AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೀನಾಯವಾಗಿ ಸೋತು ಬಿಸಿಸಿಐ ಮೇಲೆ ಗೂಬೆ ಕೂರಿಸಿದ ಪಾಕ್ ತಂಡದ ನಿರ್ದೇಶಕ

India vs Pakistan, ICC World Cup 2023: ಇದು ವಿಶ್ವಕಪ್ ಪಂದ್ಯಾವಳಿ ಅನಿಸಲಿಲ್ಲ. ಬದಲಿಗೆ ಇದು ಬಿಸಿಸಿಐ ಆಯೋಜಿಸಿದ ದ್ವಿಪಕ್ಷೀಯ ಸರಣಿಯಿಂದ ಬಾಸವಾಯಿತು. ಪಾಕಿಸ್ತಾನದ ಅಭಿಮಾನಿಗಳಿಗೆ ಭಾರತಕ್ಕೆ ಬರಲು ವೀಸಾ ನೀಡಲಾಗಿಲ್ಲ. ಇದು ತಂಡದ ಪ್ರದರ್ಶನಕ್ಕೆ ಕೊಂಚ ಹಿನ್ನಡೆಯುಂಟು ಮಾಡಿತು’ ಎಂದರು.

IND vs AUS: ಹೀನಾಯವಾಗಿ ಸೋತು ಬಿಸಿಸಿಐ ಮೇಲೆ ಗೂಬೆ ಕೂರಿಸಿದ ಪಾಕ್ ತಂಡದ ನಿರ್ದೇಶಕ
ಮಿಕ್ಕಿ ಆರ್ಥರ್Image Credit source: insidesport
ಪೃಥ್ವಿಶಂಕರ
|

Updated on:Oct 15, 2023 | 9:56 AM

Share

ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ತಂಡಗಳನ್ನು ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಇದೀಗ ತನ್ನ ಮೂರನೇ ಪಂದ್ಯದಲ್ಲಿ ಬದ್ದವೈರಿ ಪಾಕಿಸ್ತಾನವನ್ನು (India vs Pakistan) ಮಣಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ. ಪಾಕಿಸ್ತಾನ ನೀಡಿದ 192 ರನ್‌ಗಳ ಸವಾಲನ್ನು ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಇದುವರೆಗಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನದ ಸತತ ಎಂಟನೇ ಸೋಲು ಇದಾಗಿದೆ. ಇದೀಗ ಟೀಂ ಇಂಡಿಯಾ ವಿರುದ್ಧ ಸೋತ ನಂತರ ಪಾಕಿಸ್ತಾನ ತಂಡದಲ್ಲಿ ಅಸಮಾಧಾನ ಮೂಡಿದ್ದು, ಪಾಕಿಸ್ತಾನ ತಂಡದ ನಿರ್ದೇಶಕ ಮಿಕ್ಕಿ ಆರ್ಥರ್ (Mickey Arthur) ಬಿಸಿಸಿಐ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಶ್ವಕಪ್ ಪಂದ್ಯಾವಳಿ ಅನಿಸಲಿಲ್ಲ

ಪಾಕಿಸ್ತಾನ ತಂಡದ ಹೀನಾಯ ಸೋಲಿನ ಬಳಿಕ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪಾಕ್ ತಂಡದ ನಿರ್ದೇಶಕ ಮಿಕ್ಕಿ ಆರ್ಥರ್, ಬಿಸಿಸಿಐ ವಿರುದ್ಧ ವಾಗ್ದಾಳಿ ನಡೆಸಿದರು. ಪಾಕಿಸ್ತಾನದ ಅಭಿಮಾನಿಗಳ ಅನುಪಸ್ಥಿತಿ ತಂಡದ ಪ್ರದರ್ಶನದ ಮೇಲೆ ಪ್ರಭಾವ ಬೀರಿತ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರ್ಥರ್, ‘ಇದು ವಿಶ್ವಕಪ್ ಪಂದ್ಯಾವಳಿ ಅನಿಸಲಿಲ್ಲ. ಬದಲಿಗೆ ಇದು ಬಿಸಿಸಿಐ ಆಯೋಜಿಸಿದ ದ್ವಿಪಕ್ಷೀಯ ಸರಣಿಯಿಂದ ಬಾಸವಾಯಿತು. ಪಾಕಿಸ್ತಾನದ ಅಭಿಮಾನಿಗಳಿಗೆ ಭಾರತಕ್ಕೆ ಬರಲು ವೀಸಾ ನೀಡಲಾಗಿಲ್ಲ. ಇದು ತಂಡದ ಪ್ರದರ್ಶನಕ್ಕೆ ಕೊಂಚ ಹಿನ್ನಡೆಯುಂಟು ಮಾಡಿತು’ ಎಂದರು.

90 ಮೀ. ಸಿಕ್ಸರ್ ಬಾರಿಸಿ ಅಂಪೈರ್‌ಗೆ ಬೈಸೆಪ್ಸ್ ತೋರಿಸಿದ ರೋಹಿತ್ ಶರ್ಮಾ..! ವಿಡಿಯೋ ವೈರಲ್

ಬಿಸಿಸಿಐ ಕಾರ್ಯಕ್ರಮದಂತೆ ತೋರುತ್ತಿದೆ

ಪಾಕಿಸ್ತಾನದ ಪ್ರೇಕ್ಷಕರ ಅನುಪಸ್ಥಿತಿ ಆಟಗಾರರ ಮನಸ್ಥಿತಿಯ ಮೇಲೆ ಪ್ರಭಾವ ಬೀರಿದೆಯೇ ಎಂದು ಕೇಳಿದಾಗ, ‘ನೋಡಿ, ಅದನ್ನು ಅಲ್ಲಗಳೆಯುವುದಕ್ಕೆ ಸಾಧ್ಯವಿಲ್ಲ. ನಿಜವಾಗಿ ಹೇಳಬೇಕೆಂದರೆ ಇದು ಐಸಿಸಿ ಪಂದ್ಯಾವಳಿಯಂತೆ ತೋರುತ್ತಿಲ್ಲ. ಇದು ದ್ವಿಪಕ್ಷೀಯ ಸರಣಿಯಂತೆ ಕಾಣುತ್ತದೆ, ಇದು ಬಿಸಿಸಿಐ ಕಾರ್ಯಕ್ರಮದಂತೆ ತೋರುತ್ತಿದೆ. ಆದಾಗ್ಯೂ, ಪ್ರೇಕ್ಷಕರ ಬೆಂಬಲದ ಕೊರತೆಯು ಪಾಕಿಸ್ತಾನ ತಂಡದ ಸೋಲಿಗೆ ಕಾರಣ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಪ್ರೇಕ್ಷಕರ ಉಪಸ್ಥಿತಿಯೂ ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಹಾಗಂತ ನಾನು ತಂಡದ ಆಟಗಾರರ ಪ್ರದರ್ಶನವನ್ನು ಕ್ಷಮಿಸಲು ಹೋಗುವುದಿಲ್ಲ ಎಂದಿದ್ದಾರೆ.

ಶ್ರೇಯಸ್ಸನ್ನು ನಾವು ಭಾರತಕ್ಕೆ ನೀಡಬೇಕು

ಆದಾಗ್ಯೂ, ಪಾಕಿಸ್ತಾನ ತಂಡ ಇಂದು ನಿರ್ಭೀತ ಕ್ರಿಕೆಟ್ ಆಡಲಿಲ್ಲ. ನಮ್ಮ ಒಟ್ಟಾರೆ ಪ್ರದರ್ಶನ ತೃಪ್ತಿ ತಂದಿಲ್ಲ. ನಾವು ನಿಜವಾಗಿಯೂ ಆಟದ ಮೇಲೆ ಇನ್ನು ಹೆಚ್ಚು ಗಮನ ಹರಿಸಬೇಕು ಎಂಬುದು ನನ್ನ ಅಭಿಪ್ರಾಯ. ಬಾಬರ್ ಮತ್ತು ರಿಜ್ವಾನ್ ಅವರ 82 ರನ್ ಜೊತೆಯಾಟದ ಲಾಭವನ್ನು ನಾವು ಉಪಯೋಗಿಸಿಕೊಳ್ಳಲಿಲ್ಲ. 2 ವಿಕೆಟ್ ನಷ್ಟಕ್ಕೆ 155 ರನ್ ಕಲೆಹಾಕಿದ ತಂಡ 190 ರನ್​ಗಳಿಗೆ ಆಲೌಟ್ ಆಗುವುದನ್ನು ಕ್ಷಮಿಸಲಾಗುವುದಿಲ್ಲ. ಆದರೆ ಇದರ ಶ್ರೇಯಸ್ಸನ್ನು ನಾವು ಭಾರತಕ್ಕೆ ನೀಡಬೇಕು. ನಿಜವಾಗಿಯೂ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ಮಾಡಿತು’ ಎಂದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Sun, 15 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ