ಈ ಸಂಭ್ರಮ ಬೇಕಿತ್ತಾ? ಟೀಂ ಇಂಡಿಯಾ ಆಟಗಾರರ ಕೇಕ್ ಪಾರ್ಟಿಗೆ ಕಿಡಿಕಾರಿದ ಫ್ಯಾನ್ಸ್..!

IND vs AUS: ಗೆಲುವಿನ ಬಳಿಕ ಟೀಂ ಇಂಡಿಯಾ ಆಟಗಾರರು ಮಾಡಿದ ಸಂಭ್ರಮಾಚರಣೆ ಅಭಿಮಾನಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಅಲ್ಲದೆ ನೆಟ್ಟಿಗರು ಕೂಡ ಬಿಸಿಸಿಐ ಅನ್ನು ಟ್ರೋಲ್ ಮಾಡುತ್ತಿದ್ದು, ಆಟಗಾರರ ಈ ಸಂಭ್ರಮಾಚರಣೆಯ ಅವಶ್ಯಕತೆ ಏನಿತ್ತು? ಎಂಬ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಈ ಸಂಭ್ರಮ ಬೇಕಿತ್ತಾ? ಟೀಂ ಇಂಡಿಯಾ ಆಟಗಾರರ ಕೇಕ್ ಪಾರ್ಟಿಗೆ ಕಿಡಿಕಾರಿದ ಫ್ಯಾನ್ಸ್..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Nov 24, 2023 | 5:04 PM

2023ರ ವಿಶ್ವಕಪ್‌ನ (ODI World Cup 2023) ಫೈನಲ್‌ನಲ್ಲಿ ಸೋತ ನಂತರ ಟೀಂ ಇಂಡಿಯಾ ಮತ್ತೊಮ್ಮೆ ಆಸ್ಟ್ರೇಲಿಯಾ (India vs Australia) ವಿರುದ್ಧ ಮೈದಾನಕ್ಕಿಳಿದಿದೆ. ನಿನ್ನೆಯಿಂದ ಆರಂಭವಾಗಿರುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್‌ಗಳ ಜಯ ಸಾಧಿಸಿದೆ. ಆದರೆ, ಗೆಲುವಿನ ಬಳಿಕ ಟೀಂ ಇಂಡಿಯಾ (Team India) ಆಟಗಾರರು ಮಾಡಿದ ಸಂಭ್ರಮಾಚರಣೆ ಅಭಿಮಾನಿಗಳನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಅಲ್ಲದೆ ನೆಟ್ಟಿಗರು ಕೂಡ ಬಿಸಿಸಿಐ ಅನ್ನು ಟ್ರೋಲ್ ಮಾಡುತ್ತಿದ್ದು, ಆಟಗಾರರ ಈ ಸಂಭ್ರಮಾಚರಣೆಯ ಅವಶ್ಯಕತೆ ಏನಿತ್ತು? ಎಂಬ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ವಾಸ್ತವವಾಗಿ ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದ ನಂತರ ಹೋಟೆಲ್​ಗೆ ತೆರಳಿದ ಟೀಂ ಇಂಡಿಯಾ ಆಟಗಾರರು ಹೋಟೆಲ್‌ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದರು. ಈ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿತ್ತು. ಈ ವಿಡಿಯೋವನ್ನು ನೋಡಿದ ಅಭಿಮಾನಿಗಳನ್ನು ಟೀಂ ಇಂಡಿಯಾದ ಈ ಕೇಕ್ ಪಾರ್ಟಿ ಕೆರಳಿಸಿದೆ.

ಈ ಸಂಭ್ರಮದ ಅವಶ್ಯಕತೆ ಏನಿತ್ತು

ಪಂದ್ಯದ ನಂತರ ಹೋಟೆಲ್​ನಲ್ಲಿ ರಿಂಕು ಸಿಂಗ್ ಮತ್ತು ಮುಖೇಶ್ ಕುಮಾರ್ ಕೇಕ್ ಕತ್ತರಿಸಿದ್ದಾರೆ. ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ವಿಶ್ವಕಪ್​ನಂತಹ ಅತ್ಯಂತ ಪ್ರಮುಖ ಪಂದ್ಯವನ್ನೇ ಸೋತಿರುವ ಟೀಂ ಇಂಡಿಯಾ, ಇಂತಹ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಕೇಕ್ ಕಟ್ ಮಾಡಿ ಸಂಭ್ರಮಿಸಿದೆ. ಈ ಸಂಭ್ರಮದ ಅವಶ್ಯಕತೆ ಏನಿತ್ತು ಎಂದು ಜನರು ಬಿಸಿಸಿಐ ಮೇಲೆ ಪ್ರಶ್ನೆಗಳನ್ನು ಸಹ ಎತ್ತಿದ್ದಾರೆ.

ಮೊದಲ ಟಿ20 ಗೆದ್ದ ಭಾರತ

ಇನ್ನು ಮೊದಲ ಟಿ20 ಪಂದ್ಯದ ಬಗ್ಗೆ ಮಾತನಾಡುವುದಾದರೆ, ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 208 ರನ್‌ಗಳ ಬೃಹತ್ ಸ್ಕೋರ್ ಮಾಡಿತು. ತಂಡದ ಪರ ಜೋಶ್ ಇಂಗ್ಲಿಸ್ 50 ಎಸೆತಗಳಲ್ಲಿ 110 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಸ್ಟೀವ್ ಸ್ಮಿತ್ ಕೂಡ 52 ರನ್​ಗಳ ಕೊಡುಗೆ ನೀಡಿದರು. ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರುತುರಾಜ್ ಶೂನ್ಯ ಸುತ್ತಿದರೆ, ಜೈಸ್ವಾಲ್ 8 ಎಸೆತಗಳಲ್ಲಿ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಇಶಾನ್ ಕಿಶನ್ 39 ಎಸೆತಗಳಲ್ಲಿ 58 ರನ್ ಗಳಿಸಿದರೆ, ನಾಯಕ ಸೂರ್ಯಕುಮಾರ್ ಯಾದವ್ 42 ಎಸೆತಗಳಲ್ಲಿ 80 ರನ್ ಕಲೆಹಾಕಿದರು. ಕೊನೆಯಲ್ಲಿ ರಿಂಕು ಸಿಂಗ್ ಮ್ಯಾಚ್ ಫಿನಿಶರ್ ಆಗಿ ಅದ್ಭುತ ಪಾತ್ರ ವಹಿಸಿದರು. ಈ ಎಡಗೈ ಬ್ಯಾಟ್ಸ್‌ಮನ್ 14 ಎಸೆತಗಳಲ್ಲಿ ಅಜೇಯ 22 ರನ್ ಸಿಡಿಸಿ ಅಜೇಯರಾಗಿ ಮರಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:02 pm, Fri, 24 November 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್