IND vs AUS: ಮೈದಾನ ತೊರೆದ ಜಸ್​ಪ್ರೀತ್ ಬುಮ್ರಾ: ವಿರಾಟ್ ಕೊಹ್ಲಿ ಕ್ಯಾಪ್ಟನ್

India vs Australia: ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಅರ್ಧದಲ್ಲೇ ಮೈದಾನ ತೊರೆದಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಸಿಡ್ನಿ ಟೆಸ್ಟ್​ನಿಂದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದರು. ಹೀಗಾಗಿ ಉಪನಾಯಕ ಜಸ್​ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುತ್ತಿದ್ದರು.

IND vs AUS: ಮೈದಾನ ತೊರೆದ ಜಸ್​ಪ್ರೀತ್ ಬುಮ್ರಾ: ವಿರಾಟ್ ಕೊಹ್ಲಿ ಕ್ಯಾಪ್ಟನ್
Jasprit Bumrah
Follow us
ಝಾಹಿರ್ ಯೂಸುಫ್
|

Updated on:Jan 04, 2025 | 10:07 AM

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ಭಾರತ ತಂಡದ ಹಂಗಾಮಿ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ದ್ವಿತೀಯ ದಿನದಾಟದ ಭೋಜನಾ ವಿರಾಮದ ಬಳಿಕ ಜಸ್​ಪ್ರೀತ್ ಬುಮ್ರಾ ಮೈದಾನದಿಂದ ಹೊರ ನಡೆದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಆಸ್ಪತ್ರೆಗೆ ತೆರಳುತ್ತಿರುವುದು ಕಂಡು ಬಂದಿದೆ.

ಮೇಲ್ನೋಟಕ್ಕೆ ಜಸ್​ಪ್ರೀತ್ ಬುಮ್ರಾ ನೋವಿನ ಸಮಸ್ಯೆಗೆ ಒಳಗಾಗಿದ್ದು, ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದಾರೆ. ಅಲ್ಲದೆ ಇದೀಗ ಸ್ಕ್ಯಾನಿಂಗ್ ಮಾಡಲು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಜಸ್​ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ವರ್ಷಗಳ ಬಳಿಕ ಕಿಂಗ್ ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ.

ಜಸ್​ಪ್ರೀತ್ ಬುಮ್ರಾ ತೆರಳುತ್ತಿರುವ ವಿಡಿಯೋ:

ಟೀಮ್ ಇಂಡಿಯಾಗೆ ಹಿನ್ನಡೆ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಜಸ್​ಪ್ರೀತ್ ಬುಮ್ರಾ ಈವರೆಗೆ 32 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಇದೀಗ ನಿರ್ಣಾಯಕ ಪಂದ್ಯದಲ್ಲೂ ಪರಾಕ್ರಮ ಮೆರೆಯುತ್ತಿದ್ದ ಬುಮ್ರಾ ಹೊರನಡೆದಿರುವುದು ಆಸ್ಟ್ರೇಲಿಯಾ ಪಾಲಿಗೆ ಪ್ಲಸ್ ಪಾಯಿಂಟ್.

ಏಕೆಂದರೆ ಸಿಡ್ನಿ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ 2 ವಿಕೆಟ್ ಕಬಳಿಸಿ ಆಸ್ಟ್ರೇಲಿಯಾಗೆ ಆಘಾತ ನೀಡಿದ್ದರು. ಇದೀಗ ಬುಮ್ರಾ ಇಲ್ಲದೆ ಭಾರತ ತಂಡವು ದ್ವಿತೀಯ ದಿನದಾಟವನ್ನು ಮುಂದುವರೆಸಿದ್ದು, ಇದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

ಬ್ಯೂ ವೆಬ್​ಸ್ಟರ್ ಅರ್ಧಶತಕ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಷಭ್ ಪಂತ್ 40 ರನ್ ಬಾರಿಸಿದ್ದರು. ಈ ನಲ್ವತ್ತು ರನ್​​ಗಳ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 185 ರನ್​ಗಳನ್ನು ಕಲೆಹಾಕಿತು.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು 96 ರನ್​​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಈ ಹಂತದಲ್ಲಿ ಕಣಕ್ಕಿಳಿದ ಬ್ಯೂ ವೆಬ್​ಸ್ಟರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು, ಈ ಮೂಲಕ 96 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ.

ಇದನ್ನೂ ಓದಿ: ಏನು ಮಾಡಬೇಕೆಂದು ನನಗೆ ಗೊತ್ತಿದೆ… ನಿವೃತ್ತಿ ನೀಡಲ್ಲ ಎಂದ ರೋಹಿತ್ ಶರ್ಮಾ

ಈ ಅರ್ಧಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 181 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ ಭಾರತ ತಂಡವು ದ್ವಿತೀಯ ಇನಿಂಗ್ಸ್ ಶುರು ಮಾಡಿದ್ದು, ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದಾರೆ.

Published On - 9:02 am, Sat, 4 January 25

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ