IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
Australia vs India, 4th Test: India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರು ಮ್ಯಾಚ್ಗಳು ಮುಗಿದಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್ಗಳ ಭರ್ಜರಿ ಜಯ ಸಾಧಿಸಿದರೆ, ದ್ವಿತೀಯ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯವನ್ನಾಡುತ್ತಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯ ಶುರುವಾಗಿದೆ. ಮೆಲ್ಬೋರ್ನ್ನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ.
ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಶುಭ್ಮನ್ ಗಿಲ್ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ವಾಷಿಂಗ್ಟನ್ ಸುಂದರ್ಗೆ ಸ್ಥಾನ ನೀಡಲಾಗಿದೆ. ಹೀಗಾಗಿ ಈ ಮ್ಯಾಚ್ನಲ್ಲಿ ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ನಾಥನ್ ಮೆಕ್ಸ್ವೀನಿ ಸ್ಥಾನದಲ್ಲಿ ಆರಂಭಿಕನಾಗಿ ಯುವ ದಾಂಡಿಗ ಸ್ಯಾಮ್ ಕೊನ್ಸ್ಟಾಸ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಗಾಯದ ಕಾರಣ ಹೊರಗುಳಿದಿರುವ ಜೋಶ್ ಹ್ಯಾಝಲ್ವುಡ್ ಸ್ಥಾನದಲ್ಲಿ ಸ್ಕಾಟ್ ಬೋಲ್ಯಾಂಡ್ ಕಣಕ್ಕಿಳಿದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಸ್ಯಾಮ್ ಕೊನ್ಸ್ಟಾಸ್ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.
ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ರೋಹಿತ್ ಶರ್ಮಾ (ನಾಯಕ) , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್.
ನಿರ್ಣಾಯಕ ಪಂದ್ಯ:
ಮೆಲ್ಬೋರ್ನ್ ಟೆಸ್ಟ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ. ಅದರಲ್ಲೂ ಈ ಪಂದ್ಯದಲ್ಲಿ ಜಯಿಸುವ ತಂಡವು ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಹೊಂದಲಿದೆ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದ್ದು, ಎರಡನೇ ಪಂದ್ಯವನ್ನು ಆಸ್ಟ್ರೇಲಿಯಾ ತಂಡ ಗೆದ್ದುಕೊಂಡಿದೆ.
ಇದನ್ನೂ ಓದಿ: 22ನೇ ವಯಸ್ಸಿನಲ್ಲೇ ಸೈಮ್ ಅಯ್ಯೂಬ್ ಅಬ್ಬರ: ಸಚಿನ್, ವಿರಾಟ್ ಕೊಹ್ಲಿ ದಾಖಲೆ ಶೇಕಿಂಗ್
ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ನಾಲ್ಕನೇ ಮ್ಯಾಚ್ನಲ್ಲಿ ಜಯಗಳಿಸಿದ ತಂಡ ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಬಹುದು. ಇದರಿಂದ ಐದನೇ ಟೆಸ್ಟ್ ಪಂದ್ಯದಲ್ಲಿ ಸೋತರೂ ಸರಣಿಯನ್ನು ಡ್ತಾ ಮಾಡಿಕೊಳ್ಳುವ ಅವಕಾಶ ಹೊಂದಲಿದೆ. ಹೀಗಾಗಿಯೇ ಮೆಲ್ಬೋರ್ನ್ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.