IND vs AUS Playing XI: ಭಾರತ ಮೊದಲು ಬ್ಯಾಟಿಂಗ್; 1 ಬದಲಾವಣೆ ಮಾಡಿದ ಆಸ್ಟ್ರೇಲಿಯಾ
ICC T20 World Cup India vs Australia Playing XI: ಇಂದು ಟಿ20 ವಿಶ್ವಕಪ್ನ ಸೂಪರ್ 8 ಹಂತದ ಗ್ರೂಪ್ 1ರ ಪ್ರಮುಖ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಭಾರತ ತಂಡ ಟೂರ್ನಿಯಲ್ಲಿ ಅಜೇಯವಾಗಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ಗೆ ಲಗ್ಗೆ ಇಡಲಿದೆ. ಇತ್ತ ಹಿಂದಿನ ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ
ಇಂದು ಟಿ20 ವಿಶ್ವಕಪ್ನ (T20 World Cup 2024) ಸೂಪರ್ 8 ಹಂತದ ಗ್ರೂಪ್ 1ರ ಪ್ರಮುಖ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವೆ ನಡೆಯುತ್ತಿದೆ. ಭಾರತ ತಂಡ ಟೂರ್ನಿಯಲ್ಲಿ ಅಜೇಯವಾಗಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ಗೆ ಲಗ್ಗೆ ಇಡಲಿದೆ. ಇತ್ತ ಹಿಂದಿನ ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.ಹೀಗಾಗಿ ಎರಡೂ ತಂಡಗಳಿಗು ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ (Mitchell Marsh) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಆಸ್ಟ್ರೇಲಿಯಾ ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದರೆ, ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಇಂದು ಅಖಾಡಕ್ಕಿಳಿಯಲಿದೆ.
ಭಾರತ-ಆಸ್ಟ್ರೇಲಿಯಾ ದಾಖಲೆ
ಸೇಂಟ್ ಲೂಸಿಯಾದಲ್ಲಿ ನಡೆದಿರುವ ಪಂದ್ಯದಲ್ಲಿ ಟೀಂ ಇಂಡಿಯಾ ದಾಖಲೆಗಳಲ್ಲಿ ಮೇಲುಗೈ ಸಾಧಿಸಿದೆ. ಟಿ20 ವಿಶ್ವಕಪ್‌ನಲ್ಲಿ ಭಾರತ ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3 ಬಾರಿ ಗೆಲುವು ಸಾಧಿಸಿದೆ. ಅಂದರೆ ಆಸ್ಟ್ರೇಲಿಯ ಎರಡು ಬಾರಿ ಮಾತ್ರ ಗೆಲ್ಲಲು ಸಾಧ್ಯವಾಗಿದೆ.
India vs Australia T20 WC Live Score: ಟಾಸ್ ಗೆದ್ದ ಆಸ್ಟ್ರೇಲಿಯಾ; ಭಾರತ ಬ್ಯಾಟಿಂಗ್
ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
ಭಾರತದ ಅಜೇಯ ಓಟ
2024ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಇಲ್ಲಿಯವರೆಗೆ ಅಜೇಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಇಡಲು ಪ್ರಯತ್ನಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಗ್ರೂಪ್ 1ರಲ್ಲಿ ಅಗ್ರಸ್ಥಾನಕ್ಕೇರುವ ನಿರೀಕ್ಷೆಯಲ್ಲಿದೆ.
ಆಸ್ಟ್ರೇಲಿಯಾಕ್ಕೆ ಗೆಲುವು ಮುಖ್ಯ
ಆಸ್ಟ್ರೇಲಿಯಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಇಂದು ಭಾರತ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿದರೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಬಹುಮಟ್ಟಿಗೆ ಕಡಿಮೆಯಾಗಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೆ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:41 pm, Mon, 24 June 24