IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಗಳು 5 ಚಾನೆಲ್​ಗಳಲ್ಲಿ ನೇರ ಪ್ರಸಾರ

India vs Australia: ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ. ಅಂದರೆ ಅಕ್ಟೋಬರ್ 8 ರಂದು ನಡೆಯಲಿರುವ ಪಂದ್ಯದಲ್ಲಿ ಆಸೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡುತ್ತಿರುವುದು ವಿಶೇಷ.

IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಗಳು 5 ಚಾನೆಲ್​ಗಳಲ್ಲಿ ನೇರ ಪ್ರಸಾರ
India vs Australia
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 07, 2023 | 7:06 PM

ಏಕದಿನ ವಿಶ್ವಕಪ್​ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಯ ಪಂದ್ಯಗಳನ್ನು 5 ಚಾನೆಲ್​ಗಳಲ್ಲಿ ನೇರ ಪ್ರಸಾರ ಮಾಡಲು ನೆಟ್​ವರ್ಕ್​ 18 ನಿರ್ಧರಿಸಿದೆ. ಸೆಪ್ಟೆಂಬರ್ 22 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ. ಈ ಪಂದ್ಯಗಳು ಸ್ಪೋರ್ಟ್ಸ್​-18 ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದ್ದು, ಇದರ ಜೊತೆಗೆ ಪ್ರಾದೇಶಿಕ ಭಾಷಾ ಚಾನೆಲ್​ಗಳಲ್ಲೂ ಲೈವ್ ಇರಲಿದೆ.

ಇಲ್ಲಿ ಪ್ರಾದೇಶಿಕ ಭಾಷಾ ವಿಭಾಗದಲ್ಲಿ 4 ಚಾನೆಲ್​ಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಕನ್ನಡ ಕೂಡ ಇರುವುದು ವಿಶೇಷ. ಅದರಂತೆ ಭಾರತ – ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಈ ಕೆಳಗಿನ ಐದು ಚಾನೆಲ್​ಗಳಲ್ಲಿ ನೇರ ಪ್ರಸಾರವಾಗಲಿದೆ…

  1. – ಸ್ಪೋರ್ಟ್ಸ್​ 18 (ಇಂಗ್ಲಿಷ್)
  2. – ಕಲರ್ಸ್ (ಕನ್ನಡ)
  3. – ಕಲರ್ಸ್​ (ತಮಿಳ್)
  4. – ಕಲರ್ಸ್ ಸಿನಿಪ್ಲೆಕ್ಸ್ (ಹಿಂದಿ)
  5. – ಕಲರ್ಸ್ (ಬಾಂಗ್ಲಾ)

ಡಿಜಿಟಲ್​ನಲ್ಲೂ ಉಚಿತ ಪ್ರಸಾರ:

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ಉಚಿತವಾಗಿ ವೀಕ್ಷಿಸಬಹುದು. ಈ ಸರಣಿಯ ಎಲ್ಲಾ ಪಂದ್ಯಗಳು ಜಿಯೋಸಿನಿಮಾ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲಿ ನೇರ ಪ್ರಸಾರವಾಗಲಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  1. ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  2. ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  3. ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

ಆಸ್ಟ್ರೇಲಿಯಾ ಮೊದಲ ಎದುರಾಳಿ:

ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ. ಅಂದರೆ ಅಕ್ಟೋಬರ್ 8 ರಂದು ನಡೆಯಲಿರುವ ಪಂದ್ಯದಲ್ಲಿ ಆಸೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡುತ್ತಿರುವುದು ವಿಶೇಷ.

ಆಸ್ಟ್ರೇಲಿಯಾ ಏಕದಿನ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಆಷ್ಟನ್ ಅಗರ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಇದನ್ನೂ ಓದಿ: ODI World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು