AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: 57 ಎಸೆತಗಳಲ್ಲಿ 123 ರನ್..! ಚೊಚ್ಚಲ ಅಂತಾರಾಷ್ಟ್ರೀಯ ಶತಕ ಸಿಡಿಸಿದ ರುತುರಾಜ್

IND vs AUS, Ruturaj Gaikwad: ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುಯತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ತಮ್ಮ ಮೊದಲ ಅಂತಾರಾಷ್ಟ್ರೀಯ ಟಿ20 ಶತಕವನ್ನು ಸಿಡಿಸಸಿದ್ದಾರೆ.

Breaking: 57 ಎಸೆತಗಳಲ್ಲಿ 123 ರನ್..! ಚೊಚ್ಚಲ ಅಂತಾರಾಷ್ಟ್ರೀಯ ಶತಕ ಸಿಡಿಸಿದ ರುತುರಾಜ್
ರುತುರಾಜ್ ಗಾಯಕ್ವಾಡ್
ಪೃಥ್ವಿಶಂಕರ
|

Updated on:Nov 28, 2023 | 9:09 PM

Share

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುಯತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj Gaikwad) ತಮ್ಮ ಮೊದಲ ಅಂತಾರಾಷ್ಟ್ರೀಯ ಟಿ20 ಶತಕವನ್ನು ಸಿಡಿಸಸಿದ್ದಾರೆ. ಆರಂಭದಿಂದಲೂ ಆಸೀಸ್ ಬೌಲರ್​ಗಳ ಬೆವರಿಳಿಸಿದ ರುತುರಾಜ್ ಕೇವಲ 52 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ರುತುರಾಜ್ ಅವರ ಸಿಡಿಲಬ್ಬರದ ಶತಕದಿಂದಾಗಿ ಮೂರನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ 200 ರನ್ ಗಡಿ ದಾಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 222 ರನ್ ಗಳಿಸಿದೆ. ತಂಡದ ಪರ ರುತುರಾಜ್ ಗಾಯಕ್ವಾಡ್ 123 ರನ್ ಗಳಿಸಿ ಅಜೇಯರಾಗಿ ಉಳಿದರೆ, ಸೂರ್ಯಕುಮಾರ್ ಯಾದವ್ (Suryakumar Yadav) 39 ರನ್ ಹಾಗೂ ತಿಲಕ್ ವರ್ಮಾ ಕೂಡ 31 ರನ್​ಗಳ ಕೊಡುಗೆ ನೀಡಿದರು.

57 ಎಸೆತಗಳಲ್ಲಿ 123 ರನ್

ಮೇಲೆ ಹೇಳಿದಂತೆ ಆರಂಭದಿಂದಲೂ ಅಬ್ಬರದ ಬ್ಯಾಟಿಂಗ್ ನಡೆಸಿದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಕೇವಲ 51 ಎಸೆತಗಳಲ್ಲಿ 11 ಬೌಂಡರಿ ಮತ್ತು 5 ಸಿಕ್ಸರ್‌ ಸಹಿತ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದಾದ ನಂತರ ತಕ್ಷಣವೇ ಗೇರ್ ಬದಲಾಯಿಸಿದ ರುತುರಾಜ್ ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 57 ಎಸೆತಗಳನ್ನು ಎದುರಿಸಿ 215ರ ಸ್ಟ್ರೈಕ್ ರೇಟ್​ನಲ್ಲಿ 13 ಬೌಂಡರಿ ಮತ್ತು 7 ಸಿಕ್ಸರ್‌ಗಳ ಸಹಾಯದಿಂದ ಅಜೇಯ 123 ರನ್ ಕಲೆಹಾಕಿದರು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಕಳೆದ ಪಂದ್ಯದಂತೆ ಉತ್ತಮ ಆರಂಭ ಸಿಗಲಿಲ್ಲ. ಮೊದಲ 3 ಓವರ್‌ಗಳ ಮಧ್ಯದಲ್ಲಿಯೇ ತಂಡ ಯಶಸ್ವಿ ಜೈಸ್ವಾಲ್ (6) ಮತ್ತು ಇಶಾನ್ ಕಿಶನ್ (0) ಅವರ ವಿಕೆಟ್ ಕಳೆದುಕೊಂಡು ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿತು. ನಂತರ ಗಾಯಕ್ವಾಡ್ ಜೊತೆಯಾದ ನಾಯಕ ಸೂರ್ಯಕುಮಾರ್ ಯಾದವ್ (39 ರನ್) ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಬಳಿಕ ನಾಯಕ ಸೂರ್ಯ ಔಟಾದ ತಕ್ಷಣ ರನ್ ರೇಟ್ ಸುಧಾರಿಸುವ ಜವಾಬ್ದಾರಿಯನ್ನು ಹೊತ್ತ ರುತುರಾಜ್ ಗಾಯಕ್ವಾಡ್, ಕೊನೆಯವರೆಗೂ ಭಾರತದ ಇನ್ನಿಂಗ್ಸ್ ನಿಭಾಯಿಸಿದರು.

ಕೊನೆಯ ಓವರ್​ನಲ್ಲಿ 30 ರನ್

ತಮ್ಮ ಶತಕದ ಬಳಿಕ ಮತ್ತಷ್ಟು ಆಕ್ರಮಣಕಾರಿಯಾದ ರುತುರಾಜ್, ಇನಿಂಗ್ಸ್​ನ 20ನೇ ಅಂದರೆ ಕೊನೆಯ ಓವರ್ ಬೌಲ್ ಮಾಡಲು ಬಂದ ಗ್ಲೆನ್ ಮ್ಯಾಕ್ಸ್​ವೆಲ್​ರನ್ನು ಟಾರ್ಗೆಟ್ ಮಾಡಿದರು. ಈ ಓವರ್‌ನಲ್ಲಿ ರುತುರಾಜ್ ಒಟ್ಟು 30 ರನ್‌ ಕಲೆಹಾಕಿದರು. ಓವರ್​ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಶತಕ ಪೂರೈಸಿದ ರುತುರಾಜ್, ಇದಾದ ತಕ್ಷಣ ಬೌಂಡರಿ ಸಿಕ್ಸರ್​ಗಳ ಮಳೆಗರೆದರು. ಕೊನೆಯ 3 ಎಸೆತಗಳಲ್ಲಿ ರುತುರಾಜ್ ಸತತ 2 ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿದರು.

Published On - 8:54 pm, Tue, 28 November 23

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ