AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಇಂದೋರ್‌ನಲ್ಲಿ 3ನೇ ಏಕದಿನ ಶತಕ ಸಿಡಿಸಿ ಅಬ್ಬರಿಸಿದ ಶ್ರೇಯಸ್ ಅಯ್ಯರ್..!

Shreyas Iyer: ಶ್ರೇಯಸ್ ಅಯ್ಯರ್ ತಮ್ಮ ಇನ್ನಿಂಗ್ಸ್​ನಲ್ಲಿ 86 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 3 ಸಿಕ್ಸರ್ ಬಾರಿಸಿ ಶತಕ ಪೂರೈಸಿದರು. ಇದಲ್ಲದೆ ಶ್ರೇಯಸ್ ಅಯ್ಯರ್ ಮತ್ತು ಶುಭ್​ಮನ್ ಗಿಲ್ ನಡುವೆ ಸುಮಾರು 200 ರನ್‌ಗಳ ಜೊತೆಯಾಟವೂ ಇತ್ತು. ಅಂತಿಮವಾಗಿ 90 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಶ್ರೇಯಸ್ ಅಯ್ಯರ್ 105 ರನ್ ಸಿಡಿಸಿ ಔಟಾದರು.

IND vs AUS: ಇಂದೋರ್‌ನಲ್ಲಿ 3ನೇ ಏಕದಿನ ಶತಕ ಸಿಡಿಸಿ ಅಬ್ಬರಿಸಿದ ಶ್ರೇಯಸ್ ಅಯ್ಯರ್..!
ಶ್ರೇಯಸ್ ಅಯ್ಯರ್
ಪೃಥ್ವಿಶಂಕರ
|

Updated on: Sep 25, 2023 | 6:10 AM

Share

ಇಂದೋರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (India vs Australia) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 99 ರನ್​​ಗಳ ಗೆಲುವು ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ (Team India) 2 ಶತಕ ಹಾಗೂ 2 ಅರ್ಧಶತಕಗಳ ನೆರವಿನಿಂದ 399 ರನ್​ಗಳ ದಾಖಲೆಯ ಮೊತ್ತವನ್ನು ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಡಕ್​ವರ್ತ್​ ಲೂಯಿಸ್ ನಿಯಮದಡಿಯಲ್ಲಿ 99 ರನ್​ಗಳ ಹೀನಾಯ ಸೋಲು ಅನುಭವಿಸಿತು. ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದ ಶ್ರೇಯಸ್ ಅಯ್ಯರ್ (Shreyas Iyer)​ ಸ್ಫೋಟಕ ಶತಕ ಬಾರಿಸಿದ್ದು, ವಿಶ್ವಕಪ್‌ಗೂ ಮುನ್ನ ತಮ್ಮ ಫಾರ್ಮ್‌ ಕಂಡುಕೊಂಡಿದ್ದಾರೆ. ಏಕದಿನ ಮಾದರಿಯಲ್ಲಿ ಶ್ರೇಯಸ್ ಅಯ್ಯರ್ ಅವರ ಈ ಶತಕ ಸುಮಾರು ಒಂದು ವರ್ಷದ ನಂತರ ಬಂದಿದ್ದು, ಇದು ಅವರ ವೃತ್ತಿಜೀವನದ ಮೂರನೇ ಶತಕವಾಗಿದೆ.

ಶ್ರೇಯಸ್ ಅದ್ಭುತ ಇನ್ನಿಂಗ್ಸ್

ಭಾನುವಾರದಂದು, ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಈ ನಿರ್ಧಾರವು ಅವರಿಗೆ ತಪ್ಪು ಎಂದು ಸಾಬೀತಾಯಿತು. ರುತುರಾಜ್ ಗಾಯಕ್ವಾಡ್ ಅವರ ವಿಕೆಟ್ ಬಹುಬೇಗ ಪತನಗೊಂಡರೂ ಶ್ರೇಯಸ್ ಅಯ್ಯರ್ ಕ್ರೀಸ್​ಗೆ ಬಂದ ತಕ್ಷಣ ದೊಡ್ಡ ಹೊಡೆತಗಳನ್ನು ಬಾರಿಸಲಾರಂಭಿಸಿದರು.

IND vs PAK: ರೌಫ್ ರಾಕೆಟ್ ವೇಗಕ್ಕೆ ಮುರಿದ ಶ್ರೇಯಸ್ ಅಯ್ಯರ್ ಬ್ಯಾಟ್! ವಿಡಿಯೋ ನೋಡಿ

ಶ್ರೇಯಸ್ ಅಯ್ಯರ್ ತಮ್ಮ ಇನ್ನಿಂಗ್ಸ್​ನಲ್ಲಿ 86 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 3 ಸಿಕ್ಸರ್ ಬಾರಿಸಿ ಶತಕ ಪೂರೈಸಿದರು. ಇದಲ್ಲದೆ ಶ್ರೇಯಸ್ ಅಯ್ಯರ್ ಮತ್ತು ಶುಭ್​ಮನ್ ಗಿಲ್ ನಡುವೆ ಸುಮಾರು 200 ರನ್‌ಗಳ ಜೊತೆಯಾಟವೂ ಇತ್ತು. ಅಂತಿಮವಾಗಿ 90 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಶ್ರೇಯಸ್ ಅಯ್ಯರ್ 105 ರನ್ ಸಿಡಿಸಿ ಔಟಾದರು.

ವಿಶ್ವಕಪ್‌ಗೂ ಮುನ್ನ ಫಾರ್ಮ್‌

ಶ್ರೇಯಸ್ ಅಯ್ಯರ್ ಫಾರ್ಮ್‌ಗೆ ಬರುತ್ತಿರುವುದು ಟೀಂ ಇಂಡಿಯಾಕ್ಕೆ ಒಂದು ರಿಲೀಫ್ ನ್ಯೂಸ್. ಏಕೆಂದರೆ ಅವರು ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಬ್ಯಾಟ್ಸ್‌ಮನ್ ಆಗಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಶ್ರೇಯಸ್ ಅಯ್ಯರ್ ಅವರ ಈ ಶತಕ ಬಹಳ ಮುಖ್ಯವಾಗಿದೆ. ಗಾಯದ ನಂತರ ತಂಡಕ್ಕೆ ಮರಳುತ್ತಿದ್ದ ಶ್ರೇಯಸ್ ಅಯ್ಯರ್ ಅವರ ಬ್ಯಾಟ್‌ನಿಂದ ಕೊನೆಯ ಏಕದಿನ ಶತಕ ಅಕ್ಟೋಬರ್ 2022 ರಲ್ಲಿ ಬಂದಿತ್ತು

ಶ್ರೇಯಸ್ ಏಕದಿನ ವಿಶ್ವಕಪ್ ತಂಡದಲ್ಲಿದ್ದು, ಟೀಂ ಇಂಡಿಯಾಕ್ಕೆ 4ನೇ ಕ್ರಮಾಂಕದಲ್ಲಿ ಅತ್ಯಂತ ಸೂಕ್ತವಾದ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ. ಆದರೆ ಶ್ರೇಯಸ್ 4ನೇ ಸ್ಥಾನಕ್ಕೆ ಬಂದರೆ, ಸೂರ್ಯಕುಮಾರ್ ಯಾದವ್ ತಂಡದ ಆಡುವ ಹನ್ನೊಂದರ ಬಳಗದಿಂದ ಹೊರಗುಳಿಯಬೇಕಾಗುತ್ತದೆ.

ಶ್ರೇಯಸ್ ಅಯ್ಯರ್ ಏಕದಿನ ಶತಕಗಳು:

113 ರನ್ vs ದಕ್ಷಿಣ ಆಫ್ರಿಕಾ, 9 ಅಕ್ಟೋಬರ್ 2022

103 ರನ್ vs ನ್ಯೂಜಿಲೆಂಡ್, 5 ಫೆಬ್ರವರಿ 2020

105 ರನ್ vsಆಸ್ಟ್ರೇಲಿಯಾ, 24 ಸೆಪ್ಟೆಂಬರ್ 2023

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್