ಕಳೆದ 40 ತಿಂಗಳಿಂದ ಟೀಂ ಇಂಡಿಯಾ (Team India) ಅಭಿಮಾನಿಗಳು ಹಾಗೂ ಕಿಂಗ್ ಕೊಹ್ಲಿ ಅಭಿಮಾನಿಗಳು ಕಾಯುತ್ತಿದ್ದ ಸಮಯ ಈಗ ಬಂದಿದೆ. ಟೆಸ್ಟ್ ಶತಕಕ್ಕಾಗಿ ಸತತ ಮೂರು ವರ್ಷಗಳಿಂದ ಬರ ಎದುರಿಸುತ್ತಿದ್ದ ವಿರಾಟ್ (Virat Kohli’) ಅಹಮದಾಬಾದ್ನಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ತಮ್ಮ ವೃತ್ತಿ ಜೀವನದ 75ನೇ ಶತಕವನ್ನೂ ಪೂರ್ಣಗೊಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ನ ನಾಲ್ಕನೇ ದಿನದಂದು ಶತಕ ಸಿಡಿಸಿದ ಕೊಹ್ಲಿಗೆ ಇದು 28ನೇ ಟೆಸ್ಟ್ ಶತಕವಾಗಿದೆ. ವಾಸ್ತವವಾಗಿ, ಕೊಹ್ಲಿ 2019 ರಲ್ಲಿ ಬಾಂಗ್ಲಾದೇಶ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಶತಕವನ್ನು ಬಾರಿಸಿದ್ದರು. ಅಂದಿನಿಂದ ಕೊಹ್ಲಿ ಬ್ಯಾಟ್ ಆಗಸ ನೋಡಿರಲಿಲ್ಲ.
241 ಎಸೆತಗಳಲ್ಲಿ 100 ರನ್ ಪೂರೈಸಿದ ಕೊಹ್ಲಿಗೆ ಇದು ಕಳೆದ 40 ತಿಂಗಳಲ್ಲಿ ಮೊದಲ ಟೆಸ್ಟ್ ಶತಕವಾಗಿದೆ. 139ನೇ ಓವರ್‌ನ ಎರಡನೇ ಎಸೆತದಲ್ಲಿ ಸಿಂಗಲ್ ರನ್ ಕದ್ದ ಕೊಹ್ಲಿ ತಮ್ಮ ಶತಕ ಪೂರ್ಣಗೊಳಿಸಿದರು. ವಿರಾಟ್ ಶತಕ ಸಿಡಿಸುತ್ತಿದ್ದಂತೆ ಇಡೀ ಮೈದಾನವೇ ಹರ್ಷೋದ್ಗಾರದಿಂದ ತುಂಬಿ ತುಳುಕಿತು. ಕೊಹ್ಲಿ ಕೂಡ ತಮ್ಮ ಲಾಕೆಟ್‌ಗೆ ಮುತ್ತಿಕ್ಕುವ ಮೂಲಕ ಶತಕವನ್ನು ಸಂಭ್ರಮಿಸಿದರು.
The long wait has finally ended for Virat Kohli ?#WTC23 | #INDvAUS | ? https://t.co/VJoLfVSeIF pic.twitter.com/JGZcVsHvHj
— ICC (@ICC) March 12, 2023
ಇದರೊಂದಿಗೆ ಕ್ರಿಕೆಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಶತಕ ಸಿಡಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಪ್ರಸ್ತುತ ಕೊಹ್ಲಿ ಆಸೀಸ್ ವಿರುದ್ಧ 16 ಶತಕ ಬಾರಿಸಿದ್ದಾರೆ. 20 ಶತಕ ಬಾರಿಸಿರುವ ಸಚಿನ್ ತೆಂಡೂಲ್ಕರ್ ಈ ವಿಚಾರದಲ್ಲಿ ಮುಂದಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದು ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿಯ 8ನೇ ಟೆಸ್ಟ್ ಶತಕವಾಗಿದ್ದು, ಈ ತಂಡದ ವಿರುದ್ಧ ಸಚಿನ್ ತೆಂಡೂಲ್ಕರ್ ಗರಿಷ್ಠ 11 ಮತ್ತು ಸುನಿಲ್ ಗವಾಸ್ಕರ್ 8 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ.
CCL 2023: ಸಿಸಿಎಲ್ನಲ್ಲಿ ಕಿಚ್ಚನ ಹುಡುಗರದ್ದೇ ಪಾರುಪತ್ಯ; ಲೀಗ್ನಲ್ಲಿ ಕರ್ನಾಟಕಕ್ಕೆ ಸತತ 4ನೇ ಜಯ
ಈ ಶತಕಕ್ಕೂ ಮುನ್ನ ನಿನ್ನೆ ಭಾರತದ ನೆಲದಲ್ಲಿ 4000 ಟೆಸ್ಟ್ ರನ್ ಪೂರೈಸಿದ ಸಾಧನೆಯನ್ನೂ ಕೊಹ್ಲಿ ಮಾಡಿದ್ದರು. ಭಾರತದ ನೆಲದಲ್ಲಿ 50 ಟೆಸ್ಟ್ ಪಂದ್ಯಗಳಲ್ಲಿ ವೇಗವಾಗಿ 4000 ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಇದರೊಂದಿಗೆ ಇಂದು ಶತಕ ಬಾರಿಸುವುದರೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡ ನೇರವಾಗಿ ಫೈನಲ್ ಪ್ರವೇಶಿಸಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕು. ಈ ಪಂದ್ಯದಲ್ಲಿ ಭಾರತ ತಂಡ ಸೋತರೆ ಅಥವಾ ಪಂದ್ಯ ಡ್ರಾಗೊಂಡರೆ ಫಲಿತಾಂಶವು ನ್ಯೂಜಿಲೆಂಡ್-ಶ್ರೀಲಂಕಾ ಟೆಸ್ಟ್ ಸರಣಿಯ ಮೇಲೆ ಅವಲಂಬಿತವಾಗಿರುತ್ತದೆ. ಇತ್ತ ಶ್ರೀಲಂಕಾ WTC ಫೈನಲ್ ತಲುಪಬೇಕಾದರೆ ಎರಡೂ ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಬೇಕು. ಆಸ್ಟ್ರೇಲಿಯಾ ಈಗಾಗಲೇ ಫೈನಲ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:45 pm, Sun, 12 March 23