IND vs AUS: ಭಾರತ vs ಆಸ್ಟ್ರೇಲಿಯಾ: ಯಾರು ಗೆಲ್ತಾರೆ ಎಂದು ಭವಿಷ್ಯ ನುಡಿದ ಜಯವರ್ಧನೆ
India vs Australia Test Series: ಈ ಬಾರಿಯ ಬಾರ್ಡರ್-ಗವಾಸ್ಕರ್ ಸರಣಿಯು ಅತ್ಯುತ್ತಮ ಸಿರೀಸ್ ಆಗಿರಲಿದೆ ಎಂದು ಭಾವಿಸುತ್ತೇನೆ. ಭಾರತೀಯ ಪರಿಸ್ಥಿತಿಗಳನ್ನು ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳು ಹೇಗೆ ಎದುರಿಸುತ್ತಾರೆ ಎಂಬುದು ಕುತೂಹಲ.
India vs Australia Test: ಭಾರತ-ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್ ಟೆಸ್ಟ್ ಕದನಕ್ಕೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 9 ರಿಂದ ಶುರುವಾಗಲಿರುವ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನಾಗಪುರದಲ್ಲಿ ನಡೆಯಲಿದೆ. ನಾಲ್ಕು ಪಂದ್ಯಗಳ ಈ ಸರಣಿಯ ಫಲಿತಾಂಶ ಏನಾಗಲಿದೆ? ಯಾರು ಗೆಲ್ತಾರೆ, ರನ್ ಸರದಾರರು ಯಾರು ಎಂಬಿತ್ಯಾದಿ ಲೆಕ್ಕಚಾರಗಳು ಕೂಡ ಶುರುವಾಗಿದೆ. ಇದರ ನಡುವೆ ಶೀಲಂಕಾ ತಂಡದ ಮಾಜಿ ನಾಯಕ ಮಹೇಲ ಜಯವರ್ಧನೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲ್ಲುವ ತಂಡ ಯಾವುದೆಂದು ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಐಸಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಹೇಲ ಜಯವರ್ಧನೆ, ಈ ಬಾರಿಯ ಬಾರ್ಡರ್-ಗವಾಸ್ಕರ್ ಸರಣಿಯು ಅತ್ಯುತ್ತಮ ಸಿರೀಸ್ ಆಗಿರಲಿದೆ ಎಂದು ಭಾವಿಸುತ್ತೇನೆ. ಭಾರತೀಯ ಪರಿಸ್ಥಿತಿಗಳನ್ನು ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳು ಹೇಗೆ ಎದುರಿಸುತ್ತಾರೆ ಎಂಬುದು ಕುತೂಹಲ. ಹಾಗೆಯೇ ಆಸ್ಟ್ರೇಲಿಯಾ ತಂಡ ಕೂಡ ಉತ್ತಮ ಬೌಲಿಂಗ್ ವಿಭಾಗವನ್ನು ಹೊಂದಿದ್ದಾರೆ. ಇವರನ್ನು ಭಾರತೀಯ ಬ್ಯಾಟ್ಸ್‌ಮನ್‌ಗಳು ಅದನ್ನು ಹೇಗೆ ಎದುರಿಸುತ್ತಾರೆ ಎಂಬುದು ಕೂಡ ಕೌತುಕ. ಹೀಗಾಗಿ ಈ ಸರಣಿಯು ಅತ್ಯಾಕರ್ಷಕವಾಗಿರಲಿದೆ ಎಂದು ಜಯವರ್ಧನೆ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಈ ಸರಣಿಯಲ್ಲಿ ಯಾರು ಗೆಲ್ತಾರೆ ಎಂದು ಊಹಿಸುವುದು ತುಸು ಕಷ್ಟಕರ. ಇದಾಗ್ಯೂ ಒಬ್ಬ ಶ್ರೀಲಂಕನ್ ಆಗಿ ನಾನು ಈ ಸರಣಿಯನ್ನು ಆಸ್ಟ್ರೇಲಿಯಾ ತಂಡ ಗೆಲ್ಲಲಿದೆ ಎಂದು ಭಾವಿಸುತ್ತೇನೆ. ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಟೀಮ್ ಇಂಡಿಯಾವನ್ನು ಮಣಿಸಿ ಸರಣಿ ಜಯಿಸಲಿದೆ ಎಂದು ಜಯವರ್ಧನೆ ಭವಿಷ್ಯ ನುಡಿದಿದ್ದಾರೆ.
ಒಟ್ಟಿನಲ್ಲಿ ಸರಣಿ ಆರಂಭಕ್ಕೂ ಮುನ್ನ ಮಹೇಲ ಜಯವರ್ಧನೆ ನೀಡಿರುವ ಈ ಹೇಳಿಕೆಯು ಆಸೀಸ್ ಪಡೆಯ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಆದರೆ ಮತ್ತೊಂದೆಡೆ ಲಂಕಾ ಕ್ರಿಕೆಟಿಗ ಭವಿಷ್ಯವನ್ನು ಟೀಮ್ ಇಂಡಿಯಾ ಆಟಗಾರರು ಸುಳ್ಳಾಗಿಸಲಿದ್ದಾರಾ ಕಾದು ನೋಡಬೇಕಿದೆ.
ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ:
ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
- ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
- ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
- ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್).
Published On - 3:57 pm, Mon, 6 February 23