AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ವೀಕ್ಷಕ ವಿವರಣೆ ನೀಡಲಿದ್ದಾರೆ ಮೋದಿ; ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ 4ನೇ ಟೆಸ್ಟ್

IND vs AUS: ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದ್ಯ ಭಾರತ ಪ್ರವಾಸದಲ್ಲಿದ್ದು, ಗುರುವಾರ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಂದ್ಯವನ್ನು ವೀಕ್ಷಿಸಲಿದ್ದಾರೆ.

IND vs AUS: ವೀಕ್ಷಕ ವಿವರಣೆ ನೀಡಲಿದ್ದಾರೆ ಮೋದಿ; ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ 4ನೇ ಟೆಸ್ಟ್
ನರೇಂದ್ರ ಮೋದಿImage Credit source: insidesport
ಪೃಥ್ವಿಶಂಕರ
|

Updated on:Mar 06, 2023 | 6:05 PM

Share

ಭಾರತ ಮತ್ತು ಆಸ್ಟ್ರೇಲಿಯಾ (India and Australia) ನಡುವಿನ ಬಾರ್ಡರ್ ಗವಾಸ್ಕರ್ (Border-Gavaskar Trophy) ಸರಣಿಯ ಕೊನೆಯ ಪಂದ್ಯವು ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಭಾರತ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದು, ಕೊನೆಯ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇತ್ತ ಕೊನೆಯ ಟೆಸ್ಟ್ ಪಂದ್ಯ ಗೆದ್ದಿರುವ ಆಸ್ಟ್ರೇಲಿಯಾವು 4ನೇ ಟೆಸ್ಟ್ ಗೆದ್ದು, ಸರಣಿಯನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಲಿದೆ. ಹೀಗಾಗಿ ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯ ಕುತೂಹಲ ಮೂಡಿಸಿದೆ. ಅಲ್ಲದೆ ಈ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಭಾರತ ಮತ್ತು ಆಸ್ಟ್ರೇಲಿಯಾದ ಪ್ರಧಾನಿಗಳು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉಪಸ್ಥಿತರಿರಲಿದ್ದಾರೆ. ಟಿವಿ9 ಹಿಂದಿ ವಾಹಿನಿಯ ವರದಿ ಪ್ರಕಾರ, 4ನೇ ಟೆಸ್ಟ್ ಪಂದ್ಯದಲ್ಲಿ ಪ್ರಧಾನಿ ಮೋದಿಯವರು (PM Narendra Modi) ಪಂದ್ಯದ ವೀಕ್ಷಕ ವಿವರಣೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದ್ಯ ಭಾರತ ಪ್ರವಾಸದಲ್ಲಿದ್ದು, ಗುರುವಾರ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಂದ್ಯವನ್ನು ವೀಕ್ಷಿಸಲಿದ್ದಾರೆ. ಅಲ್ಲದೆ ಇನ್ನೊಂದು ವಿಶೇಷತೆ ಎಂದರೆ, ನರೇಂದ್ರ ಮೋದಿಯವರು ತಮ್ಮ ಹೆಸರಿನ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಆಗಮಿಸುತ್ತಿರುವುದು ಇದೇ ಮೊದಲು.

IND vs AUS: ಕನ್ನಡಿಗ ಅನಿಲ್ ಕುಂಬ್ಳೆ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಅಶ್ವಿನ್..!

ವೀಕ್ಷಕ ವಿವರಣೆ ನೀಡುತ್ತಾರಾ ಪ್ರಧಾನಿ ಮೋದಿ?

ಪ್ರಧಾನಿ ಮೋದಿ ನಾಲ್ಕು ದಿನಗಳ ಕಾಲ ತವರು ರಾಜ್ಯದಲ್ಲಿಯೇ ಇರಲಿದ್ದಾರೆ. ಮಾರ್ಚ್ 8 ರಂದು ಬೆಳಗ್ಗೆ 8 ಗಂಟೆಗೆ ಗುಜರಾತ್ ತಲುಪಲಿದ್ದು, ಅಲ್ಲಿಂದ ಆಸ್ಟ್ರೇಲಿಯಾ ಪ್ರಧಾನಿ ಜೊತೆ ಸ್ಟೇಡಿಯಂ ತಲುಪಲಿದ್ದಾರೆ. ಟಾಸ್ ವೇಳೆ ಮೋದಿ ಕ್ರೀಡಾಂಗಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದೇ ಸಮಯದಲ್ಲಿ, ಪಂದ್ಯದ ವೇಳೆ ಮೋದಿ ಕಾಮೆಂಟರಿ ಮಾಡುವುದನ್ನು ಸಹ ನೋಡಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಆಸೀಸ್​ಗೆ​ ಸರಣಿ ಡ್ರಾ ಮಾಡಿಕೊಳ್ಳುವ ಹಂಬಲ

ನಾಲ್ಕು ಪಂದ್ಯಗಳ ಸರಣಿಯ ಮೊದಲೆರಡು ಟೆಸ್ಟ್‌ಗಳನ್ನು ಮೂರು ದಿನಗಳ ಅಂತರದಲ್ಲಿ ಸೋತ ನಂತರ ಬಾರ್ಡರ್-ಗವಾಸ್ಕರ್ ಸರಣಿಯನ್ನು ಕಳೆದುಕೊಂಡಿದ್ದ ಆಸ್ಟ್ರೇಲಿಯಾ ತಂಡ ಇಂದೋರ್ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪುನರಾಗಮನ ಮಾಡಿದೆ. ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಸ್ಟೀವ್ ಸ್ಮಿತ್‌, ತಂಡಕ್ಕೆ ಸರಣಿಯಲ್ಲಿ ಮೊದಲ ಜಯ ತಂದುಕೊಟ್ಟಿದ್ದಾರೆ. ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಟೀಂ ಇಂಡಿಯಾವನ್ನು ಒಂಬತ್ತು ವಿಕೆಟ್‌ಗಳಿಂದ ಮಣಿಸಿದ ಕಾಂಗರೂಗಳು ಈಗ ಮುಂದಿನ ಪಂದ್ಯದಲ್ಲೂ ಅದೇ ರೀತಿಯ ಪ್ರದರ್ಶನ ನೀಡಲು ಎದುರು ನೋಡಿತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Mon, 6 March 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!