Ind vs Aus Playing XI: 48 ಎಸೆತಗಳ ಪಂದ್ಯ.. ಟಾಸ್ ಗೆದ್ದ ಭಾರತ; ಉಭಯ ತಂಡಗಳ ಪ್ಲೇಯಿಂಗ್ XI

Ind vs Aus Playing XI: ಸಂಜೆ 7 ಗಂಟೆಗೆ ಆರಂಭವಾಗಬೇಕಾದ ಪಂದ್ಯ ಈಗ ರಾತ್ರಿ 9.30ಕ್ಕೆ ಆರಂಭವಾಗಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯವನ್ನು ಕೇವಲ 8 ಓವರ್‌ಗಳಿಗೆ ಸೀಮಿತಗೊಳಿಸಲಾಗಿದೆ.

Ind vs Aus Playing XI: 48 ಎಸೆತಗಳ ಪಂದ್ಯ.. ಟಾಸ್ ಗೆದ್ದ ಭಾರತ; ಉಭಯ ತಂಡಗಳ ಪ್ಲೇಯಿಂಗ್ XI
India Vs Australia
TV9kannada Web Team

| Edited By: pruthvi Shankar

Sep 23, 2022 | 9:36 PM

ಮೊಹಾಲಿಯಲ್ಲಿನ ಮೊದಲ ಟಿ20 ಪಂದ್ಯದ ಸೋಲಿನ ನಂತರ ಟೀಂ ಇಂಡಿಯಾ (Team India) ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಮಬಲ ಸಾಧಿಸಲು ಅಖಾಡಕ್ಕಿಳಿಯುತ್ತಿದೆ. ಸರಣಿಯ ಎರಡನೇ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮೈದಾನ ಒಣಗಿಸುವ ಸಮಸ್ಯೆಯಿಂದ ವಿಳಂಬವಾಗುತ್ತಿರುವ ಈ ಪಂದ್ಯದ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆಸೀಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಸಂಜೆ 7 ಗಂಟೆಗೆ ಆರಂಭವಾಗಬೇಕಾದ ಪಂದ್ಯ ಈಗ ರಾತ್ರಿ 9.30ಕ್ಕೆ ಆರಂಭವಾಗಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯವನ್ನು ಕೇವಲ 8 ಓವರ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಆಡುವ XI ಬಗ್ಗೆ ಮಾತನಾಡುವುದಾದರೆ, ನಿರೀಕ್ಷೆಯ ಪ್ರಕಾರ, ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸದ ನಂತರ ಬುಮ್ರಾ ಯಾವುದೇ ಪಂದ್ಯವನ್ನು ಆಡಿರಲಿಲ್ಲ. ಗಾಯದ ಕಾರಣದಿಂದಾಗಿ ಏಷ್ಯಾಕಪ್​ಗೂ ಅಲಭ್ಯರಾಗಿದ್ದ ಯಾರ್ಕರ್ ಕಿಂಗ್, ಇಂಜುರಿಯಿಂದ ಚೇತರಿಸಿಕೊಂಡು 2ನೇ ಟಿ2o ಪಂದ್ಯದಲ್ಲಿ ಅಖಾಡಕ್ಕಿಳಿಯುತ್ತಿದ್ದಾರೆ.

ಎರಡೂ ತಂಡಗಳಲ್ಲಿ ಬದಲಾವಣೆ

ಪಂದ್ಯ ಕೇವಲ 8 ಓವರ್‌ಗಳಾಗಿರುವ ಕಾರಣ, ಐದು ಪ್ರಮುಖ ಬೌಲರ್‌ಗಳ ಬದಲಿಗೆ 4 ಬೌಲರ್‌ಗಳೊಂದಿಗೆ ಕಣಕ್ಕಿಳಿಯಲು ಟೀಮ್ ಇಂಡಿಯಾ ನಿರ್ಧರಿಸಿದೆ. ಆದ್ದರಿಂದ ಉಮೇಶ್ ಯಾದವ್ ಹೊರತುಪಡಿಸಿ ಭುವನೇಶ್ವರ್ ಕುಮಾರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಭುವಿ ಬದಲಿಗೆ ರಿಷಬ್ ಪಂತ್ ಆಡುವ XI ಗೆ ಸೇರ್ಪಡೆಗೊಂಡಿದ್ದಾರೆ. ಶಾನ್ ಅಬಾಟ್ ಮತ್ತು ಡೇನಿಯಲ್ ಸ್ಯಾಮ್ಸ್, ನಾಥನ್ ಎಲ್ಲಿಸ್ ಮತ್ತು ಜೋಶ್ ಇಂಗ್ಲಿಸ್ ಬದಲಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ತನ್ನ ಶಕ್ತಿ ಪ್ರದರ್ಶಿಸಿದರೂ ಬೌಲರ್‌ಗಳು ನಿರಾಸೆ ಮೂಡಿಸಿದರು. ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅರ್ಧಶತಕ ಸಿಡಿಸಿದ್ದರು. ಈ ಇಬ್ಬರ ಅಬ್ಬರದ ಇನ್ನಿಂಗ್ಸ್​ನಿಂದಾಗಿ ಟೀಂ ಇಂಡಿಯಾ ಆಸೀಸ್​ಗೆ 208 ರನ್ ಟಾರ್ಗೆಟ್ ನೀಡಿತ್ತು. ಇಷ್ಟು ದೊಡ್ಡ ಸ್ಕೋರ್ ಗಳಿಸಿದ ಹೊರತಾಗಿಯೂ ಭಾರತದ ಬೌಲರ್‌ಗಳು ಡಿಫೆಂಡ್ ಮಾಡಲು ವಿಫಲವಾದರು. ಆಸೀಸ್ ಪರ ಕ್ಯಾಮರೂನ್ ಗ್ರೀನ್ ಅವರ ಅರ್ಧಶತಕ ಮತ್ತು ಮ್ಯಾಥ್ಯೂ ವೇಡ್ ಅವರ ಸ್ಫೋಟಕ ಇನ್ನಿಂಗ್ಸ್‌ನ ಆಧಾರದ ಮೇಲೆ ಆಸ್ಟ್ರೇಲಿಯಾ 4 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

ಉಭಯ ತಂಡಗಳ ಪ್ಲೇಯಿಂಗ್ XI

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್.

ಆಸ್ಟ್ರೇಲಿಯಾ: ಆರನ್ ಫಿಂಚ್ (ನಾಯಕ), ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಆಶ್ಟನ್ ಅಗರ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ

Follow us on

Related Stories

Most Read Stories

Click on your DTH Provider to Add TV9 Kannada