IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

IND vs AUS Final, ICC World Cup 2023: 2011ರ ವಿಶ್ವಕಪ್​ನಲ್ಲಿ ಭಾರತ ತಂಡದಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡ ರೋಹಿತ್ ಶರ್ಮಾ ಅವರಿಗೆ 2023 ವಿಶ್ವಕಪ್ ಫೈನಲ್ ಪಂದ್ಯ ಭಾವನಾತ್ಮಕ ಕ್ಷಣವಾಗಿದೆ. ಈ ಕುರಿತಾಗಿ ಪಂದ್ಯ ಆರಂಭಕ್ಕೂ ಮುನ್ನ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ತಂಡವನ್ನು ಮುನ್ನಡೆಸುತ್ತಿರುವ ನನ್ನ ಕನಸು ನನಸಾಗಿದೆ ಎಂದು ಹೇಳಿದ್ದಾರೆ.

IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ
ಭಾರತ ತಂಡದ ನಾಯಕ ರೋಹಿತ್ ಶರ್ಮಾ
Follow us
ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 3:46 PM

2011ರ ವಿಶ್ವಕಪ್​ನಲ್ಲಿ ಭಾರತ ತಂಡದಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡ ನಂತರ ರೋಹಿತ್ ಶರ್ಮಾ (Rohit Sharma) ಅವರು ಇದೀಗ ಅದೇ ಭಾರತ ತಂಡದ ನಾಯಕರಾಗಿ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿದ್ದು ಇದು ಭಾವನಾತ್ಮಕ ಕ್ಷಣವಾಗಿದೆ. ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಟಾಸ್ ಸಮಯದಲ್ಲಿ ಭಾರತದ ಮಾಜಿ ಕೋಚ್ ರವಿ ಶಾಸ್ತ್ರಿ ಅವರೊಂದಿಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ನನ್ನ ಕನಸು ನನಸಾಗುವ ಕ್ಷಣ ಎಂದು ಹೇಳಿದ್ದಾರೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಒಂದು ವೇಳೆ ಭಾರತ ಟಾಸ್​ ಗೆದಿದ್ದರೆ ಏನು ಮಾಡುತ್ತಿದ್ದಿರಿ ಎಂಬ ಪ್ರಶ್ನೆಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದಾಗಿ ರೋಹಿತ್ ಹೇಳಿದ್ದಾರೆ.

ಇದನ್ನೂ ಓದಿ: IND vs AUS Final: ರೋಹಿತ್, ಗಿಲ್ ಔಟ್; 10 ಓವರ್​ಗಳಲ್ಲಿ 80 ರನ್ ಚಚ್ಚಿದ ಭಾರತ

‘ನಾನು ಮೊದಲು ಬ್ಯಾಟಿಂಗ್ ಮಾಡುತ್ತಿದ್ದೆ. ಉತ್ತಮ ಪಿಚ್, ದೊಡ್ಡ ಪಂದ್ಯ ಇದು ಅದ್ಭುತವಾಗಿರುತ್ತದೆ. ಪ್ರತಿ ಬಾರಿ ನಾವು ಇಲ್ಲಿ ಆಡಿದಾಗ, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಕ್ರಿಕೆಟ್ ಒಂದು ಅತಿದೊಡ್ಡ ಸಂದರ್ಭ. ನಾವು ಚೆನ್ನಾಗಿ ಮತ್ತು ಶಾಂತವಾಗಿ ಇರಬೇಕು’ ಎಂದು ರೋಹಿತ್ ಹೇಳಿದ್ದಾರೆ.

2011 ರಿಂದ 2023 ರವರೆಗೆ ಅವರ ಕ್ರಿಡಾ ಪ್ರಯಾಣದ ಬಗ್ಗೆ ಶಾಸ್ತ್ರಿ ಕೇಳಿದಾಗ ರೋಹಿತ್, ‘ತಮ್ಮ ಕನಸು ನನಸಾಗಿದೆ. ಫೈನಲ್​ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ. ನಮ್ಮ ಮುಂದೆ ಏನಿದೆ ಎಂದು ನನಗೆ ಗೊತ್ತು. ನಾವು ಉತ್ತಮವಾಗಿ ಆಡಬೇಕು ಮತ್ತು ಫಲಿತಾಂಶವನ್ನು ಪಡೆಯಬೇಕು. ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕಳೆದ 10 ಪಂದ್ಯಗಳಲ್ಲಿ ನಾವು ಸ್ಥಿರವಾಗಿ ಆಡಿದ್ದೇವೆ. ಅದೇ ತಂಡ ಇಂದಿನ ಪಂದ್ಯವನ್ನು ಆಡುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: IND vs AUS, World Cup Final: ಭಾರತ ತಂಡಕ್ಕೆ ಆಲ್ ದಿ ಬೆಸ್ಟ್​ ಎಂದ ಪ್ರಧಾನಿ ನರೇಂದ್ರ ಮೋದಿ

2003ರ ವಿಶ್ವಕಪ್ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತ ತವಕದಲ್ಲಿದೆ. ಟೀಂ ಇಂಡಿಯಾ ಗೆಲ್ಲಲಿ ಎಂದು ದೇಶಾದ್ಯಂತ ಶುಭಾಷಯಗಳ ಸುರಿಮಳೆಯ ಹರಿದು ಬರುತ್ತಿದೆ. ಆಸ್ಟ್ರೇಲಿಯಾ ಕೂಡ 6ನೇ ಬಾರಿ ಟ್ರೋಫಿ ಗೆಲ್ಲುವ ವಿಶ್ವಾಸ ಹೊಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ