IND vs AUS: ಭಾರತ vs ಆಸ್ಟ್ರೇಲಿಯಾ: ಯಾರು ಗೆಲ್ತಾರೆ ಎಂದು ಭವಿಷ್ಯ ನುಡಿದ ಜಯವರ್ಧನೆ

| Updated By: ಝಾಹಿರ್ ಯೂಸುಫ್

Updated on: Feb 06, 2023 | 4:00 PM

India vs Australia Test Series: ಈ ಬಾರಿಯ ಬಾರ್ಡರ್-ಗವಾಸ್ಕರ್ ಸರಣಿಯು ಅತ್ಯುತ್ತಮ ಸಿರೀಸ್​  ಆಗಿರಲಿದೆ ಎಂದು ಭಾವಿಸುತ್ತೇನೆ. ಭಾರತೀಯ ಪರಿಸ್ಥಿತಿಗಳನ್ನು ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳು ಹೇಗೆ ಎದುರಿಸುತ್ತಾರೆ ಎಂಬುದು ಕುತೂಹಲ.

IND vs AUS: ಭಾರತ vs ಆಸ್ಟ್ರೇಲಿಯಾ: ಯಾರು ಗೆಲ್ತಾರೆ ಎಂದು ಭವಿಷ್ಯ ನುಡಿದ ಜಯವರ್ಧನೆ
IND vs AUS
Follow us on

India vs Australia Test: ಭಾರತ-ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್ ಟೆಸ್ಟ್ ಕದನಕ್ಕೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 9 ರಿಂದ ಶುರುವಾಗಲಿರುವ ಬಾರ್ಡರ್ – ಗವಾಸ್ಕರ್ ಟೆಸ್ಟ್​ ಸರಣಿಯ ಮೊದಲ ಪಂದ್ಯವು ನಾಗಪುರದಲ್ಲಿ ನಡೆಯಲಿದೆ. ನಾಲ್ಕು ಪಂದ್ಯಗಳ ಈ ಸರಣಿಯ ಫಲಿತಾಂಶ ಏನಾಗಲಿದೆ? ಯಾರು ಗೆಲ್ತಾರೆ, ರನ್​ ಸರದಾರರು ಯಾರು ಎಂಬಿತ್ಯಾದಿ ಲೆಕ್ಕಚಾರಗಳು ಕೂಡ ಶುರುವಾಗಿದೆ. ಇದರ ನಡುವೆ ಶೀಲಂಕಾ ತಂಡದ ಮಾಜಿ ನಾಯಕ ಮಹೇಲ ಜಯವರ್ಧನೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲ್ಲುವ ತಂಡ ಯಾವುದೆಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಐಸಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಹೇಲ ಜಯವರ್ಧನೆ, ಈ ಬಾರಿಯ ಬಾರ್ಡರ್-ಗವಾಸ್ಕರ್ ಸರಣಿಯು ಅತ್ಯುತ್ತಮ ಸಿರೀಸ್​  ಆಗಿರಲಿದೆ ಎಂದು ಭಾವಿಸುತ್ತೇನೆ. ಭಾರತೀಯ ಪರಿಸ್ಥಿತಿಗಳನ್ನು ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳು ಹೇಗೆ ಎದುರಿಸುತ್ತಾರೆ ಎಂಬುದು ಕುತೂಹಲ. ಹಾಗೆಯೇ ಆಸ್ಟ್ರೇಲಿಯಾ ತಂಡ ಕೂಡ ಉತ್ತಮ ಬೌಲಿಂಗ್ ವಿಭಾಗವನ್ನು ಹೊಂದಿದ್ದಾರೆ. ಇವರನ್ನು ಭಾರತೀಯ ಬ್ಯಾಟ್ಸ್‌ಮನ್‌ಗಳು ಅದನ್ನು ಹೇಗೆ ಎದುರಿಸುತ್ತಾರೆ ಎಂಬುದು ಕೂಡ ಕೌತುಕ. ಹೀಗಾಗಿ ಈ ಸರಣಿಯು ಅತ್ಯಾಕರ್ಷಕವಾಗಿರಲಿದೆ ಎಂದು ಜಯವರ್ಧನೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಈ ಸರಣಿಯಲ್ಲಿ ಯಾರು ಗೆಲ್ತಾರೆ ಎಂದು ಊಹಿಸುವುದು ತುಸು ಕಷ್ಟಕರ. ಇದಾಗ್ಯೂ ಒಬ್ಬ ಶ್ರೀಲಂಕನ್ ಆಗಿ ನಾನು ಈ ಸರಣಿಯನ್ನು ಆಸ್ಟ್ರೇಲಿಯಾ ತಂಡ ಗೆಲ್ಲಲಿದೆ ಎಂದು ಭಾವಿಸುತ್ತೇನೆ. ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಟೀಮ್ ಇಂಡಿಯಾವನ್ನು ಮಣಿಸಿ ಸರಣಿ ಜಯಿಸಲಿದೆ ಎಂದು ಜಯವರ್ಧನೆ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಒಟ್ಟಿನಲ್ಲಿ ಸರಣಿ ಆರಂಭಕ್ಕೂ ಮುನ್ನ ಮಹೇಲ ಜಯವರ್ಧನೆ ನೀಡಿರುವ ಈ ಹೇಳಿಕೆಯು ಆಸೀಸ್ ಪಡೆಯ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಆದರೆ ಮತ್ತೊಂದೆಡೆ ಲಂಕಾ ಕ್ರಿಕೆಟಿಗ ಭವಿಷ್ಯವನ್ನು ಟೀಮ್ ಇಂಡಿಯಾ ಆಟಗಾರರು ಸುಳ್ಳಾಗಿಸಲಿದ್ದಾರಾ ಕಾದು ನೋಡಬೇಕಿದೆ.

ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ:

ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
  2. ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
  3. ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
  4. ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್).

 

 

 

Published On - 3:57 pm, Mon, 6 February 23