IND vs AUS: ಕೇವಲ 36 ರನ್​ಗೆ ಆಲೌಟ್: ಟೀಮ್ ಇಂಡಿಯಾವನ್ನು ಕಿಚಾಯಿಸಿದ ಆಸ್ಟ್ರೇಲಿಯಾ

| Updated By: ಝಾಹಿರ್ ಯೂಸುಫ್

Updated on: Feb 06, 2023 | 5:06 PM

India vs Australia 1st Test: ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ ವಿರುದ್ಧ. ಅದು ಕೂಡ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಂಬುದು ವಿಶೇಷ.

IND vs AUS: ಕೇವಲ 36 ರನ್​ಗೆ ಆಲೌಟ್: ಟೀಮ್ ಇಂಡಿಯಾವನ್ನು ಕಿಚಾಯಿಸಿದ ಆಸ್ಟ್ರೇಲಿಯಾ
India vs Australia
Follow us on

India vs Australia Test: ಪ್ರತಿಷ್ಠಿತ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಗೆ ವೇದಿಕೆ ಸಜ್ಜಾಗಿದೆ. 4 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ಶುರುವಾಗಲಿದೆ. ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಇಂಡಿಯಾವನ್ನು ಕಿಚಾಯಿಸಿದೆ. ಅದು ಕೂಡ ಟೀಮ್ ಇಂಡಿಯಾ ಪಾಲಿನ ಮರೆಯಲಾಗದ ಕಹಿ ನೆನಪಿನ ವಿಡಿಯೋ ಮೂಲಕ ಎಂಬುದೇ ವಿಶೇಷ.

ಹೌದು, ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ ವಿರುದ್ಧ. ಅದು ಕೂಡ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ. 2020-21 ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಕೇವಲ 36 ರನ್​ಗಳಿಗೆ ಇನಿಂಗ್ಸ್​ ಅಂತ್ಯಗೊಳಿಸಿತ್ತು.

ಇದನ್ನೂ ಓದಿ
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಅಡಿಲೇಡ್​ನಲ್ಲಿ ನಡೆದಿದ್ದ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 244 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 191 ರನ್​ಗಳಿಗೆ ಆಲೌಟ್ ಆಗಿತ್ತು.

ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ತತ್ತರಿಸಿತು. ಪರಿಣಾಮ 21.2 ಓವರ್​ಗಳಲ್ಲಿ ಕೇವಲ 36 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 93 ರನ್​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವು 2 ವಿಕೆಟ್​ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿತ್ತು.

ಇದೀಗ 2023ರ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ 36 ರನ್​ಗಳಿಗೆ ಆಲೌಟ್ ಆಗಿದ್ದ ಟೀಮ್ ಇಂಡಿಯಾದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಕಳೆದ ಬಾರಿಯ ಸರಣಿಯ ಮೊದಲ ಪಂದ್ಯದ ಫಲಿತಾಂಶವನ್ನು ಭಾರತ ತಂಡಕ್ಕೆ ನೆನಪಿಸಿ ಕಿಚಾಯಿಸಿದೆ.

ಒಟ್ಟಿನಲ್ಲಿ ಸರಣಿ ಆರಂಭಕ್ಕೂ ಮುನ್ನವೇ ಉಭಯ ತಂಡಗಳ ಸಮರ ಸೋಷಿಯಲ್ ಮೀಡಿಯಾ ಮೂಲಕ ಶುರುವಾಗಿದೆ. ಹೀಗಾಗಿ ಮೊದಲ ಪಂದ್ಯದಿಂದಲೇ ಇಂಡೋ-ಆಸೀಸ್ ಆಟಗಾರರ ನಡುವಣ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
  2. ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
  3. ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
  4. ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್).

 

 

Published On - 5:06 pm, Mon, 6 February 23