ಬಾರ್ಡರ್-ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿ ಅಂಗವಾಗಿ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಪಂದ್ಯ ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಪೈಕಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ. ಟೀಂ ಇಂಡಿಯಾದಲ್ಲಿ ಇಬ್ಬರು ಆಟಗಾರರು ಚೊಚ್ಚಲ ಪಂದ್ಯವನ್ನಾಡುತ್ತಿದ್ದು, ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಸ್ ಭರತ್ (KS Bharat) ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಆದರೆ ಇದೀಗ ತಂಡದ ಆಯ್ಕೆಯ ಬಗ್ಗೆ ಅಪಸ್ವರ ಎದ್ದಿದ್ದು, ಅದ್ಭುತ ಫಾರ್ಮ್‌ನಲ್ಲಿರುವ ಶುಭ್ಮನ್ ಗಿಲ್ (Shubman Gill) ಅವರನ್ನು ತಂಡದಿಂದ ಕೈಬಿಟ್ಟಿದ್ಯಾಕೆ ಎಂಬ ಪ್ರಶ್ನೆಯನ್ನು ಪರಿಣಿತರು ಕೇಳಲಾರಂಭಿಸಿದ್ದಾರೆ.
ವಾಸ್ತವವಾಗಿ ಶುಭ್ಮನ್ ಗಿಲ್ ಬದಲಿಗೆ ಸೂರ್ಯಕುಮಾರ್ ಯಾದವ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಉತ್ತಮವಾಗಿ ರನ್ ಗಳಿಸುತ್ತಿರುವ ಗಿಲ್ ಅವರನ್ನು ತಂಡದಿಂದ ಕೈಬಿಟ್ಟಿರುವ ಬಗ್ಗೆ ಅಸಮಾದಾನ ಕೇಳಿಬರುತ್ತಿದೆ. ಪ್ರಸ್ತುತ ಸೂಪರ್ ಹಾಟ್ ಫಾರ್ಮ್‌ನಲ್ಲಿರುವ ಗಿಲ್ಗೆ ಆರಂಭಿಕ ಅಥವಾ ಮಧ್ಯಮ ಕ್ರಮಾಂಕದಲ್ಲಿ ಎಲ್ಲಿ ಬೇಕಾದರೂ ಆಡುವ ಸಾಮರ್ಥ್ಯವಿದೆ. ಹಾಗಿದ್ದರೂ ಗಿಲ್ರನ್ನು ತಂಡದಿಂದ ಕೈಬಿಟ್ಟಿದ್ಯಾಕೆ ಎಂಬುದರ ಬಗ್ಗೆ ವಿವರ ಇಲ್ಲಿದೆ.
IND vs AUS: ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ..!
ವಾಸ್ತವವಾಗಿ, ಪಿಚ್‌ನ ಮನಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂರ್ಯಕುಮಾರ್ ಯಾದವ್ ಅವರನ್ನು ಪ್ಲೇಯಿಂಗ್ ಇಲೆವೆನ್‌ಗೆ ಆಯ್ಕೆ ಮಾಡಲಾಗಿದೆ. ಸಹಜವಾಗಿಯೇ ಗಿಲ್ ಅವರ ಫಾರ್ಮ್ ಉತ್ತಮವಾಗಿದೆ. ಆದರೆ, ನಾಥನ್ ಲಿಯಾನ್ ಅವರಂತಹ ಅನುಭವಿ ಸ್ಪಿನ್ನರ್ಗಳ ತಂತ್ರಕ್ಕೆ ಭಂಗ ತರುವ ಶಕ್ತಿ ಸೂರ್ಯಕುಮಾರ್ ಯಾದವ್‌ಗೆ ಇದೆ ಎಂಬುದು ಭಾರತ ತಂಡದ ಆಡಳಿತಕ್ಕೆ ಚೆನ್ನಾಗಿ ಗೊತ್ತಿದೆ. ಆಡುವ ಇಲೆವೆನ್ ಆಯ್ಕೆ ಮಾಡುವಾಗ ಆಟಗಾರನ ಫಾರ್ಮ್‌ಗಿಂತ ಪಿಚ್‌ನ ಮೂಡ್‌ಗೆ ಅನುಗುಣವಾಗಿ ಸ್ಕಿಲ್ಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಇದೇ ಕಾರಣಕ್ಕೆ ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ಗೆ ಅವಕಾಶ ನೀಡಿದ್ದು, ಗಿಲ್ ಅವರನ್ನು ತಂಡದಿಂದ ಹೊರಗಿಡಲಾಗಿದೆ.
ಸೂರ್ಯಕುಮಾರ್ ಹೊರತಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಸ್ ಭರತ್ ಕೂಡ ನಾಗ್ಪುರ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದಾರೆ. ಭರತ್, ಸುದೀರ್ಘ ಕಾಲದಿಂದ ಟೆಸ್ಟ್ ತಂಡದಲ್ಲಿದ್ದರೂ ಆಡಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಅವರಿಗೆ ತಕ್ಕ ಅವಕಾಶ ಸಿಕ್ಕಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:53 am, Thu, 9 February 23