AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್​ಗೆ ತಕ್ಕ ತಿರುಗೇಟು ನೀಡಿದ ಭಾರತ; 2ನೇ ದಿನ ಬುಮ್ರಾ ಪಡೆಯದ್ದೇ ಪಾರುಪತ್ಯ

IND vs AUS: ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾವನ್ನು 104 ರನ್​ಗಳಿಗೆ ಆಲೌಟ್ ಮಾಡಿರುವ ಟೀಂ ಇಂಡಿಯಾ, ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಎರಡನೇ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 172 ರನ್ ಕಲೆಹಾಕಿದೆ. ಈ ಮೂಲಕ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 218 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

IND vs AUS: ಆಸೀಸ್​ಗೆ ತಕ್ಕ ತಿರುಗೇಟು ನೀಡಿದ ಭಾರತ; 2ನೇ ದಿನ ಬುಮ್ರಾ ಪಡೆಯದ್ದೇ ಪಾರುಪತ್ಯ
ಭಾರತ- ಆಸ್ಟ್ರೇಲಿಯಾ
ಪೃಥ್ವಿಶಂಕರ
|

Updated on:Nov 23, 2024 | 3:37 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದ ಎರಡನೇ ದಿನದಾಟ ಅಂತ್ಯಗೊಂಡಿದೆ. ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾವನ್ನು 104 ರನ್​ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ 172 ರನ್ ಕಲೆಹಾಕಿದೆ. ಈ ಮೂಲಕ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 218 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ತಂಡದ ಪರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ತಲಾ ಅರ್ಧಶತಕ ಸಿಡಿಸುವ ಮೂಲಕ ದಿನವಿಡೀ ಕಾಂಗರೂ ಬೌಲರ್​ಗಳನ್ನು ಕಾಡಿದರು. ಮೊದಲ ಇನ್ನಿಂಗ್ಸ್​ನಲ್ಲಿ ವಿಕೆಟ್​ಗಳ ಬೇಟೆಯಾಡಿದ್ದ ಆಸೀಸ್ ವೇಗಿಗಳು ಎರಡನೇ ಇನ್ನಿಂಗ್ಸ್​ನಲ್ಲಿ ವಿಕೆಟ್​ಗಾಗಿ ಕಾದು ಕಾದು ಸುಸ್ತಾದರು.

ವಿಕೆಟ್ ನಷ್ಟವಿಲ್ಲದೆ 172 ರನ್

ಮೇಲೆ ಹೇಳಿದಂತೆ ಪರ್ತ್ ಟೆಸ್ಟ್​ನ ಎರಡನೇ ದಿನದಾಟ ಭಾರತದ ಹೆಸರಲ್ಲಿತ್ತು. ಸದ್ಯ ಎರಡನೇ ದಿನದಾಟದಲ್ಲಿ ಅಜೇಯರಾಗಿ ಉಳಿದು ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕನ್ನಡಿಗ ಕೆಎಲ್ ರಾಹುಲ್ 62 ರನ್ ಹಾಗೂ ಯಶಸ್ವಿ ಜೈಸ್ವಾಲ್ 90 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಇನ್ನು ಮೊದಲ ಇನ್ನಿಂಗ್ಸ್​ನಲ್ಲಿ ಭಾರತವನ್ನು 150 ರನ್​ಗಳಿಗೆ ಆಲೌಟ್ ಮಾಡಿದ್ದ, ಆಸ್ಟ್ರೇಲಿಯಾ ತಂಡ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 104 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ಹೀಗಾಗಿ ಭಾರತ ಮೊದಲ ಇನಿಂಗ್ಸ್‌ನಲ್ಲಿ 46 ರನ್‌ಗಳ ಮುನ್ನಡೆ ಪಡೆದುಕೊಂಡಿತು. ಅಜೇಯರಾಗಿ ಉಳಿದಿರುವ ಯಶಸ್ವಿ 193 ಎಸೆತಗಳನ್ನು ಎದುರಿಸಿದ್ದು ಏಳು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳನ್ನು ಸಿಡಿಸಿದ್ದರೆ, ರಾಹುಲ್ ಇದುವರೆಗೆ 153 ಎಸೆತಗಳನ್ನು ಎದುರಿಸಿದ್ದು ನಾಲ್ಕು ಬೌಂಡರಿಗಳನ್ನು ಬಾರಿಸಿದ್ದಾರೆ.

37 ರನ್​ಗೆ 3 ವಿಕೆಟ್ ಪತನ

ಇನ್ನು ಮೊದಲ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 67 ರನ್ ಬಾರಿಸಿದ್ದ ಕಾಂಗರೂ ಪಡೆ, ಎರಡನೇ ದಿನ 37 ರನ್ ಗಳಿಸುವಷ್ಟರಲ್ಲಿ ಉಳಿದ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ಎರಡನೇ ದಿನದಾಟದಲ್ಲಿ ಅಲೆಕ್ಸ್ ಕ್ಯಾರಿ ರೂಪದಲ್ಲಿ ಆಸ್ಟ್ರೇಲಿಯಾ ತನ್ನ 8ನೇ ವಿಕೆಟ್ ಕಳೆದುಕೊಂಡಿತು. ಬುಮ್ರಾ ಬೌಲಿಂಗ್​ನಲ್ಲಿ ಕೀಪರ್​ ಕೈಗೆ ಕ್ಯಾಚಿತ್ತು ಔಟಾದ ಕ್ಯಾರಿ, 21 ರನ್ ಕಲೆಹಾಕಿದರು. ಇದಾದ ನಂತರ ನಾಥನ್ ಲಿಯಾನ್ ಹರ್ಷಿತ್ ರಾಣಾಗೆ ಬಲಿಯಾದರು. ಆಟ ಆರಂಭವಾದ ಮೊದಲ ಗಂಟೆಯೊಳಗೆ ಭಾರತ ಈ ಎರಡೂ ವಿಕೆಟ್‌ಗಳನ್ನು ಉರುಳಿಸಿತ್ತು.

110 ಎಸೆತ ಎದುರಿಸಿದ ಸ್ಟಾರ್ಕ್​

ಆದಾಗ್ಯೂ, ಕೊನೆಯ ಜೋಡಿಯಾದ ಸ್ಟಾರ್ಕ್ ಮತ್ತು ಜೋಶ್ ಹೇಜಲ್‌ವುಡ್ ಅವರನ್ನು ಔಟ್ ಮಾಡಲು ಟೀಂ ಇಂಡಿಯಾ ಒಂದು ಗಂಟೆ ತೆಗೆದುಕೊಂಡಿತು. ಸ್ಟಾರ್ಕ್ ಮತ್ತು ಹೇಜಲ್‌ವುಡ್ 10ನೇ ವಿಕೆಟ್‌ಗೆ 110 ಎಸೆತಗಳಲ್ಲಿ 25 ರನ್‌ಗಳ ಜೊತೆಯಾಟ ನೀಡಿದರು. ಸ್ಟಾರ್ಕ್ 112 ಎಸೆತಗಳಲ್ಲಿ ಎರಡು ಬೌಂಡರಿಗಳ ನೆರವಿನಿಂದ 26 ರನ್ ಗಳಿಸಿ, ಹರ್ಷಿತ್ ರಾಣಾಗೆ ಬಲಿಯಾದರೆ, ಹೇಜಲ್‌ವುಡ್ ಏಳು ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಐದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Sat, 23 November 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?