IND vs AUS Final: ಕೊಹ್ಲಿ- ರಾಹುಲ್ ಅರ್ಧಶತಕ; ಆಸೀಸ್​ಗೆ 241 ರನ್ ಟಾರ್ಗೆಟ್

IND vs AUS Final, ICC World Cup 2023: ಅಹಮದಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ ಕಲೆಹಾಕಿದೆ.

IND vs AUS Final: ಕೊಹ್ಲಿ- ರಾಹುಲ್ ಅರ್ಧಶತಕ; ಆಸೀಸ್​ಗೆ 241 ರನ್ ಟಾರ್ಗೆಟ್
ಕೊಹ್ಲಿ- ರಾಹುಲ್
Follow us
|

Updated on:Nov 19, 2023 | 6:14 PM

ಅಹಮದಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium in Ahmedabad) ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ ಕಲೆಹಾಕಿದೆ. ಈ ಮೂಲಕ ಆಸೀಸ್ ತಂಡಕ್ಕೆ ಗೆಲ್ಲಲು 241 ರನ್​ಗಳ ಟಾರ್ಗೆಟ್ ನೀಡಿದೆ. ಹಾಗೆಯೇ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಆಲೌಟ್ ಆದ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ (Virat Kohli) 54 ರನ್ ಮತ್ತು ಕೆಎಲ್ ರಾಹುಲ್ (KL Rahul) 66 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ (Rohit Sharma) 31 ಎಸೆತಗಳಲ್ಲಿ 47 ರನ್ ಗಳಿಸಿ ಭಾರತಕ್ಕೆ ವೇಗದ ಆರಂಭ ನೀಡಿದರಾದರೂ ಉಳಿದ ಆಟಗಾರರಿಗೆ ಆವೇಗವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ 2 ವಿಕೆಟ್ ಪಡೆದರು.

ಟಾಸ್ ಸೋತು ಬ್ಯಾಟಿಂಗ್​ ಮಾಡಿದ ಭಾರತಕ್ಕೆ ಹೇಳಿಕೊಳ್ಳುವಂತಹ ಆರಂಭ ಸಿಗಲಿಲ್ಲ. ರೋಹಿತ್ ಎಂದಿನಂತೆ ಅಬ್ಬರದ ಬ್ಯಾಟಿಂಗ್ ಮಾಡಿದರೆ, ಗಿಲ್ ಮಾತ್ರ ಎಡವಿದರು. ಹೀಗಾಗಿ ಟೀಂ ಇಂಡಿಯಾ 30 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು.ಶುಭ್​ಮನ್ ಗಿಲ್ 4 ರನ್ ಗಳಿಸಿ ಔಟಾದರು. ನಂತರ ರೋಹಿತ್ ಮತ್ತು ವಿರಾಟ್ ಎರಡನೇ ವಿಕೆಟ್‌ಗೆ 36 ರನ್‌ಗಳ ಜೊತೆಯಾಟ ನೀಡಿದರು. ಆದರೆ ಈ ವೇಳೆ 47 ರನ್ ಗಳಿಸಿದ್ದ ನಾಯಕ ರೋಹಿತ್ ಔಟಾದರು.

ಕಿಂಗ್ ಕೊಹ್ಲಿ ವಿಕೆಟ್ ಉರುಳಿಸಿದ ಆಸೀಸ್ ನಾಯಕ! ಇಡೀ ಕ್ರೀಡಾಂಗಣವೇ ಸ್ತಬ್ಧ; ವಿಡಿಯೋ ನೋಡಿ

ರಾಹುಲ್- ವಿರಾಟ್ ಜೊತೆಯಾಟ

ರೋಹಿತ್ ನಂತರ ಬಂದ ಶ್ರೇಯಸ್ ಅಯ್ಯರ್ ಕೂಡ ಬೇಗ ಇನ್ನಿಂಗ್ಸ್ ಮುಗಿಸಿದರು. ಕಳೆದ ಕೆಲವು ಪಂದ್ಯಗಳಿಂದ ಶ್ರೇಯಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹಾಗಾಗಿ ಈ ಪಂದ್ಯದಲ್ಲೂ ಶ್ರೇಯಸ್ ಅದೇ ರೀತಿ ಪ್ರದರ್ಶನ ನೀಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ಶ್ರೇಯಸ್ ಕೂಡ ಗಿಲ್ ಅವರಂತೆಯೇ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಶ್ರೇಯಸ್ ಬಳಿಕ ಕಣಕ್ಕೆ ಇಳಿದ ಕೆ.ಎಲ್. ಕೆಎಲ್ ಮತ್ತು ವಿರಾಟ್ ಇಬ್ಬರೂ ಟೀಮ್ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರೂ ಸಿಂಗಲ್ಸ್ ಮತ್ತು ಡಬಲ್ಸ್ ಗಳಿಸಿ ಸ್ಕೋರ್ ಬೋರ್ಡ್ ಮೇಲೆತ್ತಿದರು. ಇದೇ ವೇಳೆ ವಿರಾಟ್ ವಿಶ್ವಕಪ್‌ನಲ್ಲಿ ಸತತ ಐದನೇ ಅರ್ಧಶತಕ ದಾಖಲಿಸಿದರು.

ಈ ವೇಳೆ ವಿರಾಟ್ ಮತ್ತು ಕೆಎಲ್ ನಾಲ್ಕನೇ ವಿಕೆಟ್‌ಗೆ 67 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಆದರೆ ಪ್ಯಾಟ್ ಕಮಿನ್ಸ್ 29ನೇ ಓವರ್ ನ ಮೂರನೇ ಎಸೆತದಲ್ಲಿ ವಿರಾಟ್ ಅವರನ್ನು ಬೌಲ್ಡ್ ಮಾಡಿದರು. ಈ ಮೂಲಕ ವಿರಾಟ್ 63 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕೊಹ್ಲಿ ವಿಕೆಟ್ ಬಳಿಕ ರಾಹುಲ್ ಜೊತೆಯಾದ ಜಡೇಜಾಗೂ ಬಿಗ್ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ.

ರಾಹುಲ್ ಏಕಾಂಗಿ ಹೋರಾಟ

ಜಡೇಜಾ 9 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ತಾಳ್ಮೆಯ ಅರ್ಧಶತಕದ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ 66 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಇಡೀ ಟೂರ್ನಿಯಲ್ಲಿ ತಂಡದಲ್ಲಿ ಇದ್ದೂ ಇಲ್ಲದಂತ್ತಿದ್ದ ಸೂರ್ಯಕುಮಾರ್ ಕೂಡ 18 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರೆ, ಭಾರತದ ಬಾಲಂಗೋಚಿಗಳಿಗೂ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Sun, 19 November 23

ತಾಜಾ ಸುದ್ದಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ