AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್ ವಿರುದ್ಧ ತವರಿನಲ್ಲಿ ಬೇಡದ ದಾಖಲೆ ಬರೆದ ಟೀಂ ಇಂಡಿಯಾ

IND vs AUS: ಕಾಂಗರೂಗಳ ಸ್ಪಿನ್ ದಾಳಿಗೆ ತತ್ತರಿಸಿದ ರೋಹಿತ್ ಬಳಗದ ಯಾವ ಬ್ಯಾಟರ್​ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿರಲಿಲ್ಲ. ಹೀಗಾಗಿ 34 ಓವರ್​ಗಳ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 109 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿತು

IND vs AUS: ಆಸೀಸ್ ವಿರುದ್ಧ ತವರಿನಲ್ಲಿ ಬೇಡದ ದಾಖಲೆ ಬರೆದ ಟೀಂ ಇಂಡಿಯಾ
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Mar 01, 2023 | 4:48 PM

Share

ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಕೇವಲ 109 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ. ಕಾಂಗರೂಗಳ ಸ್ಪಿನ್ ದಾಳಿಗೆ ತತ್ತರಿಸಿದ ರೋಹಿತ್ ಬಳಗದ ಯಾವ ಬ್ಯಾಟರ್​ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿರಲಿಲ್ಲ. ಹೀಗಾಗಿ 34 ಓವರ್​ಗಳ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ (Team India) 109 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿತು. ಈ ಅಲ್ಪ ರನ್​ಗಳಿಗೆ ಆಲ್​ಔಟ್ ಆಗುವ ಮೂಲಕ ತವರು ನೆಲದಲ್ಲಿ ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಗಳಿಸಿದ ನಾಲ್ಕನೇ ಅತಿ ಕಡಿಮೆ ಸ್ಕೋರ್ ಇದಾಗಿದೆ. ಕಳೆದ 20 ವರ್ಷಗಳಲ್ಲಿ ಮೂರು ಬಾರಿ ಟೀಂ ಇಂಡಿಯಾ 109ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಬೇಡದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದೆ.

4ನೇ ಬಾರಿಗೆ ಅತ್ಯಂತ ಕಡಿಮೆ ಸ್ಕೋರ್

ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಮಾಡಿದ ಅತಿ ಕಡಿಮೆ ಸ್ಕೋರ್ 104 ರನ್. 2004ರಲ್ಲಿ ಮುಂಬೈನಲ್ಲಿ ನಡೆದ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಕೇವಲ 104 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಆ ಬಳಿಕ 2017ರಲ್ಲಿ ಪುಣೆಯಲ್ಲಿ ನಡೆದ ಟೆಸ್ಟ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ 105 ರನ್​ಗಳಿಗೆ ಸೀಮಿತವಾಗಿದ್ದ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್​ನಲ್ಲಿ 107 ರನ್​ಗಳಿಗೆ ಆಲೌಟ್ ಆಗಿತ್ತು.

ಇದರೊಂದಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿ 2023 ರ ಮೂರನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಹೆಸರಿನಲ್ಲಿ ಮತ್ತೊಂದು ಕೆಟ್ಟ ದಾಖಲೆ ದಾಖಲಾಗಿದೆ. ಮೂರನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಕೇವಲ 33.2 ಓವರ್‌ ಮಾತ್ರ ಬ್ಯಾಟಿಂಗ್ ಮಾಡಿತು. ಈ ಮೂಲಕ ಟೀಂ ಇಂಡಿಯಾ ತವರಿನಲ್ಲಿ ಆಡಿದ ಟೆಸ್ಟ್​ ಸರಣಿಯಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಇಷ್ಟು ಕಡಿಮೆ ಓವರ್ ಬ್ಯಾಟಿಂಗ್ ಮಾಡಿದ್ದು, ಇದು ನಾಲ್ಕನೇ ಬಾರಿ.

IND vs AUS: ಜಡೇಜಾ ವಿಕೆಟ್ ಉರುಳಿಸಿ ಶೇನ್ ವಾರ್ನ್ ದಾಖಲೆ ಮುರಿದ ನಾಥನ್ ಲಿಯಾನ್

ಆಸೀಸ್ ಸ್ಪಿನ್ನರ್​ಗಳ ಮ್ಯಾಜಿಕ್

ನಾಗ್ಪುರ ಮತ್ತು ದೆಹಲಿ ಟೆಸ್ಟ್​ನಲ್ಲಿ ಆಸೀಸ್ ಬೌಲರ್​ಗಳನ್ನು ಬೆಂಡೆತ್ತಿದ್ದ ಟೀಂ ಇಂಡಿಯಾ ಇಂದೋರ್​ ಟೆಸ್ಟ್​ನಲ್ಲಿ ಅಟ್ಟರ್ ಫ್ಲಾಪ್ ಆಯಿತು. ಪಂದ್ಯದ ಮೊದಲ ದಿನದ ಎರಡನೇ ಸೆಷನ್‌ನಲ್ಲಿ ಟೀಂ ಇಂಡಿಯಾ ಆಲೌಟ್ ಆಯಿತು. ಭಾರತದ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಹೊತ್ತು ನಿಲ್ಲಲು ಅವಕಾಶ ನೀಡದ ಆಸ್ಟ್ರೇಲಿಯಾದ ಸ್ಪಿನ್ನರ್‌ಗಳು ಪರಾಕ್ರಮ ತೊರಿದರು. ಇಲ್ಲಿ ಮ್ಯಾಥ್ಯೂ ಕುಹ್ನೆಮನ್ ಐದು ವಿಕೆಟ್ ಪಡೆದು ಮಿಂಚಿದರೆ, ನಾಥನ್ ಲಿಯಾನ್ ಮೂರು ಮತ್ತು ಟಾಡ್ ಮರ್ಫಿ ಒಂದು ವಿಕೆಟ್ ಪಡೆದರು.

ಬಾರ್ಡರ್ ಗವಾಸ್ಕರ್ ಟ್ರೋಫಿ 2023 ರ ಭಾಗವಾಗಿ ಮೂರನೇ ಟೆಸ್ಟ್‌ನಲ್ಲಿ ಭಾರತದ ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 27 ರನ್ ಸೇರಿಸಿತು. ಆದರೆ ಮೊದಲ ವಿಕೆಟ್ ಪತನವಾದ ತಕ್ಷಣ, ಬ್ಯಾಕ್ ಟು ಬ್ಯಾಕ್ ವಿಕೆಟ್‌ಗಳನ್ನು ಕಳೆದುಕೊಂಡಿತು. 18 ರನ್‌ಗಳ ಅಂತರದಲ್ಲಿ ಐವರು ಬ್ಯಾಟ್ಸ್‌ಮನ್‌ಗಳು ಔಟಾದರು. 45 ರನ್​ಗಳಿಗೆ ತಂಡದ ಅರ್ಧದಷ್ಟು ಮಂದಿ ಪೆವಿಲಿಯನ್ ತಲುಪಿದರು. ಆ ಬಳಿಕ ಕೆಳ ಕ್ರಮಾಂಕದ ಆಟಗಾರರು ಕೆಲಕಾಲ ಹೋರಾಟ ನಡೆಸಿದರೂ ಅಂತಿಮವಾಗಿ ಭಾರತ ತಂಡ 109 ರನ್ ಗಳಿಸಲಷ್ಟೇ ಶಕ್ತವಾಯಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು