20 ವರ್ಷಗಳ ನಂತರ ಭಾರತ- ಆಸೀಸ್ ಫೈನಲ್ ಫೈಟ್; ಲೆಕ್ಕ ಚುಕ್ತಾ ಮಾಡುವ ತವಕದಲ್ಲಿ ಟೀಂ ಇಂಡಿಯಾ!

|

Updated on: Nov 17, 2023 | 8:25 AM

IND vs AUS, ICC World Cup 2023: ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಫೈನಲ್ ಪಂದ್ಯದಲ್ಲಿ ಅಜೇಯ ಟೀಂ ಇಂಡಿಯಾವನ್ನು ಎದುರಿಸಿಲಿದೆ. ಉಭಯ ತಂಡಗಳ ಈ ಫೈನಲ್ ಕಾಳಗ ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಟೀಂ ಇಂಡಿಯಾ ತನ್ನ 20 ವರ್ಷಗಳ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

20 ವರ್ಷಗಳ ನಂತರ ಭಾರತ- ಆಸೀಸ್ ಫೈನಲ್ ಫೈಟ್; ಲೆಕ್ಕ ಚುಕ್ತಾ ಮಾಡುವ ತವಕದಲ್ಲಿ ಟೀಂ ಇಂಡಿಯಾ!
ಭಾರತ- ಆಸ್ಟ್ರೇಲಿಯಾ
Follow us on

2023ರ ವಿಶ್ವಕಪ್‌ನ (ICC World Cup 2023) ಎರಡನೇ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ (South Africa vs Australia) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಫೈನಲ್ ಪಂದ್ಯದಲ್ಲಿ ಅಜೇಯ ಟೀಂ ಇಂಡಿಯಾವನ್ನು (India vs Australia) ಎದುರಿಸಿಲಿದೆ. ಉಭಯ ತಂಡಗಳ ಈ ಫೈನಲ್ ಕಾಳಗ ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಟೀಂ ಇಂಡಿಯಾ ತನ್ನ 20 ವರ್ಷಗಳ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

20 ವರ್ಷಗಳ ಹಿಂದಿನ ಸೋಲು

ವಾಸ್ತವವಾಗಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 2003 ರ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾವನ್ನು 125 ರನ್‌ಗಳ ಸೋಲಿಸಿದ ಆಸ್ಟ್ರೇಲಿಯಾ ತಂಡ ಚಾಂಪಿಯನ್​ ಪಟ್ಟಕ್ಕೇರಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಭಾರತಕ್ಕೆ ಗೆಲುವಿಗೆ 360 ರನ್​ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ದೊಡ್ಡ ಗುರಿ ಬೆನ್ನತ್ತಲು ಬಂದ ಟೀಂ ಇಂಡಿಯಾದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ವೀರೇಂದ್ರ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಡೀ ಭಾರತ ತಂಡ 234 ರನ್‌ಗಳಿಗೆ ಆಲೌಟ್ ಆಯಿತು. ಇದೀಗ ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಟೀಂ ಇಂಡಿಯಾಕ್ಕಿದೆ. ಪ್ರಸ್ತುತ ರೋಹಿತ್ ಪಡೆ ಇರುವ ಫಾರ್ಮ್​ ನೋಡಿದರೆ ಕಾಂಗರೂಗಳಿಗೆ ಸೋಲು ಖಚಿತ ಎಂಬುದು ಪಕ್ಕಾ ಆಗಿದೆ.

ಚೋಕರ್ಸ್​ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡ ಆಪ್ರಿಕಾ; ಭಾರತ- ಆಸ್ಟ್ರೇಲಿಯಾ ನಡುವೆ ಫೈನಲ್ ಫೈಟ್..!

ಭಾರತ- ಆಸ್ಟ್ರೇಲಿಯಾ ನಡುವೆ ಫೈನಲ್ ಫೈಟ್

ವಿಶ್ವಕಪ್ 2023 ರಲ್ಲಿ 47 ಪಂದ್ಯಗಳನ್ನು ಆಡಿದ ನಂತರ, 2 ಫೈನಲಿಸ್ಟ್ ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಭಾರತ ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ಸಹ ಸತತ 8 ಪಂದ್ಯಗಳನ್ನು ಗೆದ್ದಿದೆ. ಈ ಎರಡು ತಂಡಗಳು 20 ವರ್ಷಗಳ ಬಳಿಕ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಎರಡೂ ತಂಡಗಳು 2003ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದು, ಭಾರತ ಸೋಲನ್ನು ಎದುರಿಸಬೇಕಾಯಿತು. ಹೀಗಿರುವಾಗ ಈ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತ ಈ ಬಾರಿ ಕಣಕ್ಕಿಳಿಯಲಿದೆ.

ದಕ್ಷಿಣ ಆಫ್ರಿಕಾಗೆ ಸೋಲು

2023ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 49.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಸ್ಟಾರ್ಕ್ ಹಾಗೂ ನಾಯಕ ಕಮಿನ್ಸ್ ತಲಾ 3 ವಿಕೆಟ್ ಪಡೆದರು. 213 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ತಂಡ 7 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ