ಅಹಮದಾಬಾದ್ನಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಉಭಯ ತಂಡಗಳು ಗೆಲುವಿಗಾಗಿ ಹೋರಾಡುತ್ತಿವೆ. ಆಸ್ಟ್ರೇಲಿಯಾ ನೀಡಿದ ಬಿಗ್ ಟಾರ್ಗೆಟ್ ಬೆನ್ನಟ್ಟಿರುವ ಟೀಂ ಇಂಡಿಯಾ (India Vs Australia) ಕೂಡ ಕಾಂಗರೂಗಳಿಗೆ ಸರಿಯಾಗಿ ಟಕ್ಕರ್ ಕೊಟ್ಟಿದೆ. ಆದರೆ ಈ ನಡುವೆ ಟೀಂ ಇಂಡಿಯಾ ಪಾಳದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಮಿಡಲ್ ಆರ್ಡರ್ ಬ್ಯಾಟರ್ ಶ್ರೇಯಸ್ ಅಯ್ಯರ್ (Shreyas Iyer) ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಅಯ್ಯರ್ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರಸ್ತುತ, ಅಯ್ಯರ್ ಅವರನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಇದರ ಬಗ್ಗೆ ಬಿಸಿಸಿಐ (BCCI) ಕೂಡ ಮಾಹಿತಿ ಹಂಚಿಕೊಂಡಿದೆ.
ಶ್ರೇಯಸ್ ಅಯ್ಯರ್ ಅವರ ಗಾಯದ ಬಗ್ಗೆ ಮಾಹಿತಿಯನ್ನು ಬಿಸಿಸಿಐ ಹಂಚಿಕೊಂಡಿದ್ದು, ಇದರಲ್ಲಿ ಅಹಮದಾಬಾದ್ ಟೆಸ್ಟ್‌ನ ಮೂರನೇ ದಿನದಂದು ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರನ್ನು ಸ್ಕ್ಯಾನ್‌ಗೆ ಕರೆದೊಯ್ಯಲಾಗಿದೆ. ಬಿಸಿಸಿಐನ ವೈದ್ಯಕೀಯ ತಂಡವು ಅಯ್ಯರ್ ಗಾಯದ ಮೇಲೆ ನಿರಂತರವಾಗಿ ನಿಗಾ ಇರಿಸಿದೆ ಎಂದು ಹೇಳಿಕೊಂಡಿದೆ.
Update from BCCI: Shreyas Iyer complained of pain in his lower back following the third day’s play. He has gone for scans and the BCCI Medical Team is monitoring him.
— Venkata Krishna B (@venkatatweets) March 12, 2023
ಬೆನ್ನು ನೋವಿನ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಅಹಮದಾಬಾದ್ ಟೆಸ್ಟ್‌ನಲ್ಲಿ ಇನ್ನೂ ಬ್ಯಾಟಿಂಗ್‌ಗೆ ಬಂದಿಲ್ಲ. ಸಾಮಾನ್ಯವಾಗಿ ಅವರು 4 ನೇ ಕ್ರಮಾಂಕದಲ್ಲಿ ಮಾತ್ರ ಬ್ಯಾಟ್ ಮಾಡುತ್ತಾರೆ. ಆದರೆ ಮೊದಲ ಇನ್ನಿಂಗ್ಸ್ನಲ್ಲಿ ಅವರ ಸ್ಥಾನದಲ್ಲಿ ರವೀಂದ್ರ ಜಡೇಜಾ ಮೂರನೇ ದಿನ ಬ್ಯಾಟಿಂಗ್‌ಗೆ ಇಳಿದಿದ್ದರು. ನಾಲ್ಕನೇ ದಿನದಂದು ಜಡೇಜಾ ಔಟಾದಾಗಲೂ ಕೂಡ ಶ್ರೇಯಸ್ ಬ್ಯಾಟಿಂಗ್ ಬರಲಿಲ್ಲ. ಬದಲಿಗೆ ವಿಕೆಟ್ ಕೀಪರ್ ಕೆ. ಎಸ್. ಭರತ್ ಬ್ಯಾಟಿಂಗ್‌ಗೆ ಬಂದಿದ್ದಾರೆ. ಇದರಿಂದ ಶ್ರೇಯಸ್ ಅಯ್ಯರ್ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವುದರ ಬಗ್ಗೆ ಅನುಮಾನ ಮೂಡುತ್ತಿದೆ. ಒಂದು ವೇಳೆ ಅಯ್ಯರ್ ಬ್ಯಾಟಿಂಗ್‌ಗೆ ಬರದಿದ್ದರೆ, ಭಾರತಕ್ಕೆ ಭಾರಿ ಹಿನ್ನಡೆಯುಂಟಾಗಲಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:51 am, Sun, 12 March 23