IND vs AUS: ಮೂರನೇ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಅಲಭ್ಯ
Team India: ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ಪಂದ್ಯದಲ್ಲಿ ಇಬ್ಬರು ದಿಗ್ಗಜರು ಕಣಕ್ಕಿಳಿಯುವುದು ಖಚಿತ.
ಭಾರತ-ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಆಟಗಾರರು ಅಲಭ್ಯರಾಗಿದ್ದಾರೆ. ರಾಜ್ಕೋಟ್ನಲ್ಲಿ ಬುಧವಾರ ನಡೆಯಲಿರುವ ಈ ಪಂದ್ಯದಿಂದ ಗಾಯದ ಕಾರಣ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ಇನ್ನು ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್ಮನ್ ಗಿಲ್ ವಿಶ್ರಾಂತಿ ಪಡೆದಿದ್ದಾರೆ.
ಮತ್ತೊಂದೆಡೆ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಹಾಗೂ ವೇಗಿ ಮೊಹಮ್ಮದ್ ಶಮಿ ಕೂಡ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹಾಗೆಯೇ 3ನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳಬೇಕಿದ್ದ ಉಪನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಅಲ್ಲದೆ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ಇದರೊಂದಿಗೆ ರಾಜ್ಕೋಟ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಶುಭ್ಮನ್ ಗಿಲ್ ಹಾಗೂ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.
ಇನ್ನು 2ನೇ ಪಂದ್ಯದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಅವರ ಬದಲಿಗೆ ಆಯ್ಕೆಯಾಗಿದ್ದ ಮುಖೇಶ್ ಕುಮಾರ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇದಾಗ್ಯೂ ಪ್ರಸ್ತುತ ಭಾರತ ತಂಡದಲ್ಲಿರುವುದು ಕೇವಲ 13 ಆಟಗಾರರು ಮಾತ್ರ ಎಂಬುದು ವಿಶೇಷ.
ರೋಹಿತ್ – ಕೊಹ್ಲಿ ಕಂಬ್ಯಾಕ್:
ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ಪಂದ್ಯದಲ್ಲಿ ಇಬ್ಬರು ದಿಗ್ಗಜರು ಕಣಕ್ಕಿಳಿಯುವುದು ಖಚಿತ.
ಇದನ್ನೂ ಓದಿ: ಟೀಮ್ ಇಂಡಿಯಾ ಪರ ಸತತ 4 ಸಿಕ್ಸ್ ಸಿಡಿಸಿದ್ದು ಮೂವರು ಬ್ಯಾಟರ್ಗಳು ಮಾತ್ರ..!
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಮುಖೇಶ್ ಕುಮಾರ್.
Published On - 7:31 pm, Tue, 26 September 23