4 ಓವರ್​ಗಳಲ್ಲಿ 68 ರನ್! ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ

IND vs AUS, Prasidh Krishna: ಭಾರತದ ಪರ ದುಬಾರಿ ಬೌಲರ್ ಎನಿಸಿಕೊಂಡ ವೇಗಿ ಕೃಷ್ಣಗೆ ಈ ಪಂದ್ಯ ದುಃಸ್ವಪ್ನವಾಗಿತ್ತು. ತಮ್ಮ ಖೋಟಾದ 4 ಓವರ್‌ ಬೌಲ್ ಮಾಡಿದ ಪ್ರಸಿದ್ಧ್ ಯಾವುದೇ ವಿಕೆಟ್ ಪಡೆಯದೆ 68 ರನ್ ನೀಡಿದರು. ಈ ಮೂಲಕ ಕೃಷ್ಣ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ನೀಡಿದ ಬೌಲರ್ ಎಂಬ ಕುಖ್ಯಾತಿಗೆ ತಮ್ಮ ಕೊರಳೊಡ್ಡಿದರು.

4 ಓವರ್​ಗಳಲ್ಲಿ 68 ರನ್! ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಪ್ರಸಿದ್ಧ್ ಕೃಷ್ಣ
Follow us
ಪೃಥ್ವಿಶಂಕರ
|

Updated on: Nov 29, 2023 | 11:02 AM

ಗುವಾಹಟಿಯಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಕಾಂಗರೂ ತಂಡ ಅತ್ಯಂತ ರೋಚಕ ಜಯ ದಾಖಲಿಸಿದೆ. ಆಸ್ಟ್ರೇಲಿಯಾದ ಈ ಅದ್ಭುತ ಗೆಲುವಿನ ಹಿಂದಿನ ದೊಡ್ಡ ಕಾರಣವೆಂದರೆ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅವರ ಸ್ಫೋಟಕ ಶತಕ. ಅದರಲ್ಲೂ ಕೊನೆಯ ಓವರ್‌ನಲ್ಲಿ 23 ರನ್ ಅವಶ್ಯಕತೆ ಇದ್ದಾಗ ಬೌಂಡರಿ, ಸಿಕ್ಸರ್​ಗಳ ಮಳೆಗರೆದ ಗ್ಲೆನ್, ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಆಸ್ಟ್ರೇಲಿಯಾ ಸರಣಿಯನ್ನು ಜೀವಂತವಾಗಿರಿಸಿಕೊಂಡರೆ, ಟೀಂ ಇಂಡಿಯಾ ಸುಲಭವಾಗಿ ಪಂದ್ಯ ಗೆದ್ದು, ಸರಣಿ ಕೈವಶ ಮಾಡಿಕೊಳ್ಳುವ ಅವಕಾಶವನ್ನು ಕೈಚೆಲ್ಲಿತು. ಅದರಲ್ಲೂ ಟೀಂ ಇಂಡಿಯಾ ಪರ ದುಬಾರಿ ಬೌಲರ್ ಎನಿಸಿಕೊಂಡ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು.

ದುಬಾರಿ ಬೌಲರ್ ಪ್ರಸಿದ್ಧ್

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 3 ವಿಕೆಟ್ ಕಳೆದುಕೊಂಡು 222 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪಂದ್ಯದ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿತು. ಕಾಂಗರೂ ತಂಡದ ಪರ ಮ್ಯಾಕ್ಸ್‌ವೆಲ್ 48 ಎಸೆತಗಳಲ್ಲಿ 104 ರನ್ ಗಳಿಸಿ, ಟೀಂ ಇಂಡಿಯಾವನ್ನು ಸೋಲಿನ ದವಡೆಗೆ ತಳ್ಳಿದರು. ಇನ್ನು ಭಾರತದ ಪರ ದುಬಾರಿ ಬೌಲರ್ ಎನಿಸಿಕೊಂಡ ವೇಗಿ ಕೃಷ್ಣಗೆ ಈ ಪಂದ್ಯ ದುಃಸ್ವಪ್ನವಾಗಿತ್ತು. ತಮ್ಮ ಖೋಟಾದ 4 ಓವರ್‌ ಬೌಲ್ ಮಾಡಿದ ಪ್ರಸಿದ್ಧ್ ಯಾವುದೇ ವಿಕೆಟ್ ಪಡೆಯದೆ 68 ರನ್ ನೀಡಿದರು. ಈ ಮೂಲಕ ಕೃಷ್ಣ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ನೀಡಿದ ಬೌಲರ್ ಎಂಬ ಕುಖ್ಯಾತಿಗೆ ತಮ್ಮ ಕೊರಳೊಡ್ಡಿದರು. ಈ ಹಿಂದೆ ಈ ದಾಖಲೆ 4 ಓವರ್‌ಗಳಲ್ಲಿ 64 ರನ್ ನೀಡಿದ್ದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಹೆಸರಿನಲ್ಲಿತ್ತು.

Breaking: 57 ಎಸೆತಗಳಲ್ಲಿ 123 ರನ್..! ಚೊಚ್ಚಲ ಅಂತಾರಾಷ್ಟ್ರೀಯ ಶತಕ ಸಿಡಿಸಿದ ರುತುರಾಜ್

ಶತಕ ಸಿಡಿಸಿದ ರುತುರಾಜ್

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 222 ರನ್ ಗಳಿಸಿತು. ತಂಡದ ಪರ ಗಾಯಕ್ವಾಡ್ 57 ಎಸೆತಗಳಲ್ಲಿ 7 ಸಿಕ್ಸರ್‌ ಮತ್ತು 13 ಬೌಂಡರಿಗಳ ಸಹಿತ 123 ರನ್ ಗಳಿಸಿದರು. ಇವರನ್ನು ಹೊರತುಪಡಿಸಿ ನಾಯಕ ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 39 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ನಂತರ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ ಜೊತೆಗೂಡಿ ತಂಡದ ಮೊತ್ತವನ್ನು 222 ರನ್‌ಗಳಿಗೆ ಕೊಂಡೊಯ್ದರು. ತಿಲಕ್ 24 ಎಸೆತಗಳಲ್ಲಿ 31 ರನ್ ಗಳಿಸಿದರು. ಇವರಿಬ್ಬರ ನಡುವೆ ನಾಲ್ಕನೇ ವಿಕೆಟ್‌ಗೆ 141 ರನ್‌ಗಳ ಜೊತೆಯಾಟವಿತ್ತು. ಆಸ್ಟ್ರೇಲಿಯಾ ಪರ ಕೇನ್ ರಿಚರ್ಡ್‌ಸನ್, ಬೆಹ್ರೆನ್‌ಡಾರ್ಫ್ ಮತ್ತು ಹಾರ್ಡಿ ತಲಾ ಒಂದು ವಿಕೆಟ್ ಪಡೆದರು.

ಮ್ಯಾಕ್ಸ್​ವೆಲ್ ಶತಕ

222 ರನ್‌ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯ ತಂಡ ವೇಗದ ಆರಂಭ ಕಂಡಿತು. ಆದರೆ ತಂಡದ ಮೊತ್ತ 47 ರನ್‌ಗಳಿದ್ದಾಗ ಹಾರ್ಡಿ 16 ರನ್ ಗಳಿಸಿ ಔಟಾದರು. ಇದಾದ ಬಳಿಕ ಟ್ರಾವಿಸ್ ಹೆಡ್ 35 ರನ್ ಹಾಗೂ ಜಾಸ್ ಇಂಗ್ಲಿಷ್ 10 ರನ್​ಗಳ ಇನಿಂಗ್ಸ್ ಆಡಿದರು. ಆ ಬಳಿಕ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ 48 ಎಸೆತಗಳಲ್ಲಿ 104 ರನ್ ಗಳಿಸುವ ಮೂಲಕ ಭಾರತದಿಂದ ಪಂದ್ಯವನ್ನು ಕಸಿದುಕೊಂಡರು. ಇದು ಮ್ಯಾಕ್ಸ್‌ವೆಲ್ ವೃತ್ತಿಜೀವನದ ನಾಲ್ಕನೇ ಟಿ20 ಶತಕವಾಗಿದೆ. ಈ ಮೂಲಕ ಮ್ಯಾಕ್ಸ್‌ವೆಲ್, ರೋಹಿತ್ ಶರ್ಮಾ ಅವರ ಅತಿ ಹೆಚ್ಚು ಟಿ20 ಶತಕಗಳ ದಾಖಲೆಯನ್ನು ಸರಿಗಟ್ಟಿದರು.

ಕೊನೆಯ ಓವರ್​ನಲ್ಲಿ 21 ರನ್

ಮ್ಯಾಥ್ಯೂ ವೇಡ್ ಮತ್ತು ಮ್ಯಾಕ್ಸ್​ವೆಲ್ ಕೊನೆಯ ಓವರ್​ವರೆಗೂ ಪಂದ್ಯದ ರೋಚಕತೆಯನ್ನು ಕಾಯ್ದುಕೊಂಡರು. ಕೊನೆಯ ಓವರ್‌ನಲ್ಲಿ ಆಸ್ಟ್ರೇಲಿಯಾ 21 ರನ್ ಗಳಿಸಬೇಕಿತ್ತು. ಮ್ಯಾಥ್ಯೂ ವೇಡ್ ಮತ್ತು ಮ್ಯಾಕ್ಸ್‌ವೆಲ್ ಸುಲಭವಾಗಿ 21 ರನ್ ಗಳಿಸಿದರು. ವೇಡ್ 16 ಎಸೆತಗಳಲ್ಲಿ 28 ರನ್​ಗಳ ಇನ್ನಿಂಗ್ಸ್ ಆಡಿದರು. ಭಾರತದ ಪರ ರವಿ ಬಿಷ್ಣೋಯ್ ಎರಡು ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ