AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿರಾಟ್ ಕೊಹ್ಲಿಗೆ ಚೆಲ್ಲಾಟ…ರಾಹುಲ್ ದ್ರಾವಿಡ್​ಗೆ ಪ್ರಾಣ ಸಂಕಟ..!

India vs Australia 3rd Test: ಶ್ರೀಕರ್ ಭರತ್ 17 ರನ್​ಗಳಿಸಿದರೆ, ಅಶ್ವಿನ್ 3 ರನ್ ಬಾರಿಸಿ ಔಟಾದರು. ಹಾಗೆಯೇ ಸಿರಾಜ್ ರನೌಟ್ ಆದರೆ, ಅಕ್ಷರ್ ಪಟೇಲ್ 12 ರನ್​ಗಳಿಸಿ ಔಟಾಗದೆ ಉಳಿದರು. ಇದರ ನಡುವೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಉಮೇಶ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

Viral Video: ವಿರಾಟ್ ಕೊಹ್ಲಿಗೆ ಚೆಲ್ಲಾಟ...ರಾಹುಲ್ ದ್ರಾವಿಡ್​ಗೆ ಪ್ರಾಣ ಸಂಕಟ..!
Virat Kohli - Rahul Dravid
TV9 Web
| Edited By: |

Updated on: Mar 01, 2023 | 3:58 PM

Share

India vs Australia 3rd Test: ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕನ ನಿರೀಕ್ಷೆಯು 6ನೇ ಓವರ್​ನಲ್ಲೇ ಅಂತ್ಯವಾಗಿತ್ತು. ಕೇವಲ 12 ರನ್​ಗಳಿಸಿ ರೋಹಿತ್ ಶರ್ಮಾ ಮೊದಲಿಗರಾಗಿ ಹೊರನಡೆದರೆ, ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (21) ಕೂಡ ಹೆಜ್ಜೆ ಹಾಕಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ 1 ರನ್​ಗಳಿಸಿ ನಾಥನ್ ಲಿಯಾನ್ ಎಸೆತದಲ್ಲಿ​ ಕ್ಲೀನ್ ಬೌಲ್ಡ್ ಆದರು.

ಇದರ ನಡುವೆ ವಿರಾಟ್ ಕೊಹ್ಲಿ 52 ಎಸೆತಗಳನ್ನು ಎದುರಿಸಿ ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನ ಮಾಡಿದರೂ, ಮರ್ಫಿ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ 22 ರನ್​ಗಳೊಂದಿಗೆ ಹೊರನಡೆಯಬೇಕಾಯಿತು. ಆ ಬಳಿಕ ಬಂದ ರವೀಂದ್ರ ಜಡೇಜಾ (4), ಶ್ರೇಯಸ್ ಅಯ್ಯರ್ (0) ಕೂಡ ಹೋದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದ್ದರು.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇನ್ನು ಶ್ರೀಕರ್ ಭರತ್ 17 ರನ್​ಗಳಿಸಿದರೆ, ಅಶ್ವಿನ್ 3 ರನ್ ಬಾರಿಸಿ ಔಟಾದರು. ಹಾಗೆಯೇ ಸಿರಾಜ್ ರನೌಟ್ ಆದರೆ, ಅಕ್ಷರ್ ಪಟೇಲ್ 12 ರನ್​ಗಳಿಸಿ ಔಟಾಗದೆ ಉಳಿದರು. ಇದರ ನಡುವೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಉಮೇಶ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡು  ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಉಮೇಶ್ ಯಾದವ್ ಟಾಡ್ ಮರ್ಫಿ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್​ಗಳನ್ನು ಸಿಡಿಸಿದರು. ಅತ್ತ ಉಮೇಶ್ ಬ್ಯಾಟ್​ನಿಂದ ಭರ್ಜರಿ ಸಿಕ್ಸ್ ಮೂಡಿ ಬರುತ್ತಿದ್ದಂತೆ ಇತ್ತ ವಿರಾಟ್ ಕೊಹ್ಲಿ ಡಗೌಟ್​ನಲ್ಲಿ ಸಂಭ್ರಮಿಸುತ್ತಿರುವುದು ಕಂಡು ಬಂತು. ಇದೇ ವೇಳೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಚಿಂತಿತರಾದರು.

ಏಕೆಂದರೆ ಅಂತಿಮ ಹಂತದಲ್ಲಿ ಒಂದೆಡೆ ಅಕ್ಷರ್ ಪಟೇಲ್ ಕ್ರೀಸ್​ನಲ್ಲಿದ್ದರೂ ಉಮೇಶ್ ಯಾದವ್ ಬಿರುಸಿನ ಬ್ಯಾಟಿಂಗ್​ಗೆ ಮುಂದಾಗಿರುವುದು ದ್ರಾವಿಡ್ ಅವರ ಚಿಂತೆಗೆ ಕಾರಣವಾಗಿತ್ತು. ಆದರೆ ಯಾದವ್ ಭರ್ಜರಿ ಸಿಕ್ಸ್ ಸಿಡಿಸುತ್ತಿದ್ದಂತೆ ಕಿಂಗ್ ಕೊಹ್ಲಿ ಭರ್ಜರಿಯಾಗಿ ಸಂಭ್ರಮಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ  ವಿರಾಟ್ ಕೊಹ್ಲಿಗೆ ಚೆಲ್ಲಾಟವಾದರೆ, ದ್ರಾವಿಡ್​ಗೆ ಪ್ರಾಣಸಂಕಟ ಎಂಬ ಟ್ಯಾಗ್​ಲೈನ್​ನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ರಾಹುಲ್ ದ್ರಾವಿಡ್ ಅವರ ನಿರೀಕ್ಷೆಯಂತೆ ಉಮೇಶ್ ಯಾದವ್ 2 ಸಿಕ್ಸ್​ಗಳನ್ನು ಬಾರಿಸಿದ ಬಳಿಕ 13 ಎಸೆತಗಳಲ್ಲಿ 17 ರನ್​ಗಳಿಸಿ ಔಟಾದರು. ಅಲ್ಲದೆ ಟೀಮ್ ಇಂಡಿಯಾ 109 ರನ್​ಗೆ ಆಲೌಟ್ ಆಯಿತು. ಅತ್ತ 12 ರನ್​ಗಳಿಸಿ ಕ್ರೀಸ್ ಕಚ್ಚಿ ನಿಂತಿದ್ದ ಅಕ್ಷರ್ ಪಟೇಲ್ ಅಜೇಯರಾಗಿ ಉಳಿದರು.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ರವೀಂದ್ರ ಜಡೇಜಾ , ಶ್ರೀಕರ್ ಭರತ್ ( ವಿಕೆಟ್ ಕೀಪರ್ ) , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಉಮೇಶ್ ಯಾದವ್ , ಮೊಹಮ್ಮದ್ ಸಿರಾಜ್

ಇದನ್ನೂ ಓದಿ: Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಟ್ರಾವಿಸ್ ಹೆಡ್ , ಮಾರ್ನಸ್ ಲ್ಯಾಬುಶೇನ್ , ಸ್ಟೀವ್ ಸ್ಮಿತ್ (ನಾಯಕ) , ಪೀಟರ್ ಹ್ಯಾಂಡ್ಸ್​ಕ್ಯಾಂಬ್ , ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಟಾಡ್ ಮರ್ಫಿ , ಮ್ಯಾಥ್ಯೂ ಕುಹ್ನೆಮನ್.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ