ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಲಿಷ್ಠ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವನ್ನು (India Women vs Australia Women) ಸೋಲಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆದ ಎರಡು ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಜಯಗಳಿಸಿ ಇತಿಹಾಸ ಬರೆದಿದೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಈ ಐತಿಹಾಸಿಕ ಗೆಲುವಿಗೆ ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸ್ಸಾ ಹೀಲಿ (Alyssa Healy) ಕೂಡ ಸಂತಸ ವ್ಯಕ್ತಪಡಿಸಿದ್ದು, ಅವರು ಮಾಡಿದ ಕೆಲಸಕ್ಕೆ ಇಡೀ ಕ್ರಿಕೆಟ್ ಜಗತ್ತೇ ಸಲಾಂ ಹೊಡೆಯುತ್ತಿದೆ.
ವಾಸ್ತವವಾಗಿ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅದು ತವರಿನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದ ಹರ್ಮನ್ಪ್ರೀತ್ ಪಡೆ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿತು. ಈ ವೇಳೆ ತಮ್ಮ ಪರ್ಸನಲ್ ಕ್ಯಾಮೆರಾವನ್ನು ಕೈಗೆತ್ತಿಕೊಂಡ ಆಸೀಸ್ ನಾಯಕಿ ಅಲಿಸ್ಸಾ ಹೀಲಿ ಟೀಂ ಇಂಡಿಯಾದ ಫೋಟೋ ತೆಗೆದಿದ್ದಾರೆ.
Spirit of Cricket 🤝
Australia Captain Alyssa Healy on that gesture to click a special moment, ft. #TeamIndia 📸 👏#INDvAUS | @IDFCFIRSTBank pic.twitter.com/PJ6ZlIKGMb
— BCCI Women (@BCCIWomen) December 24, 2023
ಅಲಿಸ್ಸಾ ಹೀಲಿ ಟೀಂ ಇಂಡಿಯಾದ ಫೋಟೋ ತೆಗೆದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಲಿಸ್ಸಾ ಹೀಲಿ ಅವರ ಈ ಹೃದಯ ಶ್ರೀಮಂತಿಕೆಗೆ ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ನೆಟ್ಟಿಗರು ಈ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರೊಂದಿಗೆ ದಿನದ ಫೋಟೋ (ಪಿಕ್ಚರ್ ಆಫ್ ದಿ ಡೇ) ಎಂದು ಬಣ್ಣಿಸಿದ್ದಾರೆ.
Picture of the day. ⭐
Alyssa Healy capturing the winning celebration of Indian team. pic.twitter.com/YFgXNrylNp
— Johns. (@CricCrazyJohns) December 24, 2023
187 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡ 261 ರನ್ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿತು. ಈ ಮೂಲಕ ಭಾರತ ತಂಡದ ಗೆಲುವಿಗೆ ಕೇವಲ 75 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ ಮಹಿಳಾ ಕ್ರಿಕೆಟ್ ತಂಡ ಕೇವಲ 2 ವಿಕೆಟ್ ಕಳೆದುಕೊಂಡು ಐತಿಹಾಸಿಕ ಗೆಲುವಿನ ನಗೆ ಬೀರಿತು. ಭಾರತದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಸ್ಮೃತಿ ಮಂಧಾನ ಅಜೇಯ 38 ರನ್‌ಗಳ ಗರಿಷ್ಠ ಇನ್ನಿಂಗ್ಸ್ ಆಡಿದರೆ, ಜೆಮಿಮಾ 12 ರನ್ಗಳಿಸಿ ಅಜೇಯರಾಗಿ ಉಳಿದರು. ರಿಚಾ ಘೋಷ್ 13 ರನ್ ಮತ್ತು ಶಫಾಲಿ ವರ್ಮಾ 4 ರನ್‌ಗಳ ಕೊಡುಗೆ ನೀಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಪರ ಕಿಮ್ ಗ್ರಾತ್ ಮತ್ತು ಗಾರ್ಡ್ನರ್ ತಲಾ 1 ವಿಕೆಟ್ ಪಡೆದರು.
ಆಸ್ಟ್ರೇಲಿಯಾ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಬೌಲರ್ ಸ್ನೇಹ್ ರಾಣಾ ಅದ್ಭುತ ಬೌಲಿಂಗ್ ಮಾಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸ್ನೇಹ್ ರಾಣಾ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದು ಮಿಂಚಿದರು. ಒಟ್ಟಿನಲ್ಲಿ ಸ್ನೇಹ್ ರಾಣಾ ಎರಡೂ ಇನ್ನಿಂಗ್ಸ್ಗಳಲ್ಲಿ 7 ವಿಕೆಟ್ ಪಡೆಯುವ ಮೂಲಕ ಪಂದ್ಯದ ಆಟಗಾರ್ತಿಯಾಗಿಯೂ ಆಯ್ಕೆಯಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ