AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದಲ್ಲಿ 9ನೇ ಗೆಲುವು; ಆಸೀಸ್ ವಿರುದ್ಧ ಐತಿಹಾಸಿಕ ದಾಖಲೆ ಬರೆದ ಭಾರತ..!

IND vs AUS: ಟೀಂ ಇಂಡಿಯಾ 2023 ರಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಇದುವರೆಗೆ 17 ಪಂದ್ಯಗಳನ್ನು ಆಡಿದೆ. ಈ ಪೈಕಿ 9 ಪಂದ್ಯಗಳನ್ನು ಗೆದ್ದಿರುವ ಭಾರತ ಒಂದು ವರ್ಷದಲ್ಲಿ ಆಸ್ಟ್ರೇಲಿಯಾವನ್ನು ಅತಿ ಹೆಚ್ಚು ಪಂದ್ಯಗಳಲ್ಲಿ ಸೋಲಿಸಿದ ದಾಖಲೆಯನ್ನು ನಿರ್ಮಿಸಿದೆ.

ವರ್ಷದಲ್ಲಿ 9ನೇ ಗೆಲುವು; ಆಸೀಸ್ ವಿರುದ್ಧ ಐತಿಹಾಸಿಕ ದಾಖಲೆ ಬರೆದ ಭಾರತ..!
ಭಾರತ- ಆಸ್ಟ್ರೇಲಿಯಾ
ಪೃಥ್ವಿಶಂಕರ
|

Updated on: Dec 02, 2023 | 10:18 AM

Share

ಟೀಂ ಇಂಡಿಯಾ (Team India) ಈ ವರ್ಷ ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದೆ. 2023 ರ ವಿಶ್ವಕಪ್‌ನ (ICC World Cup 2023) ಫೈನಲ್‌ನಲ್ಲಿನ ಸೋಲನ್ನು ಹೊರತುಪಡಿಸಿ, ಟೀಂ ಇಂಡಿಯಾ ಈ ವರ್ಷ ಆಸ್ಟ್ರೇಲಿಯಾದ (India vs Australia) ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಸದ್ಯ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯಲ್ಲೂ ಟೀಂ ಇಂಡಿಯಾ 3-1 ಅಂತರದ ಮುನ್ನಡೆ ಸಾಧಿಸಿದೆ. ಸರಣಿಯ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡುವ ಹೊಸ್ತಿಲಿನಲ್ಲಿದೆ.

ಭಾರತದ ಐತಿಹಾಸಿಕ ಸಾಧನೆ

ಟೀಂ ಇಂಡಿಯಾ 2023 ರಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಇದುವರೆಗೆ 17 ಪಂದ್ಯಗಳನ್ನು ಆಡಿದೆ. ಈ ಪೈಕಿ 9 ಪಂದ್ಯಗಳನ್ನು ಗೆದ್ದಿರುವ ಭಾರತ ಒಂದು ವರ್ಷದಲ್ಲಿ ಆಸ್ಟ್ರೇಲಿಯಾವನ್ನು ಅತಿ ಹೆಚ್ಚು ಪಂದ್ಯಗಳಲ್ಲಿ ಸೋಲಿಸಿದ ದಾಖಲೆಯನ್ನು ನಿರ್ಮಿಸಿದೆ. ಇದಕ್ಕೂ ಮೊದಲು 2013ರಲ್ಲಿ ಟೀಂ ಇಂಡಿಯಾ 8 ಬಾರಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಹಾಗೆಯೇ 2017 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 7 ಪಂದ್ಯಗಳನ್ನು ಗೆದ್ದಿತ್ತು.

IND vs AUS 5th T20I: ಭಾರತ-ಆಸ್ಟ್ರೇಲಿಯಾ ಐದನೇ ಟಿ20 ಬೆಂಗಳೂರಿನಲ್ಲಿ: ಪಂದ್ಯ ಯಾವಾಗ?, ಇಲ್ಲಿದೆ ಮಾಹಿತಿ

ಮೂರೂ ಮಾದರಿಯಲ್ಲಿ ಭಾರತದ ಪ್ರದರ್ಶನ ಹೀಗಿತ್ತು

ಈ ವರ್ಷ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಒಟ್ಟು 5 ಟೆಸ್ಟ್ ಪಂದ್ಯಗಳು ನಡೆದಿವೆ. ಈ ಪೈಕಿ 2 ಟೆಸ್ಟ್ ಪಂದ್ಯಗಳನ್ನು ಭಾರತ ಗೆದ್ದಿದ್ದು, 2ರಲ್ಲಿ ಮಾತ್ರ ಆಸ್ಟ್ರೇಲಿಯಾ ಗೆದ್ದಿದೆ. ಉಳಿದಂತೆ 1 ಪಂದ್ಯ ಡ್ರಾ ಆಗಿತ್ತು. ಏಕದಿನ ಪಂದ್ಯದ ಬಗ್ಗೆ ಮಾತನಾಡುವುದಾದರೆ, ಈ ವರ್ಷ ಎರಡೂ ತಂಡಗಳು 8 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ವಿಶೇಷವೆಂದರೆ ಉಭಯ ತಂಡಗಳು ತಲಾ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಅದೇ ಸಮಯದಲ್ಲಿ, ಈ ವರ್ಷ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 4 ಟಿ20 ಪಂದ್ಯಗಳು ನಡೆದಿವೆ. ಈ ಪೈಕಿ ಟೀಂ ಇಂಡಿಯಾ 3ರಲ್ಲಿ ಗೆದ್ದಿದ್ದು, ಆಸ್ಟ್ರೇಲಿಯಾ 1 ಪಂದ್ಯವನ್ನಷ್ಟೇ ಗೆಲ್ಲಲು ಶಕ್ತವಾಗಿದೆ.

ವರ್ಷದಲ್ಲಿ ಆಸೀಸ್ ವಿರುದ್ಧ ಭಾರತದ ಗೆಲುವಿನ ಸಾಧನೆ

  • 2023 ರಲ್ಲಿ 9 ಪಂದ್ಯಗಳಲ್ಲಿ ಗೆಲುವು (ಇನ್ನೊಂದು ಪಂದ್ಯ ಬಾಕಿ ಇದೆ)
  • 2013 ರಲ್ಲಿ 8 ಪಂದ್ಯಗಳಲ್ಲಿ ಗೆಲುವು
  • 2017 ರಲ್ಲಿ 7 ಪಂದ್ಯಗಳಲ್ಲಿ ಗೆಲುವು
  • 1998 ರಲ್ಲಿ 6 ಪಂದ್ಯಗಳಲ್ಲಿ ಗೆಲುವು
  • 2008 ರಲ್ಲಿ 6 ಪಂದ್ಯಗಳಲ್ಲಿ ಗೆಲುವು
  • 2020 ರಲ್ಲಿ 6 ಪಂದ್ಯಗಳಲ್ಲಿ ಗೆಲುವು

ಈ ದಾಖಲೆ ಸರಿಗಟ್ಟುವ ಅವಕಾಶ

ಉಭಯ ತಂಡಗಳ ನಡುವಿನ ಸರಣಿಯ ಐದನೇ ಮತ್ತು ಕೊನೆಯ ಪಂದ್ಯ ಡಿಸೆಂಬರ್ 3 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಒಂದು ವರ್ಷದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತನ್ನ ಸ್ವಂತ ದಾಖಲೆಯನ್ನು ಸರಿಗಟ್ಟುತ್ತದೆ. ಇದಕ್ಕೂ ಮುನ್ನ ಟೀಂ ಇಂಡಿಯಾ 2016ರಲ್ಲಿ 4 ಟಿ20 ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್