IND vs AUS: ಸ್ಟಾರ್ ಆಟಗಾರ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India's Predicted Playing XI Against Australia: ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಆಡಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ.

IND vs AUS: ಸ್ಟಾರ್ ಆಟಗಾರ ಔಟ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Updated By: ಝಾಹಿರ್ ಯೂಸುಫ್

Updated on: Sep 24, 2022 | 6:25 PM

ಭಾರತ ಹಾಗೂ ಆಸ್ಟ್ರೇಲಿಯಾ (India vs Australia 3rd T20) ನಡುವಣ ಟಿ20 ಸರಣಿಯ ಕೊನೆಯ ಪಂದ್ಯ ನಾಳೆ (ಸೆ.25) ಹೈದರಾಬಾದ್​ನಲ್ಲಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದಿದ್ದರೆ, 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯ ಸಾಧಿಸಿತ್ತು. ಹೀಗಾಗಿ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಕೊನೆಯ ಪಂದ್ಯದಲ್ಲಿ ಗೆದ್ದ ತಂಡವು ಟ್ರೋಫಿಯನ್ನು ಎತ್ತಿ ಹಿಡಿಯಲಿದೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇದಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ.

ಏಕೆಂದರೆ ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೂ ಅದು 8 ಓವರ್​ಗಳ ಪಂದ್ಯವಾಗಿತ್ತು. ಹೀಗಾಗಿ ಓರ್ವ ಬೌಲರ್​ ಬದಲಿಗೆ ಹೆಚ್ಚುವರಿ ಬ್ಯಾಟ್ಸ್​ಮನ್​ ಅನ್ನು ಕಣಕ್ಕಿಳಿಸಿತ್ತು. ಅದರಂತೆ ತಂಡದಲ್ಲಿ ರಿಷಭ್ ಪಂತ್ ಸ್ಥಾನ ಪಡೆದಿದ್ದರು. ಇನ್ನು ಪಂತ್ ಕಣಕ್ಕಿಳಿದ ಕಾರಣ ಭುವನೇಶ್ವರ್ ಕುಮಾರ್ ಹೊರಗುಳಿದಿದ್ದರು.

ಇದೀಗ ಹೈದರಾಬಾದ್​ನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ರಿಷಭ್ ಪಂತ್ ತಂಡದಿಂದ ಔಟ್ ಆಗುವುದು ಖಚಿತ ಎನ್ನಬಹುದು. ಏಕೆಂದರೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ತಂಡದಲ್ಲಿ ದಿನೇಶ್ ಕಾರ್ತಿಕ್ ಇದ್ದಾರೆ. ಹೀಗಾಗಿ ಪಂತ್ ಬದಲು ಮತ್ತೆ ಭುವನೇಶ್ವರ್ ಕುಮಾರ್ ಸ್ಥಾನ ಪಡೆಯಲಿದ್ದಾರೆ.

ಇದನ್ನೂ ಓದಿ
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅನುಭವಿ ವೇಗಿಯಾಗಿರುವ ಭುವನೇಶ್ವರ್ ಕುಮಾರ್ ಹೈದರಾಬಾದ್​ನಲ್ಲಿ ಹೆಚ್ಚು ಪಂದ್ಯಗಳನ್ನಾಡಿದ್ದಾರೆ. ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಪರ ಆಡುತ್ತಿರುವ ಭುವಿಗೆ ಇದು ಹೋಮ್ ಗ್ರೌಂಡ್. ಹೀಗಾಗಿಯೇ ನಿರ್ಣಾಯಕ ಪಂದ್ಯದಲ್ಲಿ ಎಸ್​ಆರ್​ಹೆಚ್ ವೇಗಿಯನ್ನು ಟೀಮ್ ಇಂಡಿಯಾ ಕಣಕ್ಕಿಳಿಸಲಿದೆ. ಈ ಮೂಲಕ 1 ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ರೂಪಿಸಬಹುದು.

ಅದರಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಆಡಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ 5ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಆಡಿದ್ರೆ, 6ನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಕಣಕ್ಕಿಳಿಯಬಹುದು. ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.

ಹಾಗೆಯೇ ತಂಡದಲ್ಲಿ ವೇಗಿಗಳಾಗಿ ಜಸ್​​ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಹರ್ಷಲ್ ಪಟೇಲ್ ಆಡಬಹುದು. ಹಾಗೆಯೇ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಅವಕಾಶ ಪಡೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:

  1. ರೋಹಿತ್ ಶರ್ಮಾ
  2. ಕೆಎಲ್ ರಾಹುಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ಹಾರ್ದಿಕ್ ಪಾಂಡ್ಯ
  6. ಅಕ್ಷರ್ ಪಟೇಲ್
  7. ದಿನೇಶ್ ಕಾರ್ತಿಕ್
  8. ಹರ್ಷಲ್ ಪಟೇಲ್
  9. ಭುವನೇಶ್ವರ್ ಕುಮಾರ್
  10. ಜಸ್​ಪ್ರೀತ್ ಬುಮ್ರಾ
  11. ಯುಜ್ವೇಂದ್ರ ಚಹಾಲ್