IND vs AUS: ಏನಿದು ಪಿಂಕ್ ಬಾಲ್ ಟೆಸ್ಟ್?

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​​ನ ಓವಲ್​​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ.

IND vs AUS: ಏನಿದು ಪಿಂಕ್ ಬಾಲ್ ಟೆಸ್ಟ್?
Pink Ball Test
Follow us
ಝಾಹಿರ್ ಯೂಸುಫ್
|

Updated on: Dec 03, 2024 | 8:19 AM

ವರ್ಷಗಳ ಬಳಿಕ ಮತ್ತೊಂದು ಪಿಂಕ್ ಬಾಲ್ ಟೆಸ್ಟ್​​ಗೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಕೂಡ ಆತಿಥ್ಯವಹಿಸುತ್ತಿರುವುದು ಆಸ್ಟ್ರೇಲಿಯಾ ಅಡಿಲೇಡ್​​ನ ಓವಲ್ ಮೈದಾನ. ಡಿಸೆಂಬರ್ 6 ರಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಯೇ ಈಗ ಪಿಂಕ್ ಬಾಲ್ ಟೆಸ್ಟ್​​​ನ ಕಾವೇರಿಸಿದೆ. ಇದರ ನಡುವೆ ಏನಿದು ಪಿಂಕ್ ಬಾಲ್ ಟೆಸ್ಟ್ ಎಂಬ ಪ್ರಶ್ನೆ ನಿಮ್ಮಲ್ಲೂ ಮೂಡಿರುತ್ತದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಏನಿದು ಪಿಂಕ್ ಬಾಲ್ ಟೆಸ್ಟ್?

  • ಪಿಂಕ್ ಬಾಲ್ ಟೆಸ್ಟ್ ಎಂದರೆ ಡೇ-ನೈಟ್ ಟೆಸ್ಟ್ ಪಂದ್ಯ. ಹೊನಲು ಬೆಳಕಿನಲ್ಲಿ ಆಡಲಾಗುವ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತದೆ. ಹೀಗಾಗಿಯೇ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಪಿಂಕ್ ಬಾಲ್ ಟೆಸ್ಟ್ ಎಂದು ಕರೆಯಲಾಗುತ್ತಿದೆ.

ಪಿಂಕ್ ಬಾಲ್ ಅನ್ನು ಯಾಕಾಗಿ ಬಳಸಲಾಗುತ್ತದೆ?

  • ಸಾಮಾನ್ಯವಾಗಿ ಕ್ರಿಕೆಟ್​​ನಲ್ಲಿ ರೆಡ್ ಮತ್ತು ವೈಟ್ ಬಾಲ್​ ಅನ್ನು ಬಳಸಲಾಗುತ್ತದೆ. ಆದರೆ ಡೇ-ನೈಟ್ ಟೆಸ್ಟ್​ ಪಂದ್ಯವನ್ನು ಪಿಂಕ್ ಬಾಲ್​ನಲ್ಲಿ ಆಡಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ರಾತ್ರಿಯ ವೇಳೆ ಚೆಂಡಿನ ಸ್ಪಷ್ಟ ಗೋಚರತೆ. ಈ ಹಿಂದೆ ಡೇ-ನೈಟ್ ಟೆಸ್ಟ್​ ಪಂದ್ಯಕ್ಕಾಗಿ ಯೆಲ್ಲೊ, ಪಿಂಕ್ ಮತ್ತು ಗಾಢ ಬಿಳಿ ಬಣ್ಣದ ಚೆಂಡಿನ ಪ್ರಯೋಗಗಳನ್ನು ನಡೆಸಲಾಗಿತ್ತು. ಈ ಪ್ರಯೋಗದ ವೇಳೆ ಪಿಂಕ್ ಬಾಲ್ ಗೋಚರತೆಯು ಹೆಚ್ಚಿನ ಸ್ಪಷ್ಟತೆಯಿಂದ ಕೂಡಿದೆ ಎಂದು ಬ್ಯಾಟರ್​​ಗಳು ಅಭಿಪ್ರಾಯಪಟ್ಟಿದ್ದರು. ಹೀಗಾಗಿ ಡೇ-ನೈಟ್ ಟೆಸ್ಟ್​​ನಲ್ಲಿ ಪಿಂಕ್ ಬಾಲ್ ಬಳಸಲು ನಿರ್ಧರಿಸಲಾಯಿತು.

ಮೊದಲ ಬಾರಿಗೆ ಪಿಂಕ್ ಬಾಲ್ ಪಂದ್ಯ ನಡೆದಿದ್ದು ಯಾವಾಗ?

2009 ರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮಹಿಳಾ ಏಕದಿನ ಪಂದ್ಯದಲ್ಲಿ ಪಿಂಕ್ ಚೆಂಡನ್ನು ಬಳಸಲಾಯಿತು. ಈ ಪ್ರಯೋಗವು ಯಶಸ್ವಿಯಾಗಿದ್ದರಿಂದ ನಸುಗೆಂಪಿನ ಬಣ್ಣದ ಚೆಂಡಿಗೆ ಐಸಿಸಿ ಗ್ರೀನ್ ಸಿಗ್ನಲ್ ನೀಡಿದ್ದರು.

ಮೊದಲ ಡೇ-ನೈಟ್ ಟೆಸ್ಟ್ ನಡೆದಿದ್ದು ಯಾವಾಗ?

  • ಡೇ-ನೈಟ್ ಟೆಸ್ಟ್​​ನ ಪರಿಕಲ್ಪನೆಯು 2000 ರಲ್ಲೇ ಮೂಡಿಬಂದರೂ ಅದು ಅಧಿಕೃತವಾಗಿ ಜಾರಿಗೆ ಬಂದಿದ್ದು ಹದಿನೈದು ವರ್ಷಗಳ ಬಳಿಕ ಎಂಬುದು ವಿಶೇಷ. 2015 ರಲ್ಲಿ ಅಡಿಲೇಡ್​​ನಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

ಭಾರತದಲ್ಲಿ ಪಿಂಕ್ ಪ್ರಯೋಗ ನಡೆದಿದ್ದು ಯಾವಾಗ?

  • 2016ರ ದುಲೀಪ್ ಟ್ರೋಫಿಯಲ್ಲಿ ಪಿಂಕ್ ಬಾಲ್ ಅನ್ನು ಪ್ರಯೋಗಿಸಲಾಯಿತು. ಈ ವೇಳೆ ಮಿಶ್ರ ವಿಮರ್ಶೆಗಳನ್ನು ಪಡೆದಿದ್ದರಿಂದ ಬಿಸಿಸಿಐ ಯಾವುದೇ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಯೋಜಿಸಲು ಮುಂದಾಗಿರಲಿಲ್ಲ.

ಟೀಮ್ ಇಂಡಿಯಾ ಮೊದಲ ಪಿಂಕ್ ಬಾಲ್ ಟೆಸ್ಟ್ ಆಡಿದ್ದು ಯಾವಾಗ?

  • 2019 ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಸೌರವ್ ಗಂಗೂಲಿ ಪಿಂಕ್ ಬಾಲ್ ಬಳಕೆಯ ಬಗ್ಗೆ ಒಲವು ವ್ಯಕ್ತಪಡಿಸಿದರು. ಅಲ್ಲದೆ ಅದೇ ವರ್ಷ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಡೇ-ನೈಟ್ ಟೆಸ್ಟ್ ಅನ್ನು ಆಯೋಜಿಸಲಾಯಿತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದ್ದರು.

ಈವರೆಗೆ ಎಷ್ಟು ಪಿಂಕ್ ಬಾಲ್ ಟೆಸ್ಟ್ ನಡೆದಿದೆ?

  • ಇದುವರೆಗೆ 22 ಡೇ-ನೈಟ್ ಟೆಸ್ಟ್ ಪಂದ್ಯಗಳು ನಡೆದಿದೆ. ಈ ಎಲ್ಲಾ ಪಂದ್ಯಗಳಲ್ಲೂ ಫಲಿತಾಂಶ ಮೂಡಿಬಂದಿರುವುದು ವಿಶೇಷ. ಅಂದರೆ ಈವರೆಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿಲ್ಲ.

ಅತ್ಯಧಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಡಿದ ತಂಡ ಯಾವುದು?

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನದಲ್ಲಿದೆ. ಆಸೀಸ್ ಪಡೆಯು ಇದುವರೆಗೆ 10 ಪಿಂಕ್ ಬಾಲ್ ಟೆಸ್ಟ್ ಪಂದ್ಯಗಳನ್ನಾಡಿದೆ. ಇನ್ನು ಟೀಮ್ ಇಂಡಿಯಾ 4 ಡೇ-ನೈಟ್ ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದೆ.

ಭಾರತ ತಂಡ ಎಷ್ಟು ಪಂದ್ಯ ಗೆದ್ದಿದೆ?

ಟೀಮ್ ಇಂಡಿಯಾ ಈವರೆಗೆ 4 ಪಿಂಕ್ ಬಾಲ್ ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವುದು ಆಸ್ಟ್ರೇಲಿಯಾ ವಿರುದ್ಧ ಮಾತ್ರ.

ಭಾರತದ ಪಿಂಕ್ ಬಾಲ್ ಟೆಸ್ಟ್ ಫಲಿತಾಂಶ:

ಫಲಿತಾಂಶ ಎದುರಾಳಿ ಸ್ಥಳ ವರ್ಷ
ಭಾರತಕ್ಕೆ ಇನಿಂಗ್ಸ್​ ಮತ್ತು 46 ರನ್‌ಗಳ ಜಯ ಬಾಂಗ್ಲಾದೇಶ್ ಈಡನ್ ಗಾರ್ಡನ್ಸ್ 2019
ಭಾರತಕ್ಕೆ 8 ವಿಕೆಟ್‌ಗಳ ಸೋಲು ಆಸ್ಟ್ರೇಲಿಯಾ ಅಡಿಲೇಡ್ 2020
ಭಾರತಕ್ಕೆ 10 ವಿಕೆಟ್‌ಗಳ ಜಯ ಇಂಗ್ಲೆಂಡ್ ಅಹಮದಾಬಾದ್ 2021
ಭಾರತಕ್ಕೆ 238 ರನ್‌ಗಳ ಜಯ ಶ್ರೀಲಂಕಾ ಬೆಂಗಳೂರು 2022

ಪಿಂಕ್ ಬಾಲ್ ಟೆಸ್ಟ್ ಆಯೋಜನೆಯ ಉದ್ದೇಶವೇನು?

  • ಪಿಂಕ್ ಬಾಲ್ ಟೆಸ್ಟ್ ಅಥವಾ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಆಯೋಜಿಸುತ್ತಿರುವ ಮುಖ್ಯ ಉದ್ದೇಶ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸುವುದು. ಇಲ್ಲಿ ಪಂದ್ಯವು ಹೊನಲು-ಬೆಳಕಿನಲ್ಲಿ ಆಯೋಜಿಸುತ್ತಿರುವುದರಿಂದ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ. ಈ ಪ್ರಯೋಗವು ಯಶಸ್ವಿಯಾಗಿದ್ದು, ಹೀಗಾಗಿಯೇ ಆಸ್ಟ್ರೇಲಿಯಾ ಪ್ರತಿ ವರ್ಷ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಯೋಜಿಸುತ್ತಿದೆ.
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ