ಟೀಂ ಇಂಡಿಯಾ (Team India) ಈ ವರ್ಷ ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದೆ. 2023 ರ ವಿಶ್ವಕಪ್‌ನ (ICC World Cup 2023) ಫೈನಲ್‌ನಲ್ಲಿನ ಸೋಲನ್ನು ಹೊರತುಪಡಿಸಿ, ಟೀಂ ಇಂಡಿಯಾ ಈ ವರ್ಷ ಆಸ್ಟ್ರೇಲಿಯಾದ (India vs Australia) ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಸದ್ಯ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯಲ್ಲೂ ಟೀಂ ಇಂಡಿಯಾ 3-1 ಅಂತರದ ಮುನ್ನಡೆ ಸಾಧಿಸಿದೆ. ಸರಣಿಯ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡುವ ಹೊಸ್ತಿಲಿನಲ್ಲಿದೆ.
ಟೀಂ ಇಂಡಿಯಾ 2023 ರಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಇದುವರೆಗೆ 17 ಪಂದ್ಯಗಳನ್ನು ಆಡಿದೆ. ಈ ಪೈಕಿ 9 ಪಂದ್ಯಗಳನ್ನು ಗೆದ್ದಿರುವ ಭಾರತ ಒಂದು ವರ್ಷದಲ್ಲಿ ಆಸ್ಟ್ರೇಲಿಯಾವನ್ನು ಅತಿ ಹೆಚ್ಚು ಪಂದ್ಯಗಳಲ್ಲಿ ಸೋಲಿಸಿದ ದಾಖಲೆಯನ್ನು ನಿರ್ಮಿಸಿದೆ. ಇದಕ್ಕೂ ಮೊದಲು 2013ರಲ್ಲಿ ಟೀಂ ಇಂಡಿಯಾ 8 ಬಾರಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಹಾಗೆಯೇ 2017 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 7 ಪಂದ್ಯಗಳನ್ನು ಗೆದ್ದಿತ್ತು.
IND vs AUS 5th T20I: ಭಾರತ-ಆಸ್ಟ್ರೇಲಿಯಾ ಐದನೇ ಟಿ20 ಬೆಂಗಳೂರಿನಲ್ಲಿ: ಪಂದ್ಯ ಯಾವಾಗ?, ಇಲ್ಲಿದೆ ಮಾಹಿತಿ
ಈ ವರ್ಷ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಒಟ್ಟು 5 ಟೆಸ್ಟ್ ಪಂದ್ಯಗಳು ನಡೆದಿವೆ. ಈ ಪೈಕಿ 2 ಟೆಸ್ಟ್ ಪಂದ್ಯಗಳನ್ನು ಭಾರತ ಗೆದ್ದಿದ್ದು, 2ರಲ್ಲಿ ಮಾತ್ರ ಆಸ್ಟ್ರೇಲಿಯಾ ಗೆದ್ದಿದೆ. ಉಳಿದಂತೆ 1 ಪಂದ್ಯ ಡ್ರಾ ಆಗಿತ್ತು. ಏಕದಿನ ಪಂದ್ಯದ ಬಗ್ಗೆ ಮಾತನಾಡುವುದಾದರೆ, ಈ ವರ್ಷ ಎರಡೂ ತಂಡಗಳು 8 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ವಿಶೇಷವೆಂದರೆ ಉಭಯ ತಂಡಗಳು ತಲಾ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಅದೇ ಸಮಯದಲ್ಲಿ, ಈ ವರ್ಷ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 4 ಟಿ20 ಪಂದ್ಯಗಳು ನಡೆದಿವೆ. ಈ ಪೈಕಿ ಟೀಂ ಇಂಡಿಯಾ 3ರಲ್ಲಿ ಗೆದ್ದಿದ್ದು, ಆಸ್ಟ್ರೇಲಿಯಾ 1 ಪಂದ್ಯವನ್ನಷ್ಟೇ ಗೆಲ್ಲಲು ಶಕ್ತವಾಗಿದೆ.
ಉಭಯ ತಂಡಗಳ ನಡುವಿನ ಸರಣಿಯ ಐದನೇ ಮತ್ತು ಕೊನೆಯ ಪಂದ್ಯ ಡಿಸೆಂಬರ್ 3 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಒಂದು ವರ್ಷದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತನ್ನ ಸ್ವಂತ ದಾಖಲೆಯನ್ನು ಸರಿಗಟ್ಟುತ್ತದೆ. ಇದಕ್ಕೂ ಮುನ್ನ ಟೀಂ ಇಂಡಿಯಾ 2016ರಲ್ಲಿ 4 ಟಿ20 ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ