IND vs AUS: ಕೇವಲ 36 ರನ್ಗೆ ಆಲೌಟ್: ಟೀಮ್ ಇಂಡಿಯಾವನ್ನು ಕಿಚಾಯಿಸಿದ ಆಸ್ಟ್ರೇಲಿಯಾ
India vs Australia 1st Test: ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ ವಿರುದ್ಧ. ಅದು ಕೂಡ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಂಬುದು ವಿಶೇಷ.
India vs Australia Test: ಪ್ರತಿಷ್ಠಿತ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಗೆ ವೇದಿಕೆ ಸಜ್ಜಾಗಿದೆ. 4 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ಶುರುವಾಗಲಿದೆ. ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಇಂಡಿಯಾವನ್ನು ಕಿಚಾಯಿಸಿದೆ. ಅದು ಕೂಡ ಟೀಮ್ ಇಂಡಿಯಾ ಪಾಲಿನ ಮರೆಯಲಾಗದ ಕಹಿ ನೆನಪಿನ ವಿಡಿಯೋ ಮೂಲಕ ಎಂಬುದೇ ವಿಶೇಷ.
ಹೌದು, ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ ವಿರುದ್ಧ. ಅದು ಕೂಡ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ. 2020-21 ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಕೇವಲ 36 ರನ್ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತ್ತು.
ಅಡಿಲೇಡ್ನಲ್ಲಿ ನಡೆದಿದ್ದ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 244 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 191 ರನ್ಗಳಿಗೆ ಆಲೌಟ್ ಆಗಿತ್ತು.
ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ತತ್ತರಿಸಿತು. ಪರಿಣಾಮ 21.2 ಓವರ್ಗಳಲ್ಲಿ ಕೇವಲ 36 ರನ್ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 93 ರನ್ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿತ್ತು.
ಇದೀಗ 2023ರ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ 36 ರನ್ಗಳಿಗೆ ಆಲೌಟ್ ಆಗಿದ್ದ ಟೀಮ್ ಇಂಡಿಯಾದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಕಳೆದ ಬಾರಿಯ ಸರಣಿಯ ಮೊದಲ ಪಂದ್ಯದ ಫಲಿತಾಂಶವನ್ನು ಭಾರತ ತಂಡಕ್ಕೆ ನೆನಪಿಸಿ ಕಿಚಾಯಿಸಿದೆ.
All out for 36 ?
The Border-Gavaskar Trophy starts on Thursday! #INDvAUS pic.twitter.com/Uv08jytTS7
— cricket.com.au (@cricketcomau) February 6, 2023
ಒಟ್ಟಿನಲ್ಲಿ ಸರಣಿ ಆರಂಭಕ್ಕೂ ಮುನ್ನವೇ ಉಭಯ ತಂಡಗಳ ಸಮರ ಸೋಷಿಯಲ್ ಮೀಡಿಯಾ ಮೂಲಕ ಶುರುವಾಗಿದೆ. ಹೀಗಾಗಿ ಮೊದಲ ಪಂದ್ಯದಿಂದಲೇ ಇಂಡೋ-ಆಸೀಸ್ ಆಟಗಾರರ ನಡುವಣ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
- ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
- ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
- ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್).
Published On - 5:06 pm, Mon, 6 February 23