ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ ಎರಡನೇ ಟಿ20 ಪಂದ್ಯಕ್ಕೆ ನಾಗ್ಪುರ ಸಜ್ಜಾಗಿದ್ದು, ಉಭಯ ತಂಡಗಳು ಕೂಡ ಈಗಾಗಲೇ ನಾಗ್ಪುರದಲ್ಲಿ ಅಭ್ಯಾಸ ಆರಂಭಿಸಿವೆ. ಸರಣಿ ಸೋಲಿನ ಭೀತಿಯಲ್ಲಿರುವ ಭಾರತಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ರೋಹಿತ್ (Rohit Sharma) ಪಡೆ ಗೆದ್ದು ಕಾಂಗರೂಗಳಿಗೆ ಸೋಲಿನ ಆಘಾತ ನೀಡಲು ಮುಂದಾಗಿದೆ. ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆದಿದ್ದು, ಪ್ರವಾಸಿ ತಂಡ ನಾಲ್ಕು ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಭಾರತ ತಂಡ ಸಣಿಯಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿದೆ. ಅದೇನೇ ಇರಲಿ, ರೋಹಿತ್ ಶರ್ಮಾ ತವರಿನಲ್ಲಿ ಹೀನಾಯ ಸೋಲನ್ನು ತಪ್ಪಿಸಬೇಕಾದರೆ ನಾಗ್ಪುರ ಟಿ20 ಗೆಲ್ಲಲೇಬೇಕಾಗಿದೆ.
ತಂಡಕ್ಕೆ ಬುಮ್ರಾ ಎಂಟ್ರಿ
ಮೊಹಾಲಿಯಲ್ಲಿ ನಡೆದ ಟಿ20 ಪಂದ್ಯದಲ್ಲಿ ಭಾರತ ತಂಡ 208 ರನ್ ಗಳಿಸಿತ್ತು. ಆದರೆ ಈ ಟಾರ್ಗೆಟ್ ಬೆನ್ನಟ್ಟಿದ ಕಾಂಗರೂಗಳಿಗೆ ಟೀಂ ಇಂಡಿಯಾ ಬೌಲರ್‌ಗಳು ಸುಲಭ ತುತ್ತಾಗಿದ್ದರು. ಅದರಲ್ಲಂತೂ ಕೊನೆಯ 3 ಓವರ್ಗಳು ರೋಹಿತ್ ಪಡೆಗೆ ನುಂಗಲಾರದ ತುತ್ತಾಗಿದ್ದವು. ಮೊದಲ ಪಂದ್ಯದಲ್ಲಿ ಅಕ್ಷರ್ ಪಟೇಲ್ ಹೊರತುಪಡಿಸಿ, ಎಲ್ಲಾ ಭಾರತೀಯ ಬೌಲರ್‌ಗಳು ಪ್ರತಿ ಓವರ್‌ಗೆ 11 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ತಂಡದಲ್ಲಿ ಬುಮ್ರಾ ಅಲಭ್ಯತೆ ಎದ್ದು ಕಾಣುತ್ತಿತ್ತು. ಆದ್ದರಿಂದ ಸರಣಿಯನ್ನು ಜೀವಂತವಾಗಿರಿಸಲು ಟೀಮ್ ಇಂಡಿಯಾ ನಾಗ್ಪುರದಲ್ಲಿ ಬುಮ್ರಾ ಅವರನ್ನು ಕಣಕ್ಕಿಳಿಸುವ ಎಲ್ಲಾ ಸಾಧ್ಯತೆಗಳಿವೆ.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯ ಸೆಪ್ಟೆಂಬರ್ 23 ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ T20 ಎಲ್ಲಿ ನೇರ ಪ್ರಸಾರವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ T20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ T20 ನ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಇದಲ್ಲದೆ, ನೀವು tv9kannada.com ನ ಲೈವ್ ಬ್ಲಾಗ್‌ನಿಂದಲೂ ಪಂದ್ಯದ ಮಾಹಿತಿಯನ್ನು ಪಡೆಯಬಹುದು.
ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಶಾನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ
Published On - 5:23 pm, Thu, 22 September 22