AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ಕಮಾಲ್ ಮಾಡಬೇಕಿದೆ ಬೌಲರ್​ಗಳು: ಎರಡನೇ ದಿನಕ್ಕೆ ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್ ಏನು?

India vs Australia 4th Test: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ದಿನವೇ ಯಶಸ್ಸು ಸಾಧಿಸಿದೆ. ಉಸ್ಮಾನ್ ಖವಾಜಾ ಆಕರ್ಷಕ ಶತಕ ಸಿಡಿಸಿ ಮಿಂಚಿದರೆ, ಕ್ಯಾಮ್ರೋನ್ ಗ್ರೀನ್ ಅರ್ಧಶತಕದ ಅಂಚಿನಲ್ಲಿದ್ದು ಇಂದು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

IND vs AUS 4th Test: ಕಮಾಲ್ ಮಾಡಬೇಕಿದೆ ಬೌಲರ್​ಗಳು: ಎರಡನೇ ದಿನಕ್ಕೆ ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್ ಏನು?
IND vs AUS 4th Test
Vinay Bhat
|

Updated on:Mar 10, 2023 | 7:48 AM

Share

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ (Border- Gavaskar Trophy) ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯ ಈ ಹಿಂದಿನ ಟೆಸ್ಟ್​ಗಿಂತ ಭಿನ್ನವಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಬ್ಯಾಟರ್​ಗಳು ಸಂಪೂರ್ಣ ವೈಫಲ್ಯ ಅನುಭವಿಸುತ್ತಿದ್ದರು, ಸ್ಪಿನ್ನರ್​ಗಳು ಮಾರಕವಾಗಿ ಪರಿಣಮಿಸಿದ್ದರು. ಆದರೆ, ಈ ಟೆಸ್ಟ್​ನಲ್ಲಿ ಬ್ಯಾಟರ್​ಗಳು ರನ್ ಕಲೆಹಾಕುತ್ತಿದ್ದಾರೆ. ಸ್ಪಿನ್ನರ್​ಗಳ ಜಾದು ನಡೆಯುತ್ತಿಲ್ಲ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ದಿನವೇ ಯಶಸ್ಸು ಸಾಧಿಸಿದೆ. ಉಸ್ಮಾನ್ ಖವಾಜಾ (Usman Khawaja) ಆಕರ್ಷಕ ಶತಕ ಸಿಡಿಸಿ ಮಿಂಚಿದರೆ, ಕ್ಯಾಮ್ರೋನ್ ಗ್ರೀನ್ ಅರ್ಧಶತಕದ ಅಂಚಿನಲ್ಲಿದ್ದು ಇಂದು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಟೀಮ್ ಇಂಡಿಯಾ ಬೌಲರ್​ಗಳು ಆಸೀಸ್ ವಿಕೆಟ್ ಕೀಳಲು ನಾನಾ ಪ್ರಯತ್ನ ನಡೆಸಿದರೂ ಸಂಪೂರ್ಣ ಯಶಸ್ಸು ಸಿಗಲಿಲ್ಲ. ಸ್ಪಿನ್ನರ್​ಗಳಿಂದ ಕೂಡ ಹೆಚ್ಚಿನ ವಿಕೆಟ್ ಕೀಳಲು ಸಾಧ್ಯವಾಗಲಿಲ್ಲ. ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಖಾತೆಗೆ ಒಂದು ವಿಕೆಟ್ ಸೇರಿತಷ್ಟೆ. ಮೊದಲ ದಿನವಾಟದ ಅಂತ್ಯಕ್ಕೆ ಕಾಂಗರೂ ಪಡೆ 4 ವಿಕೆಟ್ ನಷ್ಟಕ್ಕೆ 255 ರನ್ ಕಲೆಹಾಕಿದೆ. ಇಂದು ದ್ವಿತೀಯ ದಿನದಾಟ ಟೀಮ್ ಇಂಡಿಯಾಕ್ಕೆ ಮುಖ್ಯವಾಗಿದೆ. ಪಿಚ್ ಯಾವರೀತಿ ವರ್ತಿಸುತ್ತದೆ ಎಂಬುದನ್ನು ಗಮನಿಸಿ ಬೌಲರ್​ಗಳ ಆಯ್ಕೆ ಮಾಡುವ ನಿರ್ಧಾರ ರೋಹಿತ್ ತಲೆಮೇಲಿದೆ.

IND vs AUS 4th Test: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಲಾಭವೇನು? ಸೋತರೆ ನಷ್ಟವೇನು?

ಇದನ್ನೂ ಓದಿ
Image
Gujarat Titans Jersey: ಹೊಸ ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟಾನ್ಸ್
Image
LLC 2023: ಲೆಜೆಂಡ್ಸ್​ ಲೀಗ್​ನ ಮೂರು ತಂಡಗಳು ಪ್ರಕಟ
Image
DC vs MI, WPL 2023: ಮುಂಬೈ ಇಂಡಿಯನ್ಸ್​ಗೆ ಭರ್ಜರಿ ಜಯ
Image
Usman Khawaja: ದಶಕಗಳ ಬಳಿಕ ಆಸ್ಟ್ರೇಲಿಯಾದ ಎಡಗೈ ದಾಂಡಿಗನಿಂದ ಭಾರತದಲ್ಲಿ ಶತಕ..!

ಆಸೀಸ್ ಪರ ಓಪನರ್​ಗಳಾಗಿ ಕಣಕ್ಕಿಳಿದ ಟ್ರಾವಿಸ್ ಹೆಡ್ ಮತ್ತು ಉಸ್ಮಾನ್ ಖವಾಜಾ ಉತ್ತಮ ಆರಂಭ ಒದಗಿಸಿದರು. ಈ ಜೋಡಿ 61 ರನ್​ಗಳ ಕಾಣಿಕೆ ನೀಡಿತು. ಆಕ್ರಮಣಕಾರಿ ಆಟವಾಡಿದ ಹೆಡ್ (32) ಅವರನ್ನು ಅಶ್ವಿನ್ ವಾಪಸ್ ಪೆವಿಲಿಯನ್​ ಕಳುಹಿಸುವಲ್ಲಿ ಸಫಲರಾದರು. ಹೆಡ್​ ಔಟಾದ ಬೆನ್ನೆಲ್ಲೇ 3 ರನ್​ ಗಳಿಸಿದ್ದ ಮಾರ್ನಸ್ ಲಾಬುಶೇನ್​ ಶಮಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಭೋಜನ ವಿರಾಮದ ವೇಳೆಗೆ ಆಸೀಸ್ ಎರಡು ವಿಕೆಟ್ ನಷ್ಟಕ್ಕೆ 75 ರನ್ ಗಳಿಸಿತ್ತು. ಎರಡನೇ ಸೆಷನ್​ನಲ್ಲಿ ಆಸೀಸ್ ಬ್ಯಾಟರ್​ಗಳು ಎಚ್ಚರಿಕೆಯಿಂದ ಬ್ಯಾಟ್ ಬೀಸಿದರು.

ಅಪಾಯಕಾರಿಯಾಗಿ ಗೋಚರಿಸುತ್ತಿದ್ದ ಸ್ಟೀವ್ ಸ್ಮಿತ್ (38) ಅವರನ್ನು ಚಹಾ ವಿರಾಮದ ನಂತರ ರವೀಂದ್ರ ಜಡೇಜಾ ಔಟ್ ಮಾಡಿದರು. ಇದು ಉಸ್ಮಾನ್ ಅವರೊಂದಿಗೆ ಮೂರನೇ ವಿಕೆಟ್‌ಗೆ ಕಲೆ ಹಾಕಿದ್ದ 79 ರನ್‌ಗಳ ಜೊತೆಯಾಟವನ್ನು ಅಂತ್ಯಗೊಳಿಸಿತು. ಸ್ಟೀವ್ ಸ್ಮಿತ್ ಔಟಾದ ಬಳಿಕ ಕ್ರೀಸ್​ಗೆ ಬಂದ ಪೀಟರ್ ಹ್ಯಾಂಡ್ಸ್ ಕಾಂಬ್ 17 ರನ್​ಗೆ ನಿರ್ಗಮಿಸಿದರು. ಬಳಿಕ ಬಂದ ಕ್ಯಾಮ್ರೋನ್ ಗ್ರೀನ್ ಆಕ್ರಮಣಕಾರಿ ಆಟವಾಡಿದರು. ದಿನದಾಟದ ಅಂತ್ಯವಾಗುವ ವೇಳೆ ಖವಾಜಾ (104) ಶತಕ ಸಿಡಿಸಿ ಮಿಂಚಿದರೆ, ಗ್ರೀನ್ 49 ರನ್ ಬಾರಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:45 am, Fri, 10 March 23

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ