬ್ಯಾಟಿಂಗ್-ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದಾರೆ. ನಾಲ್ಕರಿಂದ ಐದು ಗಂಟೆಗಳ ಕಾಲ ಆಸೀಸ್ ಪ್ಲೇಯರ್ಸ್ ನೆಟ್​ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿದ್ದು ಮೂಲಗಳ ಪ್ರಕಾರ ಇಂದು ಇಂದೋರ್​ಗೆ ಹೊರಡಲಿದ್ದಾರೆ.

ಇದನ್ನೂ ಓದಿ
Image
IPL 2023: ಐಪಿಎಲ್​ನಲ್ಲಿ ಮಿಂಚಲಿರುವ 5 ಯುವ ಆಟಗಾರರನ್ನು ಹೆಸರಿಸಿದ ಸೌರವ್ ಗಂಗೂಲಿ
Image
VIDEO: ಹೊಸ ಅವತಾರದಲ್ಲಿ ಕಾಣಿಸಿಕೊಂಡ ಡೇವಿಡ್ ವಾರ್ನರ್: ವಿಡಿಯೋ ವೈರಲ್
Image
IND vs AUS: 3ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಮುಂದಿದೆ 3 ಬಿಗ್ ಟಾರ್ಗೆಟ್
Image
Virat Kohli: ತನ್ನನ್ನು ಅರ್ಥ ಮಾಡಿಕೊಂಡ ಏಕೈಕ ಕ್ರಿಕೆಟಿಗನನ್ನು ಹೆಸರಿಸಿದ ವಿರಾಟ್ ಕೊಹ್ಲಿ

James Anderson: ಅ್ಯಂಡರ್ಸನ್ ಮಾರಕ ದಾಳಿಗೆ ಶೇನ್ ವಾರ್ನ್ ವಿಶ್ವ ದಾಖಲೆ ಶೇಕಿಂಗ್..!

ಮೂರನೇ ಟೆಸ್ಟ್​ಗೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ರಣಜಿ ಟ್ರೋಫಿ ಫೈನಲ್​ಗಾಗಿ ತಂಡ ತೊರೆದಿದ್ದ ಜಯದೇವ್ ಉನಾದ್ಕಟ್ ಮರಳಿದ್ದಾರೆ. ಅತ್ತ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಪ್ಯಾಟ್ ಕಮಿನ್ಸ್ ಇಡೀ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದು ತಾಯಿಯ ಆರೋಗ್ಯ ಹದಗೆಟ್ಟಿರುವುದರಿಂದ ಭಾರತಕ್ಕೆ ಮರಳಿ ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇನ್ನು ಮೊಣಕೈ ಸಮಸ್ಯೆಯಿಂದಾಗಿ ಈಗಾಗಲೇ ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇವರೊಂದಿಗೆ ಹ್ಯಾಜಲ್‌ವುಡ್ ಕೂಡ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಮ್ಯಾಥ್ಯೂ ರೆನ್ಶಾ ಕೂಡ ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಆಷ್ಟನ್ ಅಗರ್ ಕೂಡ ಅಲಭ್ಯರಾಗಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್ , ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್ , ಪೀಟರ್ ಹ್ಯಾಂಡ್ಸ್‌ಕಾಂಬ್ , ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಮಿಚೆಲ್ ಸ್ಟಾರ್ಕ್​, ಮ್ಯಾಥ್ಯೂ ಕುಹ್ನೆಮನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 am, Sun, 26 February 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು