IND Vs AUS: 6 ಬೌಂಡರಿ, 3 ಸಿಕ್ಸ್; ಆಸೀಸ್ ವಿರುದ್ಧ 27 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ರಾಹುಲ್..!
T20 World Cup 2022: ಇನಿಂಗ್ಸ್‌ನ ಆರಂಭದಿಂದಲೂ ಆಸ್ಟ್ರೇಲಿಯದ ಬೌಲರ್‌ಗಳ ಮೇಲೆ ದಾಳಿ ನಡೆಸಿದ ರಾಹುಲ್ 6 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ ಅರ್ಧಶತಕ ಪೂರೈಸಿದರು.
ಐಸಿಸಿ ಟಿ20 ವಿಶ್ವಕಪ್‌ನ (T20 World Cup 2022) ಮೊದಲ ಅಭ್ಯಾಸ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಕೆಎಲ್ ರಾಹುಲ್ (KL Rahul) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ತಮ್ಮ ಇನ್ನಿಂಗ್ಸ್ನ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ರಾಹುಲ್ ಟಿ20 ವಿಶ್ವಕಪ್ನಲ್ಲಿ ಶುಭಾರಂಭ ಮಾಡಿದ್ದಾರೆ. ಇನಿಂಗ್ಸ್‌ನ ಆರಂಭದಿಂದಲೂ ಆಸ್ಟ್ರೇಲಿಯದ ಬೌಲರ್‌ಗಳ ಮೇಲೆ ದಾಳಿ ನಡೆಸಿದ ರಾಹುಲ್ 6 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ ಅರ್ಧಶತಕ ಪೂರೈಸಿದರು. ಈ ಪಂದ್ಯದಲ್ಲಿ ಉಪನಾಯಕನ ಅಬ್ಬರ ಹೇಗಿತ್ತು ಎಂಬುದಕ್ಕೆ ಸಾಕ್ಷಿಯಾಗಿ, ರಾಹುಲ್ ಅರ್ಧಶತಕ ಗಳಿಸಿದ ವೇಳೆ ನಾಯಕ ರೋಹಿತ್ ಶರ್ಮಾ (Rohit Sharma) ಕೇವಲ 1 ರನ್ ಮಾತ್ರ ಗಳಿಸಿದ್ದರು. ಆಸೀಸ್ ಬೌಲರ್ಗಳಾದ ಪಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್ರನ್ನು ಸರಿಯಾಗಿಯೇ ಬೆಂಡೆತ್ತಿದ್ದ ರಾಹುಲ್, ಪವರ್‌ಪ್ಲೇನಲ್ಲಿ ಭಾರತದ ಸ್ಕೋರನ್ನು 69 ರ ಗಡಿ ದಾಟಿಸಿದರು.
ಆದರೆ, ಕೆಎಲ್ ರಾಹುಲ್ ಅವರ ಈ ಸ್ಫೋಟಕ ಇನ್ನಿಂಗ್ಸ್ 8ನೇ ಓವರ್ನಲ್ಲಿ ಅಂತ್ಯಗೊಂಡಿತು. ಬಿಗ್ ಶಾಟ್ ಆಡುವ ಯತ್ನದಲ್ಲಿ ರಾಹುಲ್, ಮ್ಯಾಕ್ಸ್ವೆಲ್ಗೆ ವಿಕೆಟ್ ಒಪ್ಪಿಸಿದರು. ಈ ಪಂದ್ಯದಲ್ಲಿ 172 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ರಾಹುಲ್, ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ.
ಅಭ್ಯಾಸ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ
ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಭಾರತದ ವಿರುದ್ಧ, ಆಸ್ಟ್ರೇಲಿಯಾ ತಮ್ಮ ಪ್ಲೇಯಿಂಗ್ ಇಲೆವೆನ್ನಲ್ಲಿ ಪ್ರಮುಖ 4 ಆಟಗಾರರಿಗೆ ವಿಶ್ರಾಂತಿ ನೀಡಿದೆ. ಆದರೆ ಟೀಮ್ ಇಂಡಿಯಾ ಮಾತ್ರ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ ಭಾಗಶಃ ತಂಡವನ್ನೇ ಈ ಪಂದ್ಯದಲ್ಲಿ ಆಡಿಸಿದೆ. ಈ ಪಂದ್ಯದಲ್ಲಿ ದೀಪಕ್ ಹೂಡಾ, ರಿಷಭ್ ಪಂತ್, ಮೊಹಮ್ಮದ್ ಶಮಿ ಮತ್ತು ಯುಜ್ವೇಂದ್ರ ಚಹಾಲ್ ಭಾರತದ ಮುಖ್ಯ ಆಡುವ XI ನ ಭಾಗವಾಗಿಲ್ಲ ಆದರೆ ಈ ಆಟಗಾರರಿಗೆ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಲು ಅವಕಾಶ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ತಂಡ ಡೇವಿಡ್ ವಾರ್ನರ್, ಮ್ಯಾಥ್ಯೂ ವೇಡ್, ಜೋಶ್ ಹ್ಯಾಜಲ್ವುಡ್ ಮತ್ತು ಆಡಮ್ ಝಂಪಾ ಅವರಿಗೆ ವಿಶ್ರಾಂತಿ ನೀಡಿದೆ.
ಇದನ್ನೂ ಓದಿ: Happy Birthday Anil Kumble: 52ನೇ ವಸಂತಕ್ಕೆ ಕಾಲಿಟ್ಟ ಅನಿಲ್ ಕುಂಬ್ಳೆಗೆ ‘ಜಂಬೋ’ ಎಂಬ ಹೆಸರಿಟ್ಟವರು ಯಾರು ಗೊತ್ತಾ?
ಆಸ್ಟ್ರೇಲಿಯಾ ತಂಡ: ಆರನ್ ಫಿಂಚ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಪ್ಯಾಟ್ ಕಮಿನ್ಸ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್‌ಸನ್.
ಭಾರತ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಆರ್. ಅಶ್ವಿನ್, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಾಲ್.
A look at our Team sheet for today’s practice match against Australia.
Live – https://t.co/3dEaIjz140 #INDvAUS #T20WorldCup pic.twitter.com/wIcb6mBqa2
— BCCI (@BCCI) October 17, 2022
Australia have won the toss and elect to bowl first.
Follow the match here – https://t.co/3dEaIjz140 #INDvAUS #T20WorldCup pic.twitter.com/Js9ETposyf
— BCCI (@BCCI) October 17, 2022
ಭಾರತದ ಮೊದಲ ಎದುರಾಳಿ ಪಾಕಿಸ್ತಾನ
ಭಾರತವು ಅಕ್ಟೋಬರ್ 19 ರಂದು ನ್ಯೂಜಿಲೆಂಡ್ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನು ಆಡಬೇಕಾಗಿದೆ. ಅದರ ನಂತರ ಟೀಂ ಇಂಡಿಯಾ ಅಕ್ಟೋಬರ್ 23 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಅತ್ಯುತ್ತಮ ಆಟಗಾರರ ಹನ್ನೊಂದರ ಬಳಗವನ್ನು ಹುಡುಕಲು ಪ್ರಯತ್ನಿಸುತ್ತಿದ್ದು, ಅಭ್ಯಾಸ ಪಂದ್ಯವು ಅದಕ್ಕೆ ಉತ್ತಮ ಅವಕಾಶವಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:42 am, Mon, 17 October 22