IND vs AUS: ನಿರ್ಣಾಯಕ ಇನಿಂಗ್ಸ್​ನಲ್ಲಿ ಕೈಕೊಟ್ಟ ಕೆಎಲ್ ರಾಹುಲ್

|

Updated on: Dec 30, 2024 | 6:50 AM

India vs Australia: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಟೀವ್ ಸ್ಮಿತ್ (140) ಭರ್ಜರಿ ಶತಕ ಸಿಡಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಪೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ (114) ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಸೆಂಚುರಿ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 369 ರನ್​​ಗಳಿಸಿ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾದ ದ್ವಿತೀಯ ಇನಿಂಗ್ಸ್ ಬ್ಯಾಟಿಂಗ್ ನಡೆಯುತ್ತಿದೆ.

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ್ದರು. ಪರ್ತ್​, ಅಡಿಲೇಡ್ ಹಾಗೂ ಬ್ರಿಸ್ಬೇನ್​ನಲ್ಲೂ ಆರಂಭಿಕನಾಗಿ ರಾಹುಲ್ ಉತ್ತಮ ಪ್ರದರ್ಶನವನ್ನೇ ನೀಡಿದ್ದರು. ಆದರೆ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ರೋಹಿತ್ ಶರ್ಮಾ ಮತ್ತೆ ಆರಂಭಿಕನಾಗಿ ಕಣಕ್ಕಿಳಿದ ಪರಿಣಾಮ ರಾಹುಲ್ 3ನೇ ಕ್ರಮಾಂಕದಲ್ಲಿ ಆಡಬೇಕಾಯಿತು.

ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ 24 ರನ್ ಬಾರಿಸಿದ್ದರು. ಆದರೆ ನಿರ್ಣಾಯಕವಾಗಿರುವ 5ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾಗಿದ್ದಾರೆ.

ಪ್ಯಾಟ್ ಕಮಿನ್ಸ್ ಎಸೆದ ಬೌನ್ಸಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ಕೆಎಲ್ ರಾಹುಲ್ ಸ್ಲಿಪ್​ನಲ್ಲಿದ್ದ ಉಸ್ಮಾನ್ ಖ್ವಾಜಾಗೆ ಕ್ಯಾಚಿತ್ತು ನಿರ್ಗಮಿಸಿದ್ದಾರೆ. ಈ ಮೂಲಕ ಭಾರತದ ಪಾಲಿಗೆ ನಿರ್ಣಾಯಕವಾಗಿರುವ ಇನಿಂಗ್ಸ್​ನಲ್ಲಿ ರನ್ ಖಾತೆ ತೆರೆಯುವಲ್ಲಿ ಕನ್ನಡಿಗ ವಿಫಲನಾಗಿದ್ದಾನೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 474 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​​ ಗಳಿಸಿತು. 105 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 234 ರನ್​ಗಳಿಸಿ ಆಲೌಟ್ ಆಗಿದೆ.

ಅದರಂತೆ ಇದೀಗ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳ ಗುರಿ ಪಡೆದುಕೊಂಡಿದೆ. ಈ ಗುರಿಯನ್ನು ಬೆನ್ನತ್ತುತ್ತಿರುವ ಟೀಮ್ ಇಂಡಿಯಾ 22 ಓವರ್​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 30 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ.