IND vs AUS: ಪಿಂಕ್ ಟೆಸ್ಟ್ಗೆ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಆಸ್ಟ್ರೇಲಿಯಾ
India vs Australia: ಟೀಮ್ ಇಂಡಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಪ್ಲೇಯಿಂಗ್ ಇಲೆವೆನ್ನ ಭಾಗವಾಗಿದ್ದ ಆಲ್ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಸಿಡ್ನಿ ಟೆಸ್ಟ್ ಪಂದ್ಯದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಬ್ಯೂ ವೆಬ್‌ಸ್ಟರ್ ಅವರಿಗೆ ಸ್ಥಾನ ನೀಡಲಾಗಿದೆ.
ಸಿಡ್ನಿಯಲ್ಲಿ ನಡೆಯಲಿರುವ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ತನ್ನ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಈ ಬಾರಿ ಆಸೀಸ್ ಬಳಗದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅದರಂತೆ ಪ್ಲೇಯಿಂಗ್ ಇಲೆವೆನ್ನಿಂದ ಮಿಚೆಲ್ ಮಾರ್ಷ್ ಹೊರಬಿದ್ದಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಬ್ಯೂ ವೆಬ್‌ಸ್ಟರ್ ಆಸ್ಟ್ರೇಲಿಯಾ ಪರ ಪಾದಾರ್ಪಣೆ ಮಾಡಲಿದ್ದಾರೆ.
ಕಳೆದ 4 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮಿಚೆಲ್ ಮಾರ್ಷ್ 10.42 ರ ಸರಾಸರಿಯಲ್ಲಿ ಕೇವಲ 72 ರನ್ ಮಾತ್ರ ಕಲೆಹಾಕಿದ್ದಾರೆ. ಅಲ್ಲದೆ ಫಿಟ್ನೆಸ್ ಸಮಸ್ಯೆಯ ಕಾರಣ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ನಲ್ಲೂ ತೊಡಗಿಸಿಕೊಳ್ಳುವಲ್ಲಿ ವಿಫಲರಾಗಿದ್ದರು.
ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಿಂದ ಮಿಚೆಲ್ ಮಾರ್ಷ್ ಅವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ಬ್ಯಾಟಿಂಗ್ ಆಲ್ರೌಂಡರ್ ಬ್ಯೂ ವೆಬ್‌ಸ್ಟರ್ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ. ಅದರಂತೆ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್‌ಸ್ಟರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.
ಇದನ್ನೂ ಓದಿ: 22ನೇ ವಯಸ್ಸಿನಲ್ಲೇ ಸೈಮ್ ಅಯ್ಯೂಬ್ ಅಬ್ಬರ: ಸಚಿನ್, ವಿರಾಟ್ ಕೊಹ್ಲಿ ದಾಖಲೆ ಶೇಕಿಂಗ್
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಾನುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಜ್ಯೆ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ , ಬ್ಯೂ ವೆಬ್‌ಸ್ಟರ್.
ಏನಿದು ಪಿಂಕ್ ಟೆಸ್ಟ್?
ಪ್ರತಿ ವರ್ಷ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಆಡಲಾಗುವ ಮೊದಲ ಟೆಸ್ಟ್ ಪಂದ್ಯವನ್ನು ಪಿಂಕ್ ಟೆಸ್ಟ್ ಎಂದು ಕರೆಯಲಾಗುತ್ತದೆ. ಇದಕ್ಕೆ ಮುಖ್ಯ ಕಾರಣ ಈ ಪಂದ್ಯದಲ್ಲಿ ಆಟಗಾರರು ಪಿಂಕ್ ಕ್ಯಾಪ್ ಧರಿಸುವುದು. ಇದರ ಉದ್ದೇಶ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದು.